IND vs WI: ದ್ವಿತೀಯ ಏಕದಿನಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಗೆದ್ದರೆ ಸರಣಿ ಕೈವಶ
TV9 Web | Updated By: Vinay Bhat
Updated on:
Jul 24, 2022 | 11:31 AM
IND vs WI 2nd ODI: ಟ್ರಿನಿಡಾದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇದೇ ಮೈದಾನದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಭಾರತ 3 ರನ್ಗಳ ರೋಚಕ ಜಯ ಸಾಧಿಸಿತ್ತು.
1 / 6
ಟ್ರಿನಿಡಾದ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದೆ. ಇದೇ ಮೈದಾನದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಭಾರತ 3 ರನ್ ಗಳ ರೋಚಕ ಜಯ ಸಾಧಿಸಿತ್ತು.
2 / 6
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಈಗಾಗಲೇ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ವೆಸ್ಟ್ ಇಂಡೀಸ್ ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಉಳಿದ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ದ್ವಿತೀಯ ಏಕದಿನ (2nd ODI) ಸಾಕಷ್ಟು ಕುತೂಹಲ ಕೆರಳಿಸಿದೆ.
3 / 6
ಮೊದಲ ಪಂದ್ಯದಲ್ಲಿ ಭಾರತ ತಂಡದ ಸ್ಕೋರ್ 300ರ ಗಡಿ ದಾಟಿತ್ತು. ಇಂದುಕೂಡ ಇದೇ ಪ್ರದರ್ಶನ ನೀಡಬೇಕಿದೆ. ನಾಯಕ ಶಿಖರ್ ಧವನ್ ಭರ್ಜರಿ ಫಾರ್ಮ್ನಲ್ಲಿದ್ದರೆ ಶುಭ್ಮನ್ ಗಿಲ್ ಕೂಡ ಅರ್ಧಶತಕ ಸಿಡಿಸಿ ಭರವಸೆ ಮೂಡಿಸಿದ್ದಾರೆ. ಶ್ರೇಯಸ್ ಅಯ್ಯರ್ ಮೂರನೇ ಕ್ರಮಾಂಕಕ್ಕೆ ಫಿಟ್ ಆಗಿದ್ದಾರೆ.
4 / 6
ಕಳೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್ ಕಡೆಯಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿರಲಿಲ್ಲ. ಸೂರ್ಯ 13 ಹಾಗೂ ಸಂಜು 12 ರನ್ಗೆ ಬ್ಯಾಟ್ ಕೆಳಗಿಟ್ಟಿದ್ದರು. ಹೀಗಾಗಿ ಇವರು ಮಿಂಚಬೇಕಿದೆ.
5 / 6
ಭಾರತದ ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದೆ. ಮೊಹಮ್ಮದ್ ಸಿರಾಜ್ ಹಾಗೂ ಯುಜ್ವೇಂದ್ರ ಚಹಲ್ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದರು. ಆದರೆ, ಪ್ರಸಿದ್ಧ್ ಕೃಷ್ಣ ಕಳೆದ ಕೆಲವು ಪಂದ್ಯಗಳಿಂದ ವಿಕೆಟ್ ಕೀಳಲು ಪರದಾಡುತ್ತಿದ್ದಾರೆ. ಇಂದು ಪ್ರಸಿದ್ಧ್ ಬದಲಿಗೆ ಅರ್ಶ್ದೀಪ್ ಸಿಂಗ್ ಕಣಕ್ಕಿಳಿಯುವ ಸಂಭವವಿದೆ.
6 / 6
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7 ಗಂಟೆಯಿಂದ ಶುರುವಾಗಲಿದೆ. ನೇರಪ್ರಸಾರ ಡಿಡಿ ನ್ಯಾಷನಲ್ ಚಾನೆಲ್ ನಲ್ಲಿ ಇರಲಿದೆ. ಹಾಗೆಯೇ ಸ್ಪೋರ್ಟ್ಸ್ ಮ್ಯಾಕ್ಸ್ ಚಾನೆಲ್ ನಲ್ಲೂ ಲೈವ್ ಇರಲಿದೆ. ಫ್ಯಾನ್‌ಕೋಡ್ ಆ್ಯಪ್ ಮತ್ತು ವೆಬ್ ಸೈಟ್ ಮೂಲಕ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.
Published On - 11:31 am, Sun, 24 July 22