ಆಸ್ಟ್ರೇಲಿಯಾ ವಿರುದ್ಧದ ಸರಣಿ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್!
India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯು ಟೀಮ್ ಇಂಡಿಯಾದ ನಾಲ್ವರು ಆಟಗಾರರ ಪಾಲಿಗೆ ನಿರ್ಣಾಯಕ.
1 / 6
ನ್ಯೂಝಿಲೆಂಡ್ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಅದರಲ್ಲೂ ಟೀಮ್ ಇಂಡಿಯಾದಲ್ಲಿರುವ ಹಿರಿಯ ಆಟಗಾರರ ಮೇಲೆ ನಿಗಾಯಿಡಲು ನಿರ್ಧರಿಸಿದೆ. ಅಂದರೆ ಕಳಪೆ ಫಾರ್ಮ್ನಲ್ಲಿರುವ ಆಟಗಾರರಿಗೆ ಭಾರತ ತಂಡದಿಂದ ಗೇಟ್ ಪಾಸ್ ನೀಡಲು ಮುಂದಾಗಿದೆ.
2 / 6
ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾದ ಹಿರಿಯ ಆಟಗಾರರ ಪಾಲಿಗೆ ನಿರ್ಣಾಯಕ. ಪ್ರಸ್ತುತ ತಂಡದಲ್ಲಿರುವ ಹಿರಿಯ ಆಟಗಾರರೆಂದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್.
3 / 6
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಈ ನಾಲ್ವರಲ್ಲಿ ಇಬ್ಬರು ಭಾರತ ತಂಡದಿಂದ ಹೊರಬೀಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಈ ನಾಲ್ವರು ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲೇ ಉಳಿದುಕೊಳ್ಳಬಹುದು. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನಾಲ್ವರ ಪಾಲಿಗೆ ನಿರ್ಣಾಯಕ.
4 / 6
ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ತಲುಪಲು ವಿಫಲರಾದರೆ, ಹಿರಿಯ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇಬ್ಬರು ಆಟಗಾರರಿಗೆ ಗೇಟ್ ಪಾಸ್ ನೀಡಲಿದ್ದಾರೆ. ಇನ್ನುಳಿದ ಹಿರಿಯ ಆಟಗಾರರ ಪ್ರದರ್ಶನದ ಮೇಲೂ ನಿಗಾಯಿಡುವಂತೆ ಆಯ್ಕೆ ಸಮಿತಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
5 / 6
ಹೀಗಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಆಸೀಸ್ ಪಿಚ್ನಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯೊಂದಿಗೆ ಈ ಆಟಗಾರರ ಟೆಸ್ಟ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.
6 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.