ಪ್ರಮುಖ ವೇಗಿ ಗಾಯಾಳು: ಹೊಸ ವರ್ಷದ ಮೊದಲ ಪಂದ್ಯಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಸರಣಿಯಲ್ಲಿ ನಾಲ್ಕು ಮ್ಯಾಚ್​ಗಳು ಮುಗಿದಿದೆ. ಈ 4 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ 2 ಜಯ ಸಾಧಿಸಿದರೆ, ಟೀಮ್ ಇಂಡಿಯಾ ಗೆದ್ದಿರುವುದು ಒಂದು ಮ್ಯಾಚ್ ಮಾತ್ರ. ಇನ್ನು ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದೀಗ ಉಭಯ ತಂಡಗಳು 5ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದು, ಈ ಮ್ಯಾಚ್ ಡಿಸೆಂಬರ್ 3 ರಿಂದ ಶುರುವಾಗಲಿದೆ.

ಝಾಹಿರ್ ಯೂಸುಫ್
|

Updated on: Jan 02, 2025 | 7:52 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಸಿಡ್ನಿಯಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಮ್ಯಾಚ್​ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಆದರೆ ಈ ಪಂದ್ಯಕ್ಕೆ ಭಾರತ ತಂಡದ ಟೀಮ್ ಪ್ರಮುಖ ವೇಗಿ ಆಕಾಶ್ ದೀಪ್ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

1 / 6
ಏಕೆಂದರೆ ಮೆಲ್ಬೋರ್ನ್​ ಟೆಸ್ಟ್ ಪಂದ್ಯದ ವೇಳೆ ಆಕಾಶ್ ದೀಪ್ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಇದೀಗ ಆಕಾಶ್ ದೀಪ್ ಅಲಭ್ಯರಾದರೆ ಟೀಮ್ ಇಂಡಿಯಾ ಅನುಭವಿ ವೇಗಿಯ ಕೊರತೆಯನ್ನು ಎದುರಿಸಲಿದೆ.

2 / 6
ಈ ಹಿಂದಿನ ನಾಲ್ಕು ಪಂದ್ಯಗಳಲ್ಲಿ ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಉತ್ತಮ ದಾಳಿ ಸಂಘಟಿಸಿದರೂ, ಮೂರನೇ ವೇಗಿಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಆಕಾಶ್ ದೀಪ್ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದ್ದರು. ಆದರೆ ನಿರ್ಣಾಯಕ ಪಂದ್ಯಕ್ಕೂ ಅವರು ಅಲಭ್ಯರಾದರೆ, ಟೀಮ್ ಇಂಡಿಯಾ ಮತ್ತೆ ಯುವ ವೇಗಿಯನ್ನು ಕಣಕ್ಕಿಳಿಸಬೇಕಾಗುತ್ತದೆ.

3 / 6
ಅದರಂತೆ ಪರ್ತ್​ ಟೆಸ್ಟ್​​ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹರ್ಷಿತ್ ರಾಣಾ ಅವರನ್ನು ಆಕಾಶ್ ದೀಪ್ ಬದಲಿಗೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸೇರ್ಪಡೆಗೊಳಿಸಬಹುದು. ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಡುವ ಬಳಗದಲ್ಲಿ ಒಂದು ಬದಲಾವಣೆಯನ್ನು ನಿರೀಕ್ಷಿಸಬಹುದಾಗಿದೆ.

4 / 6
ಇನ್ನು ಸಿಡ್ನಿ ಟೆಸ್ಟ್​ನಲ್ಲಿ ರಿಷಭ್ ಪಂತ್ ಅವರ ಸ್ಥಾನದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್​ಗೆ ಚಾನ್ಸ್ ಸಿಗುವ ಸಾಧ್ಯತೆಯನ್ನು ಸಹ ತಳ್ಳಿಹಾಕುವಂತಿಲ್ಲ. ಏಕೆಂದರೆ ಕಳೆದ 4 ಪಂದ್ಯಗಳಲ್ಲೂ ಪಂತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಬೇಜವಾಬ್ದಾರಿ ಬ್ಯಾಟಿಂಗ್​​ನೊಂದಿಗೆ ಪಂತ್ ಭಾರೀ ಟೀಕೆಗೆ ಒಳಗಾಗಿದ್ದಾರೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಪಂತ್ ಬದಲಿಗೆ ಜುರೇಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

6 / 6
Follow us
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ