- Kannada News Photo gallery Cricket photos Team India squad for ICC World Test Championship 2023 Final announced jasprit bumrah out Ajinkya Rahane Returns
India Squad WTC Final 2023: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಗೆ ಭಾರತ ತಂಡ ಪ್ರಕಟ: ಬುಮ್ರಾ ಔಟ್, ರಹಾನೆ ಕಮ್ಬ್ಯಾಕ್
India's squad for WTC final: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2023 ಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.
Updated on:Apr 25, 2023 | 11:38 AM

ಈ ವರ್ಷ ಜೂನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ 2023 ಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ನಿರೀಕ್ಷೆಯಂತೆ ಇಂಜುರಿಯಿಂದ ಗುಣಮುಖರಾಗದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಅಜಿಂಕ್ಯಾ ರಹಾನೆ ಕಮ್ಬ್ಯಾಕ್ ಮಾಡಿದ್ದಾರೆ.

ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು ಶುಭ್ಮನ್ ಗಿಲ್ ಆಯ್ಕೆ ಆಗಿದ್ದಾರೆ. ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ಗೆ ವಿಶ್ರಾಂತಿ ಬೇಕಿರುವ ಕಾರಣ ಅವರುಕೂಡ ಹೊರಗುಳಿದಿದ್ದಾರೆ. ಕೆಎಸ್ ಭರತ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿರಲಿದ್ದಾರೆ.

ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್ಗಳಾಗಿ ನಾಲ್ವರು ಆಯ್ಕೆ ಆಗಿದ್ದಯ ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಇದ್ದಾರೆ.

ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತದ ಟೆಸ್ಟ್ ತಂಡ WTC ಫೈನಲ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ನಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನ ಈ ರೋಚಕ ಕಾದಾಟಕ್ಕೆ ಸಾಕ್ಷಿಯಾಗಲಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡ. (ಫೋಟೋ ಕೃಪೆ: BCCI, Twitter)
Published On - 11:38 am, Tue, 25 April 23
