- Kannada News Photo gallery Cricket photos Team India Practice for Sri Lanka clash in the 1st T20I at Wankhade Stadium Cricket News in Kannada
IND vs SL 1st T20: ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರಿಂದ ಭರ್ಜರಿ ಅಭ್ಯಾಸ
Team India Practice: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರು ಮೈದಾನದಲ್ಲಿ ಭರ್ಜರಿ ಅಭ್ಯಾಸ ಶುರುಮಾಡಿಕೊಂಡಿದ್ದಾರೆ. ಆಟಗಾರರು ಪ್ರ್ಯಾಕ್ಟೀಸ್ ನಡೆಸುತ್ತಿರುವ ಫೋಟೋ ವೈರಲ್ ಆಗುತ್ತಿದೆ.
Updated on:Jan 03, 2023 | 9:45 AM

2023ನೇ ವರ್ಷದ ಮೊದಲ ಕದನಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ಇಂದು ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡ ದಸನ್ ಶನಕಾ ನೇತೃತ್ವದ ಶ್ರೀಲಂಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಮುಖಾಮುಖಿ ಆಗುತ್ತಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಏರ್ಪಡಿಸಲಾಗಿದ್ದು ಸಂಜೆ 7 ಗಂಟೆಗೆ ಶುರುವಾಗಲಿದೆ.

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ಕಣಕ್ಕಿಳಿಯುತ್ತಿದ್ದು ಯುವ ಪ್ಲೇಯರ್ಸ್ಗೊಂದು ಅಗ್ನಿ ಪರೀಕ್ಷೆಯಾಗಿದೆ. ಟಿ20 ಸ್ಪೆಷಲಿಸ್ಟ್ಗಳಾದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.

ಮೊದಲ ಟಿ20ಗೆ ಟೀಮ್ ಇಂಡಿಯಾ ಆಟಗಾರರು ಮೈದಾನದಲ್ಲಿ ಭರ್ಜರಿ ಅಭ್ಯಾಸ ಶುರುಮಾಡಿಕೊಂಡಿದ್ದಾರೆ. ಆಟಗಾರರು ಪ್ರ್ಯಾಕ್ಟೀಸ್ ನಡೆಸುತ್ತಿರುವ ಫೋಟೋ ವೈರಲ್ ಆಗುತ್ತಿದೆ.

ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ವರ್ಗವಾಗಿದೆ. ಮಳೆಯ ನಿರೀಕ್ಷೆ ಇಲ್ಲವೆಂದು ಹವಾಮಾನ ಇಲಾಖೆ ತಿಳಿಸಿದ್ದು, ಸಂಪೂರ್ಣ 40 ಓವರ್ಗಳ ಪಂದ್ಯ ನಡೆಯಲಿದೆ. ಹೀಗಾಗಿ ಪಂದ್ಯ ನಿರಾತಂಕವಾಗಿ ಸಾಗಲಿದೆ.

ಭಾರತ ಟಿ20 ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಇದೇ ಮೊದಲ ಬಾರಿ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ಉಪನಾಯಕನಾಗಿ ಆಯ್ಕೆ ಆಗಿದ್ದಾರೆ. ಋತುರಾಜ್ ಗಾಯಕ್ವಾಡ್ ಕಮ್‌ಬ್ಯಾಕ್ ಮಾಡಿದ್ದಾರೆ. ರಾಹುಲ್ ತ್ರಿಪಾಠಿ, ದೀಪಕ್ ಹೂಡ ಮತ್ತು ಸಂಜು ಸ್ಯಾಮ್ಸನ್ ಕೂಡ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ.

ಶುಭ್ಮನ್ ಗಿಲ್ ಈ ಪಂದ್ಯದ ಮೂಲಕ ಚುಟುಕು ಮಾದರಿಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಅಚ್ಚರಿಯ ಆಯ್ಕೆ ಎಂಬಂತೆ ಯುವ ಬೌಲರ್‌ಗಳಾದ ಶಿವಂ ಮಾವಿ ಮತ್ತು ಮುಖೇಶ್ ಕುಮಾರ್ ಇದೇ ಮೊದಲ ಬಾರಿ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಟಾಸ್ 6.30ಕ್ಕೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಇರಲಿದೆ. ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.
Published On - 9:45 am, Tue, 3 January 23
