ಪವರ್​ಪ್ಲೇನಲ್ಲೇ ಪವರ್​ಫುಲ್​ ದಾಖಲೆ ಬರೆದ ಟೀಮ್ ಇಂಡಿಯಾ

India vs England T20I: ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಅಭಿಷೇಕ್ ಶರ್ಮಾ (135) ಅವರ ಭರ್ಜರಿ ಶತಕದ ನೆರವಿನಿಂದ 20 ಓವರ್​ಗಳಲ್ಲಿ 247 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ ಕೇವಲ 97 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 150 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on:Feb 03, 2025 | 8:39 AM

ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಭಾರತ ಜಯಭೇರಿ ಬಾರಿಸಿದೆ. ಆದರೆ ಈ ಬಾರಿ ಗೆದ್ದಿರುವುದು ಬರೋಬ್ಬರಿ 150 ರನ್​ಗಳ ಅಂತರದಿಂದ. ಇಂತಹದೊಂದು ಅಮೋಘ ಗೆಲುವಿಗೆ ಕಾರಣವಾಗಿದ್ದು ಭಾರತೀಯ ಬ್ಯಾಟರ್​ಗಳ ಸ್ಪೋಟಕ ಬ್ಯಾಟಿಂಗ್. ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ ಪವರ್​ಪ್ಲೇನಲ್ಲೇ ಪವರ್​ಫುಲ್ ದಾಖಲೆಯನ್ನು ಸಹ ಬರೆದಿದೆ.

1 / 7
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡರು. ಆದರೆ ಈ ನಿರ್ಧಾರ ತಪ್ಪು ಎಂಬಂತೆ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಆಂಗ್ಲ ಬೌಲರ್​ಗಳನ್ನು ಚೆಂಡಾಡಿದರು. ಪರಿಣಾಮ ಅಭಿಷೇಕ್ ಬ್ಯಾಟ್​ನಿಂದ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

2 / 7
ಈ ಅರ್ಧಶತಕದೊಂದಿಗೆ ಆರ್ಭಟ ಮುಂದುವರೆಸಿದ ಅಭಿಷೇಕ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಮೊದಲ 6 ಓವರ್​ಗಳಲ್ಲೇ ಟೀಮ್ ಇಂಡಿಯಾ 1 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು. ಇದರೊಂದಿಗೆ ಪವರ್​ಪ್ಲೇನಲ್ಲಿ ಪವರ್​ಫುಲ್ ದಾಖಲೆಯೊಂದು ಭಾರತ ತಂಡದ ಪಾಲಾಯಿತು.

3 / 7
ಹೌದು, ಇದು ಪವರ್​ಪ್ಲೇನಲ್ಲಿ ಟೀಮ್ ಇಂಡಿಯಾ ಕಲೆಹಾಕಿದ ಗರಿಷ್ಠ ಸ್ಕೋರ್. 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ 6 ಓವರ್​ಗಳಲ್ಲಿ 82 ರನ್​ಗಳಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಪವರ್​ಪ್ಲೇನಲ್ಲಿ ಬರೋಬ್ಬರಿ 95 ರನ್ ಸಿಡಿಸಿ ಟೀಮ್ ಇಂಡಿಯಾ ಪವರ್​ಫುಲ್ ದಾಖಲೆಯನ್ನು ಬರೆದಿದೆ.

4 / 7
ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಪವರ್​ಪ್ಲೇನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದೆ. 2024 ರಲ್ಲಿ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸೀಸ್ ಪಡೆ ಮೊದಲ 6 ಓವರ್​ಗಳಲ್ಲಿ 113 ರನ್​ ಬಾರಿಸಿರುವುದು ಶ್ರೇಷ್ಠ ದಾಖಲೆ.

5 / 7
ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪವರ್​ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶ್ವ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಹೆಸರಿನಲ್ಲಿದೆ. ಕಳೆದ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ತಂಡವು ಪವರ್​ಪ್ಲೇನಲ್ಲಿ 125 ರನ್​ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6 / 7
ಇದೀಗ ಟೀಮ್ ಇಂಡಿಯಾ ಮೊದಲ 6 ಓವರ್​ಗಳಲ್ಲೇ 95 ರನ್ ಸಿಡಿಸಿ ಪವರ್​ಪ್ಲೇನಲ್ಲಿ ಪವರ್​ಫುಲ್ ಬ್ಯಾಟಿಂಗ್ ಪ್ರದರ್ಶಿಸಿದ ತಂಡಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಈ ಪವರ್​ಫುಲ್ ಬ್ಯಾಟಿಂಗ್ ಪರಿಣಾಮ ಭಾರತ ತಂಡವು 20 ಓವರ್​​ಗಳಲ್ಲಿ 247 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು ಕೇವಲ 97 ರನ್​ಗಳಿಗೆ ಆಲೌಟ್ ಆಗಿ ಭಾರೀ ಮುಖಭಂಗ ಅನುಭವಿಸಿದೆ.

7 / 7

Published On - 7:23 am, Mon, 3 February 25

Follow us
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್

ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ

ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ

ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್

ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು

ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು

ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ

ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್

ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ

ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ