ಬಿಸಿಸಿಐ ಪರೀಕ್ಷೆಯಲ್ಲಿ ಪಾಸ್ ಆದ ಪಂತ್: ನ್ಯೂಜಿಲೆಂಡ್ ವಿರುದ್ಧ ಆಡೋದು ಖಚಿತ

Updated on: Nov 12, 2026 | 12:57 PM

ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ನ್ಯೂಜಿಲೆಂಡ್ ವಿರುದ್ಧದ ಮಹತ್ವದ ಟೆಸ್ಟ್ ಸರಣಿಗೆ ಸಂಪೂರ್ಣ ಫಿಟ್ ಆಗಿದ್ದಾರೆ. ಬಿಸಿಸಿಐನಿಂದ ಅನುಮತಿ ಪಡೆದಿರುವ ಪಂತ್, ನವೆಂಬರ್ 12ರಂದು ವೆಲ್ಲಿಂಗ್ಟನ್‌ಗೆ ತೆರಳಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ನವೆಂಬರ್ 19ರಿಂದ ಆರಂಭವಾಗುವ ಮೊದಲ ಟೆಸ್ಟ್‌ಗೆ ಲಭ್ಯರಿರುವ ಅವರು, ಭಾರತ ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಲಿದ್ದಾರೆ. ಅವರ ವಾಪಸಾತಿ ತಂಡಕ್ಕೆ ದೊಡ್ಡ ಹುಮ್ಮಸ್ಸು ನೀಡಿದೆ.

1 / 6
ಟೀಂ ಇಂಡಿಯಾ ಸದ್ಯ ನ್ಯೂಜಿಲೆಂಡ್ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವೆ ಐದು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಇದಾದ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಮಹತ್ವದ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ಸ್ಪಷ್ಟಪಡಿಸಿದೆ(PC-PTI).

ಟೀಂ ಇಂಡಿಯಾ ಸದ್ಯ ನ್ಯೂಜಿಲೆಂಡ್ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವೆ ಐದು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದ್ದು, ಇದಾದ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಮಹತ್ವದ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ತಂಡದ ಸ್ಟಾರ್ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ಸ್ಪಷ್ಟಪಡಿಸಿದೆ(PC-PTI).

2 / 6

ಫಿಟ್‌ನೆಸ್ ಪರೀಕ್ಷೆಯಲ್ಲಿ ಪಾಸಾಗಿರುವ ಪಂತ್ ನವೆಂಬರ್ 12ರಂದು ವೆಲ್ಲಿಂಗ್ಟನ್‌ಗೆ ಪ್ರಯಾಣಿಸಲಿದ್ದಾರೆ. ನವೆಂಬರ್ 19ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಲು ಅವರು ಸಂಪೂರ್ಣವಾಗಿ ಲಭ್ಯವಿರಲಿದ್ದಾರೆ. ಪಂತ್ ತಂಡಕ್ಕೆ ಮರಳುತ್ತಿರುವುದು ಭಾರತದ ಟೆಸ್ಟ್ ತಂಡದ ಬಲವನ್ನು ಮತ್ತಷ್ಟು ಹೆಚ್ಚಿಸಲಿದೆ(PC-PTI).

3 / 6

ಇತ್ತೀಚೆಗೆ ನಡೆದ ಇರಾನಿ ಕಪ್ ಟೂರ್ನಿಯಲ್ಲಿ ರೆಸ್ಟ್ ಆಫ್ ಇಂಡಿಯಾ ಪರ ಆಡುತ್ತಿದ್ದ ವೇಳೆ ರಿಷಭ್ ಪಂತ್ ಅವರಿಗೆ ಪಕ್ಕೆಲುಬಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರ ಫಿಟ್‌ನೆಸ್ ಬಗ್ಗೆ ಅನುಮಾನ ಮೂಡಿತ್ತು(PC-PTI).

4 / 6

ಆರಂಭದಲ್ಲಿ ಫಿಟ್‌ನೆಸ್ ಸಮಸ್ಯೆಯಿಂದಾಗಿ ಅವರನ್ನು ಭಾರತ ಎ ತಂಡದ ಅನಧಿಕೃತ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ, ನಿಗದಿತ ಸಮಯದಲ್ಲಿ ಆಟಕ್ಕೆ ಮರಳಲು ಅಗತ್ಯವಿದ್ದ ವೈದ್ಯಕೀಯ ಅನುಮತಿ ಸಿಗದ ಕಾರಣ ಆ ಪಂದ್ಯದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಪಂತ್ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಭಾರತೀಯ ಟೆಸ್ಟ್ ತಂಡವನ್ನು ಕೂಡಿಕೊಳ್ಳಲಿದ್ದಾರೆ(PC-PTI).

5 / 6

ರಿಷಭ್ ಪಂತ್ ಅವರ ಫಿಟ್‌ನೆಸ್ ಖಚಿತಪಡಿಸಿಕೊಳ್ಳಲು ವೈದ್ಯಕೀಯ ತಂಡ ಕಠಿಣ ಪರೀಕ್ಷೆಗಳನ್ನು ನಡೆಸಿತ್ತು. ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಎರಡು ಸುತ್ತಿನ ಮ್ಯಾಚ್ ಸಿಮ್ಯುಲೇಶನ್ ಅಭ್ಯಾಸವನ್ನು ಪಂತ್ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ವೇಳೆ ಯಾವುದೇ ನೋವು ಅಥವಾ ಅಸ್ವಸ್ಥತೆ ಕಾಣಿಸಿಕೊಳ್ಳದೆ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಅಭ್ಯಾಸವನ್ನೂ ಪೂರ್ಣಗೊಳಿಸಿದ್ದಾರೆ. ಹೀಗಾಗಿ ವೈದ್ಯಕೀಯ ತಂಡ ಅವರಿಗೆ ಪಂದ್ಯಗಳಲ್ಲಿ ಆಡಲು ಅಧಿಕೃತ ಅನುಮತಿ ನೀಡಿದೆ(PC-PTI).

6 / 6

29 ವರ್ಷದ ರಿಷಭ್ ಪಂತ್ ಭಾರತ ಟೆಸ್ಟ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರು. ಇದುವರೆಗೆ 52 ಟೆಸ್ಟ್ ಪಂದ್ಯಗಳನ್ನಾಡಿರುವ ಅವರು, 43ಕ್ಕೂ ಅಧಿಕ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಅವರ ಖಾತೆಯಲ್ಲಿ ಎಂಟು ಶತಕ ಹಾಗೂ 21 ಅರ್ಧಶತಕಗಳಿವೆ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಸೇರಿದಂತೆ SENA ರಾಷ್ಟ್ರಗಳ ವೇಗದ ಹಾಗೂ ಸವಾಲಿನ ಪಿಚ್‌ಗಳಲ್ಲೂ ಪಂತ್ ಉತ್ತಮ ಪ್ರದರ್ಶನ ನೀಡಿದ್ದಾರೆ(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us