WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆರಂಭಕ್ಕೆ ಕ್ಷಣಗಣನೆ: ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ

|

Updated on: Jun 07, 2023 | 9:19 AM

India vs Australia Final: ಈಗಾಗಲೇ ಉಭಯ ತಂಡಗಳು ಲಂಡನ್​ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

1 / 7
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಹುನಿರೀಕ್ಷಿತ ಎರಡನೇ ಆವೃತ್ತಿಯ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 7 ಇಂದು ಡಬ್ಲ್ಯೂಟಿಸಿ 2023 ಫೈನಲ್​ಗೆ ಚಾಲನೆ ಸಿಗಲಿದೆ.

2 / 7
ಈಗಾಗಲೇ ಉಭಯ ತಂಡಗಳು ಲಂಡನ್​ನ ಪ್ರತಿಷ್ಠಿತ ಕೆನ್ನಿಂಗ್ಟನ್ ಓವಲ್ ಮೈದಾನಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

3 / 7
2021ರ ಜೂನ್‌ನಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಭಾರತ 8 ವಿಕೆಟ್‌ಗಳಿಂದ ಸೋಲುಂಡಿತ್ತು. ಇದೀಗ ಸತತ ಎರಡನೇ ಬಾರಿ ಫೈನಲ್ ತಲುಪಿರುವ ಟೀಮ್ ಇಂಡಿಯಾ ಚೊಚ್ಚಲ ಟ್ರೋಫಿ ಗೆಲ್ಲುವತ್ತ ಚಿತ್ತ ನೆಟ್ಟಿದೆ.

4 / 7
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. ನೆಟ್ಸ್​​ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದಾಗ ಅವರ ಎಡಗೈ ಹೆಬ್ಬೆರಳಿಗೆ ಪೆಟ್ಟಾಗಿದೆ. ಇದರ ಬೆನ್ನಲ್ಲೇ ಹಿಟ್​ಮ್ಯಾನ್ ಪ್ರಾಕ್ಟೀಸ್​ ಅನ್ನು ಅಂತ್ಯಗೊಳಿಸಿದರು. ಇದಾಗ್ಯೂ ಅವರ ಗಾಯ ಗಂಭೀರವಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ.

5 / 7
ಭಾರತ ತಂಡದಲ್ಲಿ ಮ್ಯಾಚ್ ವಿನ್ನರ್‌ಗಳ ದಂಡೇ ಇದೆ. ಗಿಲ್ ಮತ್ತು ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಚೇತೇಶ್ವರ್‌ ಪೂಜಾರ ಮತ್ತು ರಹಾನೆ ಇದ್ದಾರೆ. ಆಲ್ರೌಂಡರ್​ಗಳಾಗಿ ಸ್ಪಿನ್ನರ್‌ಗಳಾದ ಆರ್‌ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಫಾಸ್ಟ್ ಬೌಲಿಂಗ್‌ ವಿಭಾಗದಲ್ಲಿ ಮೊಹಮ್ಮದ್‌ ಶಮಿ ಮತ್ತು ಮೊಹಮ್ಮದ್‌ ಸಿರಾಜ್‌, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್ ಸಜ್ಜಾಗಿ ನಿಂತಿದ್ದಾರೆ.

6 / 7
143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ.

7 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್‌ ಪಂದ್ಯ ಸ್ಟಾರ್‌ ಸ್ಪೋರ್ಟ್ಸ್‌ ಟೆಲಿವಿಷನ್‌ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. ಲೈವ್‌ ಸ್ಟ್ರೀಮಿಂಗ್‌ ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ಮೊಬೈಲ್‌ ಅಪ್ಲಿಕೇಷನ್‌ನಲ್ಲಿ ನೋಡಬಹುದು.