AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India New Jersey: ಹೊಸ ಜೆರ್ಸಿಯಲ್ಲಿ ಮಿಂಚಿದ ಟೀಮ್ ಇಂಡಿಯಾ ಆಟಗಾರರು..!

Team India New Jersey: ಎಂಪಿಎಲ್ ಕಂಪೆನಿಯು ಭಾರತ ತಂಡ ಕಿಟ್ ಪ್ರಾಯೋಜಕರಾಗಿದ್ದರು. ಆದರೆ ಇತ್ತೀಚೆಗೆ ಎಂಪಿಎಲ್​ ಪ್ರಾಯೋಜಕತ್ವ ಮುಕ್ತಾಯಗೊಂಡ ಹಿನ್ನಲೆ ಕಿಲ್ಲರ್ ಕಂಪೆನಿಗೆ ತಾತ್ಕಾಲಿಕ ಪ್ರಾಯೋಜಕತ್ವ ನೀಡಲಾಗಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on:Jun 03, 2023 | 6:37 PM

Share
Team India New Jersey: ಟೀಮ್ ಇಂಡಿಯಾದ ನೂತನ ಜೆರ್ಸಿ ಬಿಡುಗಡೆಯಾಗಿದೆ. ಅಡಿಡಾಸ್ ಕಂಪೆನಿಯ ಪ್ರಾಯೋಜಕತ್ವದಲ್ಲಿ ಮೂಡಿ ಬಂದಿರುವ ಹೊಸ ಜೆರ್ಸಿಯಲ್ಲಿ ಭಾರತೀಯ ಆಟಗಾರರು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

1 / 11
ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್ ಈ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 11
ಇನ್ನು ಮಹಿಳಾ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಹಾಗೂ ಸ್ಮೃತಿ ಮಂಧಾನ ಸಹ ಹೊಸ ಜೆರ್ಸಿಯಲ್ಲಿ ಮಿಂಚಿದ್ದಾರೆ.

3 / 11
ಅದರಂತೆ ಇನ್ಮುಂದೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿ ಕಂಡು ಬರಲಿದೆ.

4 / 11
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

5 / 11
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

6 / 11
ಇದಕ್ಕೂ ಮುನ್ನ ಎಂಪಿಎಲ್ ಕಂಪೆನಿಯು ಭಾರತ ತಂಡದ ಕಿಟ್ ಪ್ರಾಯೋಜಕರಾಗಿದ್ದರು. ಆದರೆ ಇತ್ತೀಚೆಗೆ ಎಂಪಿಎಲ್​ ಪ್ರಾಯೋಜಕತ್ವ ಮುಕ್ತಾಯಗೊಂಡ ಹಿನ್ನಲೆ ಕಿಲ್ಲರ್ ಕಂಪೆನಿಗೆ ತಾತ್ಕಾಲಿಕ ಪ್ರಾಯೋಜಕತ್ವ ವಹಿಸಿಕೊಂಡಿತ್ತು.

7 / 11
ಇದೀಗ ಜೂನ್ 1 ರಿಂದ ಟೀಮ್ ಇಂಡಿಯಾದ ಕಿಟ್ ಪ್ರಾಯೋಜಕರಾಗಿ ಅಡಿಡಾಸ್ ಕಂಪೆನಿ ಹೊಸ ಹೆಜ್ಜೆಯನ್ನಿಟ್ಟಿದೆ.

8 / 11
ಅದರ ಮೊದಲ ಭಾಗವಾಗಿ ಇದೀಗ ಮೂರು ಮಾದರಿಯ ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಲಾಗಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ಏಕದಿನ ತಂಡದ ಜೆರ್ಸಿ ಬದಲಾಗಲಿದೆ.

9 / 11
ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

10 / 11
ಹೊಸ ಜೆರ್ಸಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ

11 / 11

Published On - 6:29 pm, Sat, 3 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ