IND vs ENG: ಭಾರತ- ಇಂಗ್ಲೆಂಡ್ ಸೆಮೀಸ್ ಕದನಕ್ಕೆ ಕ್ಷಣಗಣನೆ: ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ
TV9 Web | Updated By: Vinay Bhat
Updated on:
Nov 10, 2022 | 12:18 PM
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.
1 / 8
ಇಂದು ಅಡಿಲೇಡ್ನ ಓವಲ್ನಲ್ಲಿ ದ್ವಿತೀಯ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ.
2 / 8
ಗೆಲ್ಲುವ ವಿಶ್ವಾಸದಲ್ಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ನಾವು ಇಂಗ್ಲೆಂಡ್ ವಿರುದ್ಧ ಗೆದ್ದಿದ್ದೇವೆ ಎಂದಿದ್ದಾರೆ. ಭಾರತ ತಂಡ ಅಡಿಲೇಡ್ನ ಓವಲ್ ಮೈದಾನದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶಕ್ಕೆ ಸೋಲುಣಿಸಿವೆ.
3 / 8
2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ರೋಹಿತ್ ನಾಯಕತ್ವಕ್ಕೆ ಇದೊಂದು ಉತ್ತಮ ಅವಕಾಶವಾಗಿದೆ.
4 / 8
ಭಾರತದ ಪ್ರಮುಖ ಅಸ್ತ್ರ ಬ್ಯಾಟರ್ಗಳೇ. ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅಮೋಘ ಫಾರ್ಮ್ನಲ್ಲಿದ್ದಾರೆ.
5 / 8
ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ರಿಷಭ್ ಪಂತ್ ಅಥವಾ ದಿನೇಶ್ ಕಾರ್ತಿಕ್ ಪೈಕಿ ಯಾರಿಗೆ ಸ್ಥಾನ ಸಿಗುತ್ತೊ ಅವರು ಕೂಡ ಇಂದಿನ ಪಂದ್ಯದಲ್ಲಿ ಅಬ್ಬರಿಸಿದರೆ ಇಂಗ್ಲೆಂಡ್ಗೆ ಸವಾಲಾಗುವುದು ಖಚಿತ.
6 / 8
ಈ ಬಾರಿಯ ಟೂರ್ನಿಯಲ್ಲಿ ಭಾರತದ ಬೌಲರ್‌ಗಳು ಉತ್ತಮ ಆರಂಭ ಒದಗಿಸಿದ್ದಾರೆ. ಆದರೆ, ಮಧ್ಯಮ ಓವರ್ ಮತ್ತು ಡೆತ್ ಓವರ್ನಲ್ಲಿ ಇನ್ನಷ್ಟು ಸುಧಾರಣೆಯ ಅಗತ್ಯ ಕಂಡಿತ ಇದೆ.
7 / 8
ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ.
8 / 8
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.
Published On - 12:18 pm, Thu, 10 November 22