IND Playing XI vs AUS: ರೋಹಿತ್ ಶರ್ಮಾ ಮಾಸ್ಟರ್ ಪ್ಲಾನ್: ಭಾರತದ ಪ್ಲೇಯಿಂಗ್ XI ನಲ್ಲಿ ದಿಢೀರ್ ಬದಲಾವಣೆ?
India Playing XI vs Australia, ICC World Cup 2023: ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಭಾರತದ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ದೊಡ್ಡ ಬದಲಾವಣೆ ತರಲು ಮುಂದಾಗಿದ್ದಾರೆ. ಅದೇನು?, ಇಲ್ಲಿದೆ ನೋಡಿ ಮಾಹಿತಿ.
1 / 7
ಐಸಿಸಿ ಏಕದಿನ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಇಂದು ಮಹತ್ವದ ಪಂದ್ಯ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೂ ಇದು ಮೊದಲ ಪಂದ್ಯ ಆಗಿರುವುದರಿಂದ ಗೆಲುವಿನ ಮೂಲಕ ಯಾರು ಅಭಿಯಾನ ಆರಂಭಿಸುತ್ತಾರೆ ಎಂಬುದು ನೋಡಬೇಕಿದೆ.
2 / 7
ಭಾರತ ತಂಡ ಶುಭ್ಮನ್ ಗಿಲ್ ಅಲಭ್ಯತೆಯಲ್ಲಿ ಕಣಕ್ಕಿಳಿಯುತ್ತಿದೆ. ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಆರಂಭಿಕರಾಗಿ ಆಡಲಿದ್ದಾರೆ. ಇನ್ಫಾರ್ಮ್ ಬ್ಯಾಟರ್ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಿದರೆ, ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ವಿಕೆಟ್ ಕೀಪರ್ ಜವಾಬ್ದಾರಿ ಕೆಎಲ್ ರಾಹುಲ್ ಹೊರಲಿದ್ದಾರೆ.
3 / 7
ಇದರ ನಡುವೆ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಇಂದಿನ ಪಂದ್ಯಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ದೊಡ್ಡ ಬದಲಾವಣೆ ತರಲು ಮುಂದಾಗಿದ್ದಾರೆ. ಇಂದಿನ ಪಂದ್ಯದಲ್ಲಿ ಭಾರತ ಒಟ್ಟು ಮೂವರು ಸ್ಪಿನ್ನರ್ಗಳನ್ನು ಆಡಿಸಲಿದೆ ಎನ್ನಲಾಗಿದೆ.
4 / 7
ಎಂಎ ಚಿದಂಬರಂ ಕ್ರೀಡಾಂಗಣದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುತ್ತದೆ. ಇಲ್ಲಿನ ಮೇಲ್ಮೈ ನಿಧಾನಗತಿಯ ಬೌಲರ್‌ಗಳಿಗೆ ಹೆಚ್ಚು ಸಹಕಾರಿ ಆಗಿದೆ. ಆದ್ದರಿಂದ ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಇಂದಿನ ಪಂದ್ಯದಲ್ಲಿ ಭಾರತ ಆಡಿಸಲಿದೆ ಎಂಬ ಸುದ್ದಿ ಹೊರಬಿದ್ದಿದೆ.
5 / 7
ರವಿಚಂದ್ರನ್ ಅಶ್ವಿನ್ ಈ ವಿಶ್ವಕಪ್ನಲ್ಲಿ ಭಾರತ ಪರ ಮಹತ್ವದ ಪಾತ್ರವಹಿಸಲಿದ್ದಾರೆ. ಅಕ್ಷರ್ ಪಟೇಲ್ ಬದಲು ಸ್ಥಾನ ಪಡೆದುಕೊಂಡಿರುವ ಇವರು 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮೂಲಕವೂ ಕೊಡುಗೆ ನೀಡಲಿದ್ದಾರೆ. ಕಳೆದ ಕೆಲವು ವಾರಗಳಿಂದ ಅಶ್ವಿನ್ ಬೌಲಿಂಗ್ ಜೊತೆಗೆ ಸತತವಾಗಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ಕೂಡ ಮಾಡುತ್ತಿದ್ದಾರೆ.
6 / 7
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಸಹಕಾರಿ ಆಗಲಿದೆ. ಮುಖ್ಯವಾಗಿ ಸ್ಪಿನ್ನರ್‌ಗಳಿಗೆ ಸ್ವರ್ಗ ಎಂಬ ಖ್ಯಾತಿ ಪಡೆದಿದೆ. ಈ ಪಿಚ್ ನಿಧಾನವಾಗಿರುತ್ತದೆ. ಇಲ್ಲಿ ಟಾಸ್ ಗೆದ್ದ ತಂಡಗಳು ಮೊದಲು ಬ್ಯಾಟಿಂಗ್ ಮಾಡುವುದು ಉತ್ತಮ. ಏಕೆಂದರೆ ಪಂದ್ಯ ಸಾಗಿದಂತೆ ಪಿಚ್ ಚೇಸಿಂಗ್ಗೆ ಹೆಚ್ಚು ಕಷ್ಟಕರವಾಗುತ್ತದೆ. ಈ ಪಿಚ್‌ನಲ್ಲಿ, ತಂಡಗಳು 260-270 ಸ್ಕೋರ್ ಗಳಿಸಿದರೆ ಅದು ಸವಾಲಿನ ಮೊತ್ತ ಆಗಲಿದೆ.
7 / 7
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.