Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌಂಡರಿಗಳೊಂದಿಗೆ ಹೊಸ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಭಾರತ

India vs Bangladesh T20I: ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಮ್ಯಾಚ್​ನಲ್ಲಿ 7 ವಿಕೆಟ್​ಗಳ ಜಯ ಸಾಧಿಸಿದ್ದ ಭಾರತ ತಂಡವು ದ್ವಿತೀಯ ಪಂದ್ಯದಲ್ಲಿ 86 ರನ್​ಗಳ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 133 ರನ್​ಗಳ ಗೆಲುವು ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Oct 13, 2024 | 10:30 AM

ಹೈದರಾಬಾದ್​​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ಸೃಷ್ಟಿಯಾಗಿರುವುದು ಬೌಂಡರಿಗಳಿಂದ ಎಂಬುದು ವಿಶೇಷ. ಇಂತಹದೊಂದು ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಭಾರತೀಯ ಬ್ಯಾಟರ್​ಗಳು.

1 / 6
ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಮೊದಲ ಓವರ್​ನಿಂದ ಶುರುವಾದ ಈ ಸಿಡಿಲಬ್ಬರ ಕೊನೆಗೊಂಡಿದ್ದು 20ನೇ ಓವರ್​ನ ಕೊನೆಯ ಎಸೆತದಲ್ಲಿನ ಸಿಕ್ಸ್​ನೊಂದಿಗೆ. ಅದು ಕೂಡ 20 ಓವರ್​ಗಳಲ್ಲಿ 297 ರನ್​ ಕಲೆಹಾಕುವ ಮೂಲಕ.

2 / 6
ಈ 297 ರನ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು 47 ಬೌಂಡರಿಗಳನ್ನು ಬಾರಿಸಿದ್ದರು ಎಂಬುದು ವಿಶೇಷ. ಇದರಲ್ಲಿ 22 ಸಿಕ್ಸ್ ಹಾಗೂ 25 ಫೋರ್​ಗಳು ಒಳಗೊಂಡಿದ್ದವು. ಇದರೊಂದಿಗೆ ಟಿ20 ಇನಿಂಗ್ಸ್​ನಲ್ಲಿ ಅತ್ಯಧಿಕ ಬೌಂಡರಿಗಳನ್ನು ಬಾರಿಸಿದ ವಿಶ್ವ ದಾಖಲೆ ಭಾರತ ತಂಡದ ಪಾಲಾಯಿತು.

3 / 6
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದು ಜೆಕ್ ರಿಪಬ್ಲಿಕ್ ತಂಡ. 2019 ರಲ್ಲಿ ಟರ್ಕಿ ವಿರುದ್ಧದ ಪಂದ್ಯದಲ್ಲಿ ಜೆಕ್ ರಿಪಬ್ಲಿಕ್ ತಂಡವು 43 ಬೌಂಡರಿಗಳನ್ನು (ಸಿಕ್ಸ್-ಫೋರ್) ಬಾರಿಸಿ ಈ ವಿಶ್ವ ದಾಖಲೆ ಬರೆದಿದ್ದರು.

4 / 6
ಇದೀಗ ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 5 ವರ್ಷಗಳ ಹಳೆಯ ದಾಖಲೆಯನ್ನು ಟೀಮ್ ಇಂಡಿಯಾ ಅಳಿಸಿ ಹಾಕಿದೆ. ಅಲ್ಲದೆ 22 ಸಿಕ್ಸ್ ಹಾಗೂ 25 ಫೋರ್​ಗಳೊಂದಿಗೆ ಒಟ್ಟು 47 ಬೌಂಡರಿ ಬಾರಿಸಿ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 298 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮೂರನೇ ಟಿ20 ಪಂದ್ಯವನ್ನು ಟೀಮ್ ಇಂಡಿಯಾ 133 ರನ್​ಗಳಿಂದ ಗೆದ್ದುಕೊಂಡಿದೆ. ಅಲ್ಲದೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

6 / 6
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ