Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ರನ್​ಗಳಿಂದ ಟೀಮ್ ಇಂಡಿಯಾ ಕೈ ತಪ್ಪಿದ ವಿಶ್ವ ದಾಖಲೆ

India vs Bangladesh, 3rd T20I: ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 297 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ 20 ಓವರ್​ಗಳಲ್ಲಿ 164 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 133 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Oct 13, 2024 | 7:17 AM

ಬಾಂಗ್ಲಾದೇಶ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು ರನ್ ಸುರಿಮಳೆಗೈದಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

1 / 7
ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 4 ರನ್​ಗಳಿಸಿ ಔಟಾಗಿದ್ದರು. ಆದರೆ ಈ ಆರಂಭಿಕ ಆಘಾತದಿಂದ ಟೀಮ್ ಇಂಡಿಯಾ ಕೆಲವೇ ಕ್ಷಣಗಳಲ್ಲಿ ಹೊರಬಂದಿದ್ದರು. ಏಕೆಂದರೆ 2ನೇ ವಿಕೆಟ್​ಗೆ ಜೊತೆಗೂಡಿದ ಸಂಜು ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 7
ಬಾಂಗ್ಲಾ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಈ ಜೋಡಿಯು 2ನೇ ವಿಕೆಟ್​ಗೆ 173 ರನ್​ಗಳ ಜೊತೆಯಾಟವಾಡಿದರು. ಇದರ ನಡುವೆ ಸಂಜು ಸ್ಯಾಮ್ಸನ್ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 47 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 111 ರನ್ ಬಾರಿಸಿ ಔಟಾದರು.

3 / 7
ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 75 ರನ್​ ಬಾರಿಸಿದರು. ಆ ಬಳಿಕ ಬಂದ ರಿಯಾನ್ ಪರಾಗ್ 34 ರನ್​ ಕಲೆಹಾಕಿದರೆ, ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 47 ರನ್ ಚಚ್ಚಿದರು.

4 / 7
ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 297 ರನ್ ಕಲೆಹಾಕಿತು. ಇದು ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ ಎಂಬುದು ವಿಶೇಷ. ಇದಾಗ್ಯೂ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾದ ಕೈ ತಪ್ಪಿದೆ.

5 / 7
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನೇಪಾಳ ತಂಡದ ಹೆಸರಿನಲ್ಲಿದೆ. 2023 ರಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 314 ರನ್ ಕಲೆಹಾಕಿ ಈ ವಿಶ್ವ ದಾಖಲೆ ನಿರ್ಮಿಸಿದೆ.

6 / 7
ಈ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದ ಟೀಮ್ ಇಂಡಿಯಾ ಅಂತಿಮ ಓವರ್​ಗಳ ವೇಳೆ ವಿಕೆಟ್ ಕೈಚೆಲ್ಲುವ ಮೂಲಕ ತಪ್ಪು ಮಾಡಿತು. ಪರಿಣಾಮ ಕೇವಲ 17 ರನ್​ಗಳ ಅಂತರದಿಂದ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ ಗಳಿಸಿದ ವಿಶ್ವ ದಾಖಲೆ ಬರೆಯುವ ಅವಕಾಶವನ್ನು ಟೀಮ್ ಇಂಡಿಯಾದ ಕೈ ಚೆಲ್ಲಿಕೊಂಡಿತು.

7 / 7
Follow us
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್

ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್

ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!

ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್