ಹೀನಾಯ ಸೋಲುಗಳ ಸರಮಾಲೆ: ಟೀಮ್ ಇಂಡಿಯಾಗೆ ‘ಗಂಭೀರ’ ಸಮಸ್ಯೆ

Gautam Gambhir: ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ ಟೀಮ್ ಇಂಡಿಯಾ 10 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಮೂರು ಏಕದಿನ ಪಂದ್ಯಳಲ್ಲಿ 2 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಹಾಗೆಯೇ 10 ಟಿ20 ಪಂದ್ಯಗಳಲ್ಲಿ 9 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅಂದರೆ ಇಲ್ಲಿ ಗಂಭೀರ್ ಗರಡಿಯಲ್ಲಿ ಭಾರತ ತಂಡವು ಗೆಲುವುಗಳಿಗಿಂತ ಸೋಲುಗಳತ್ತ ಮುಖ ಮಾಡುತ್ತಿರುವುದು ಸ್ಪಷ್ಟ.

ಝಾಹಿರ್ ಯೂಸುಫ್
|

Updated on:Jan 05, 2025 | 2:29 PM

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗರಡಿಯಲ್ಲಿ ಭಾರತ ತಂಡವು ಈವರೆಗೆ 23 ಪಂದ್ಯಗಳನ್ನಾಡಿದೆ. ಈ ಇಪ್ಪತ್ತಮೂರು ಪಂದ್ಯಗಳಲ್ಲಿ ಭಾರತ ತಂಡದ ಪ್ರದರ್ಶನ ಅಷ್ಟಕ್ಕಷ್ಟೇ. ಏಕೆಂದರೆ ಗಂಭೀರ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಟಿ20 ಪಂದ್ಯಗಳಲ್ಲಿ ಮಿಂಚಿದರೂ, ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಮುಗ್ಗರಿಸಿದೆ. ಅದರಲ್ಲೂ ಹೀನಾಯ ಸೋಲುಗಳಿಗೆ ಕೊರೊಳೊಡ್ಡಿವೆ. ಗಂಭೀರ್ ಕೋಚ್ ಆದ ಬಳಿಕ ಭಾರತ ಕಂಡಂತಹ ಹೀನಾಯ ಸೋಲುಗಳ ಸರಮಾಲೆ ಈ ಕೆಳಗಿನಂತಿದೆ...

1 / 12
ಗೌತಮ್ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡವು ಶ್ರೀಲಂಕಾ ವಿರುದ್ಧ ಸರಣಿ ಸೋತಿದೆ. ಅದು ಕೂಡ 27 ವರ್ಷಗಳ ಬಳಿಕ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ 2 ದಶಕಗಳ ಬಳಿಕ ಶ್ರೀಲಂಕಾ ತಂಡವು ಭಾರತದ ವಿರುದ್ಧ ಏಕದಿನ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

2 / 12
ಶ್ರೀಲಂಕಾ ವಿರುದ್ಧದ ಸರಣಿಯನ್ನು 2-0 ಅಂತರದಿಂದ ಸೋತಿದ್ದು ಒಂದೆಡೆಯಾದರೆ (ಒಂದು ಪಂದ್ಯ ಡ್ರಾ), ಈ ಸರಣಿಯ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಆಲೌಟ್ ಆಗಿತ್ತು ಎಂಬುದು ವಿಶೇಷ. ಅಂದರೆ ಏಕದಿನ ಇತಿಹಾಸದಲ್ಲಿ ಮೊದಲ ಬಾರಿಗೆ ಟೀಮ್ ಇಂಡಿಯಾ 30 ವಿಕೆಟ್​ ಕಳೆದುಕೊಂಡು 3 ಪಂದ್ಯಗಳ ಏಕದಿನ ಸರಣಿ ಸೋತ ಹೀನಾಯ ದಾಖಲೆ ಬರೆದಿದೆ.

3 / 12
ಶ್ರೀಲಂಕಾ ವಿರುದ್ಧದ ಸರಣಿ ಸೋಲಿನೊಂದಿಗೆ ಭಾರತ ತಂಡವು ಕ್ಯಾಲೆಂಡರ್ ವರ್ಷವೊಂದರಲ್ಲಿ ಯಾವುದೇ ಜಯ ಸಾಧಿಸದೇ ಏಕದಿನ ಸರಣಿ ವೇಳಾಪಟ್ಟಿಯನ್ನು ಅಂತ್ಯಗೊಳಿಸಿದೆ. 45 ವರ್ಷಗಳ ಬಳಿಕ ಭಾರತ ತಂಡವು ಏಕದಿನ ಪಂದ್ಯ ಗೆಲ್ಲದೇ ವರ್ಷವೊಂದನ್ನು ಅಂತ್ಯಗೊಳಿಸಿರುವುದು ಇದೇ ಮೊದಲು.

4 / 12
ಬೆಂಗಳೂರು ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲುವುದರೊಂದಿಗೆ, ನ್ಯೂಝಿಲೆಂಡ್​ ತಂಡವು 36 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಪಂದ್ಯ ಗೆದ್ದ ಸಾಧನೆ ಮಾಡಿದೆ. ಇದರೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ತಂಡದ 19 ವರ್ಷಗಳ ಗೆಲುವಿನ ನಾಗಾಲೋಟ ಕೂಡ ಅಂತ್ಯವಾಯ್ತು.

5 / 12
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 46 ರನ್​ಗಳಿಗೆ ಟೀಮ್ ಇಂಡಿಯಾ ಆಲೌಟ್ ಆಯಿತು. ಇದು ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ತವರಿನಲ್ಲಿ ಭಾರತ ತಂಡ ಕಲೆಹಾಕಿದ ಅತ್ಯಂತ ಕಡಿಮೆ ಸ್ಕೋರ್ ಎಂಬುದು ವಿಶೇಷ.

6 / 12
92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ ಸರಣಿ ಸೋತಿದೆ. ಅಂದರೆ ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ ಟೀಮ್ ಇಂಡಿಯಾ ಕಿವೀಸ್ ವಿರುದ್ಧದ ಪಾರುಪತ್ಯಕ್ಕೆ ತೆರೆ ಎಳೆದಿದೆ.

7 / 12
ನ್ಯೂಝಿಲೆಂಡ್ ವಿರುದ್ಧದ ಸರಣಿ ಸೋಲಿನೊಂದಿಗೆ ತವರಿನಲ್ಲಿ ಭಾರತ ತಂಡದ 12 ವರ್ಷಗಳ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಂತಾಗಿದೆ. ಅಲ್ಲದೆ 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಸತತ ಟೆಸ್ಟ್ ಪಂದ್ಯಗಳನ್ನು ಸೋತು ನಿರಾಸೆ ಮೂಡಿಸಿದೆ.

8 / 12
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 19 ವರ್ಷಗಳ ಟೆಸ್ಟ್ ಗೆಲುವಿನ ನಾಗಾಲೋಟಕ್ಕೆ ತೆರೆ ಎಳೆದಿದ್ದ ಟೀಮ್ ಇಂಡಿಯಾ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲೂ ಸೋತು 12 ವರ್ಷಗಳ ಗೆಲುವಿನ ಪರಂಪರೆಯನ್ನು ಅಂತ್ಯಗೊಳಿಸಿದೆ.

9 / 12
ಇವೆಲ್ಲಕ್ಕಿಂತ ಮುಖ್ಯವಾಗಿ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಭಾರತ ತಂಡವು ತವರಿನಲ್ಲಿ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಇದೇ ಮೊದಲ ಬಾರಿಗೆ ಸೋತಿದೆ. ಅಂದರೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಟೀಮ್ ಇಂಡಿಯಾ ತವರಿನಲ್ಲಿ ಅವಮಾನಕರ ಸೋಲನುಭವಿಸಿದೆ.

10 / 12
ಇದೀಗ ಆಸ್ಟ್ರೇಲಿಯಾ ವಿರುದ್ಧ 10 ವರ್ಷಗಳ ಬಳಿಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಸೋತಿದೆ. ಕಳೆದ ನಾಲ್ಕು ಸರಣಿಗಳಲ್ಲಿ ಪಾರುಪತ್ಯ ಮೆರೆದಿದ್ದ ಟೀಮ್ ಇಂಡಿಯಾ ಈ ಬಾರಿ 3-1 ಅಂತರದಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ.

11 / 12
ಈ ಹೀನಾಯ ಸೋಲಿನೊಂದಿಗೆ ಭಾರತ ತಂಡವು ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಲು ವಿಫಲವಾಗಿದೆ. ಇದಕ್ಕೂ ಮೊದಲು, ಟೀಮ್ ಇಂಡಿಯಾ 2021 ಮತ್ತು 2023 ರಲ್ಲಿ WTC ಫೈನಲ್ ಆಡಿತ್ತು. ಆದರೆ ಟೆಸ್ಟ್​ ಕ್ರಿಕೆಟ್​ನ ಬಲಿಷ್ಠ ತಂಡ ಎಂದೇ ಗುರುತಿಸಿಕೊಂಡಿರುವ ಭಾರತ ತಂಡವು ಈ ಬಾರಿ ಫೈನಲ್​ಗೆ ಪ್ರವೇಶಿಸಲು ವಿಫಲವಾಗಿರುವುದು ವಿಪರ್ಯಾಸ.

12 / 12

Published On - 11:23 am, Sun, 5 January 25

Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ