T20 World Cup 2024: ಟೀಮ್ ಇಂಡಿಯಾ ಪರ ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ಗೆ 15 ಸದಸ್ಯರ ಬಳಗವನ್ನು ಆಯ್ಕೆ ಮಾಡಲಾಗಿತ್ತು. ಈ ಹದಿನೈದು ಸದಸ್ಯರಲ್ಲಿ 12 ಮಂದಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದಾರೆ. ಆದರೆ 8 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ ಪರ ಮೂವರು ಆಟಗಾರರು ಒಂದೇ ಒಂದು ಮ್ಯಾಚ್​ನಲ್ಲಿ ಕಣಕ್ಕಿಳಿದಿರಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Jun 30, 2024 | 2:43 PM

T20 World Cup 2024: ಬಾರ್ಬಡೋಸ್​ನಲ್ಲಿ ನಡೆದ ರಣರೋಚಕ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ. ಈ ಮೂಲಕ 17 ವರ್ಷಗಳ ಬಳಿಕ ಭಾರತ ತಂಡವು 2ನೇ ಬಾರಿಗೆ ಟಿ20 ವಿಶ್ವಕಪ್​ ಅನ್ನು ಎತ್ತಿ ಹಿಡಿದಿದೆ.

1 / 7
ಹೀಗೆ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ ಒಟ್ಟು 15 ಆಟಗಾರರಿದ್ದಾರೆ. ಆದರೆ ಇವರಲ್ಲಿ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡುವ ಅವಕಾಶ ಸಿಕ್ಕಿಲ್ಲ. ವಿಶ್ವಕಪ್​ ತಂಡಕ್ಕೆ ಆಯ್ಕೆಯಾದರೂ ಭಾರತದ ಪರ ಕಣಕ್ಕಿಳಿಯದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

2 / 7
ಸಂಜು ಸ್ಯಾಮ್ಸನ್: ಈ ಬಾರಿಯ ಟಿ20 ವಿಶ್ವಕಪ್​ಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್​ಗೆ ಒಂದೇ ಒಂದು ಪಂದ್ಯವಾಡಲು ಅವಕಾಶ ಸಿಕ್ಕಿಲ್ಲ. ರಿಷಭ್ ಪಂತ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಕಾರಣ ಸ್ಯಾಮ್ಸನ್ ಬೆಂಚ್ ಕಾಯಬೇಕಾಯಿತು.

3 / 7
ಯುಜ್ವೇಂದ್ರ ಚಹಲ್: ಅನುಭವಿ ಸ್ಪಿನ್ನರ್ ಯುಜ್ವೇಂದ್ರ ಚಹಲ್​ಗೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಮ್ಮೆಯೂ ಅವಕಾಶ ಸಿಕ್ಕಿಲ್ಲ. ಟೂರ್ನಿಯುದ್ದಕೂ ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರಿಂದ  ಚಹಲ್ ಅವರನ್ನು ಆಡುವ ಬಳಗಕ್ಕೆ ಆಯ್ಕೆ ಮಾಡಿರಲಿಲ್ಲ.

4 / 7
ಯಶಸ್ವಿ ಜೈಸ್ವಾಲ್: ಟಿ20 ವಿಶ್ವಕಪ್​ಗೆ ಆರಂಭಿಕನಾಗಿ ಆಯ್ಕೆಯಾದ ಯಶಸ್ವಿ ಜೈಸ್ವಾಲ್ ಕೂಡ ಬೆಂಚ್ ಕಾದಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರಿಂದ ಜೈಸ್ವಾಲ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಕ್ಕಿಲ್ಲ.

5 / 7
ಇನ್ನು ಈ ಬಾರಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ರೋಹಿತ್ ಶರ್ಮಾ. 8 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಹಿಟ್​ಮ್ಯಾನ್ 257 ರನ್ ಕಲೆಹಾಕಿದ್ದಾರೆ. ಹಾಗೆಯೇ 8 ಪಂದ್ಯಗಳಿಂದ ಒಟ್ಟು 17 ವಿಕೆಟ್ ಕಬಳಿಸಿ ಅರ್ಷದೀಪ್ ಸಿಂಗ್ ಬೌಲಿಂಗ್ ವಿಭಾಗದಲ್ಲಿ ಮಿಂಚಿದ್ದಾರೆ.

6 / 7
ಟಿ20 ವಿಶ್ವಕಪ್ 2024 ಗೆದ್ದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

7 / 7
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್