ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಆಟಗಾರರು
TV9 Web | Updated By: ಝಾಹಿರ್ ಯೂಸುಫ್
Updated on:
Jan 14, 2023 | 6:33 PM
India vs Sri Lanka 3rd Odi: ಭಾರತ-ಶ್ರೀಲಂಕಾ ನಡುವಣ ಕೊನೆಯ ಏಕದಿನ ಪಂದ್ಯವು ಭಾನುವಾರ ನಡೆಯಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.
1 / 5
ಭಾರತ-ಶ್ರೀಲಂಕಾ ನಡುವಣ 3ನೇ ಏಕದಿನ ಪಂದ್ಯವು ನಾಳೆ (ಜ.15) ತಿರುವನಂತಪುರದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಕೇರಳದ ರಾಜಧಾನಿಗೆ ಬಂದಿಳಿದಿದೆ.
2 / 5
ಇನ್ನು ತಿರುವನಂತಪುರಕ್ಕೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಬಿಡುವಿನ ವೇಳೆಯಲ್ಲಿ ವಿಶ್ವ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
3 / 5
ಭಾರತ ತಂಡದ ಆಟಗಾರರಾದ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್ ಸಂಪ್ರದಾಯಿಕ ಉಡುಗೆಯೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ್ದು, ಇದೀಗ ದೇವಾಲಯದ ಮುಂದೆ ನಿಂತು ಟೀಮ್ ಇಂಡಿಯಾ ಆಟಗಾರರು ತೆಗೆಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
4 / 5
ಇನ್ನು ಭಾರತ-ಶ್ರೀಲಂಕಾ ನಡುವಣ ಕೊನೆಯ ಏಕದಿನ ಪಂದ್ಯವು ಭಾನುವಾರ ನಡೆಯಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಇದಕ್ಕೂ ಮುನ್ನ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು 67 ರನ್ಗಳಿಂದ ಹಾಗೂ 2ನೇ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳಿಂದ ಜಯ ಸಾಧಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯಕ್ಕಾಗಿ ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನ ಸಜ್ಜಾಗಿದೆ.
5 / 5
ಟೀಮ್ ಇಂಡಿಯಾ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.