- Kannada News Photo gallery Cricket photos Team India players visit to Mahakaleshwar Jyotirlinga Temple to pray for the quick recovery of Rishabh Pant
Rishabh Pant: ರಿಷಭ್ ಪಂತ್ ಬೇಗ ಗುಣಮುಖರಾಗಲೆಂದು ಟೀಮ್ ಇಂಡಿಯಾ ಆಟಗಾರರಿಂದ ಪ್ರಾರ್ಥನೆ: ಫೋಟೋ
India vs New Zealand ODI: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
Updated on: Jan 23, 2023 | 11:04 AM

ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಈಗಾಗಲೇ ನಡೆದಿರುವ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಕೊನೆಯ ಅಂತಿಮ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಇಂದೋರ್ನಲ್ಲಿ ಆಯೋಜಿಸಲಾಗಿದೆ.

ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. (ಫೋಟೋ ಕೃಪೆ: ANI)

ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ಪಂತ್ ಅವರು ತಂಡದ ಪ್ರಮುಖ ಸದಸ್ಯರಾಗಿದ್ದಾರೆ ಮತ್ತು ಅವರು ತಂಡಕ್ಕೆ ಕಮ್ಬ್ಯಾಕ್ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು. (ಫೋಟೋ ಕೃಪೆ: ANI)

ನಾವು ರಿಷಬ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿದ್ದೇವೆ, ಅಂತಿಮ ಪಂದ್ಯವನ್ನು ಎದುರು ನೋಡುತ್ತಿದ್ದೇವೆ ಎಂದು ಸೂರ್ಯಕುಮಾರ್ ಹೇಳಿದ್ದಾರೆ. (ಫೋಟೋ ಕೃಪೆ: ANI)

ಪೂಜೆ ಸಲ್ಲಿಸುತ್ತಿರುವ ಸೂರ್ಯಕುಮಾರ್ ಯಾದವ್. (ಫೋಟೋ ಕೃಪೆ: ANI)

ಪ್ರಾರ್ಥಿಸುತ್ತಿರುವ ಟೀಮ್ ಇಂಡಿಯಾ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್. (ಫೋಟೋ ಕೃಪೆ: ANI)

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಆಯೋಜಿಸಲಾಗಿದೆ. ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ. ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.

ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಕೆಲವು ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
