IND vs BAN: ಬಾಂಗ್ಲಾ ವಿರುದ್ಧದ ಕದನಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಫೋಟೋ ನೋಡಿ
TV9 Web | Updated By: Vinay Bhat
Updated on:
Nov 02, 2022 | 9:18 AM
ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು ಮಧ್ಯಾಹ್ನ 1:30ಕ್ಕೆ ಶುರುವಾಗಲಿರುವ ದ್ವಿತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು (India vs Bangladesh) ಎದುರಿಸಲಿದೆ. ಇಂಡೋ-ಬಾಂಗ್ಲಾ ಕದನ ಅಡಿಲೇಡ್ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ.
1 / 8
ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು ತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು (India vs Bangladesh) ಎದುರಿಸಲಿದೆ.
2 / 8
ಇಂಡೋ-ಬಾಂಗ್ಲಾ ಕದನ ಅಡಿಲೇಡ್ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದ್ದು, ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
3 / 8
ಪಾಯಿಂಟ್ ಟೇಬಲ್ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿರುವ ರೋಹಿತ್ ಪಡೆಗೆ ಈ ಪಂದ್ಯ ಮುಖ್ಯವಾಗಿದೆ. ಗೆದ್ದರಷ್ಟೆ ಸೆಮಿ ಫೈನಲ್ ಆಸೆಯನ್ನು ಗಟ್ಟಿಯಾಗಿ ಇಟ್ಟುಕೊಳ್ಳಬಹುದು. ಸೋತರೆ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಹಾದಿ ಕಷ್ಟವಾಗಲಿದೆ.
4 / 8
ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ IXನಲ್ಲಿ ಬದಲಾವಣೆ ಖಚಿತ. ಇಂಜುರಿ ಸಮಸ್ಯೆ ಕೂಡ ಟೀಮ್ ಇಂಡಿಯಾಕ್ಕೆ ಕಾಡುತ್ತಿದೆ. ದಿನೇಶ್ ಕಾರ್ತಿಕ್ ಇಂಜುರಿಗೆ ತುತ್ತಾದ ಪರಿಣಾಮ ಬಾಂಗ್ಲಾ ವಿರುದ್ಧ ಆಡುವುದು ಅನುಮಾನ ಎನ್ನಲಾಗಿದೆ.
5 / 8
ರಿಷಭ್ ಪಂತ್ ವಿಕೆಟ್ ಕೀಪಿಂಗ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅಂತೆಯೆ ಕಳೆದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಬದಲು ಸ್ಥಾನ ಪಡೆದಿದ್ದ ದೀಪಕ್ ಹೂಡ ಯಾವುದೇ ಕಮಾಲ್ ಮಾಡಲಿಲ್ಲ. ಹೀಗಾಗಿ ಅಕ್ಷರ್ ಪ್ಲೇಯಿಂಗ್ ಇಲೆವೆನ್ಗೆ ಮರಳುವ ಸಾಧ್ಯತೆ ಹೆಚ್ಚಿದೆ.
6 / 8
ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಟಾಪ್ ಆರ್ಡರ್ ಬ್ಯಾಟರ್ಗಳಾಗಿದ್ದು ನಿರೀಕ್ಷೆ ಹೆಚ್ಚಿದೆ.
7 / 8
ರವಿಚಂದ್ರನ್ ಅಶ್ವಿನ್ ಜಾಗಕೂಡ ಭದ್ರವಿಲ್ಲ. ಯುಜ್ವೇಂದ್ರ ಚಹಲ್ ಅವರು ಅಶ್ವಿನ್ ಜಾಗದಲ್ಲಿ ಆಡಿದರೆ ಅಚ್ಚರಿ ಪಡಬೇಕಿಲ್ಲ.
8 / 8
ಅಡಿಲೇಡ್ನಲಲ್ಲಿ ಮಂಗಳವಾರ ನಿರಂತರವಾಗಿ ಮಳೆಯಾಗಿದ್ದು ಬುಧವಾರವೂ ಸಹ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಸ್ಟ್ರೇಲಿಯಾದ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬುಧವಾರ ಸಂಜೆ ಶೇಕಡ 60 ರಷ್ಟು ಮಳೆಯಾಗುವ ಸಾಧ್ಯತೆಯಿದೆ.
Published On - 9:17 am, Wed, 2 November 22