Updated on: Jan 24, 2023 | 6:25 AM
ಇಂದು ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ನ್ಯೂಜಿಲೆಂಡ್ ನಡುವೆ ಮೂರನೇ ಏಕದಿನ ಪಂದ್ಯ ನಡೆಯಲಿದೆ. ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ.
ಭಾರತ-ನ್ಯೂಜಿಲೆಂಡ್ ನಡುವೆ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದ್ದು, ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಪ್ರ್ಯಾಕ್ಟೀಸ್ ನಡೆಸುತ್ತಿರುವ ನ್ಯೂಜಿಲೆಂಡ್ ಪ್ಲೇಯರ್ಸ್.
ಇಂದೋರ್‌ನಲ್ಲಿ ಟೀಮ್ ಇಂಡಿಯಾ ಒಂದು ವಿಶೇಷ ದಾಖಲೆ ಮಾಡುವ ಅವಕಾಶ ಹೊಂದಿದೆ. ಅದೆನೆಂದರೆ, ಇದುವರೆಗೆ ಹೋಳ್ಕರ್ ಸ್ಟೇಡಿಯಂನಲ್ಲಿ 5 ಏಕದಿನ ಪಂದ್ಯಗಳು ನಡೆದಿದ್ದು, ಈ ಐದು ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಜಯ ಸಾಧಿಸಿದೆ.
ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.
ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಕೊಹ್ಲಿ ಜಾಗದಲ್ಲಿ ರಜತ್ ಪಟಿದಾರ್ ಕಣಕ್ಕಿಳಿಯುವ ಸಾಧ್ಯತೆ ಇದೆ.
ಹಿಂದಿನ ಪಂದ್ಯದಲ್ಲಿ ಏನಾಗಿತ್ತು?: ಹೈದರಾಬಾದ್ನಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 12 ರನ್ಗಳ ಜಯ ಸಾಧಿಸಿತ್ತು. ಬಳಿಕ ರಾಪ್ಪುರದಲ್ಲಿ ಬಿರುಗಾಳಿ ಎಬ್ಬಿಸಿದ ಭಾರತೀಯ ಬೌಲರ್ಗಳು ದ್ವಿತೀಯ ಪಂದ್ಯದಲ್ಲೂ 8 ವಿಕೆಟ್ಗಳ ಅಮೋಘ ಗೆಲುವು ಸಾಧಿಸಿ ಮೂರು ಪಂದ್ಯಗಳ ಏಕದಿನದಲ್ಲಿ 2-0 ಮುನ್ನಡೆ ಪಡೆದುಕೊಂಡು ಸರಣಿ ಕೈವಶ ಮಾಡಿಕೊಂಡಿದೆ.
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಜತ್ ಪಟಿದಾರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಥಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್.