ಐಸಿಸಿ ಟಿ20 ವಿಶ್ವಕಪ್ನಲ್ಲಿ ಅಕ್ಟೋಬರ್ 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.
ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ರೋಹಿತ್ ಪಡೆ ಈಗಾಗಲೇ ಎಮ್ಸಿಜಿಗೆ ಕಾಲಿಟ್ಟಿದ್ದು ಅಭ್ಯಾಸ ಕೂಡ ಶುರು ಮಾಡಿದೆ. ಬಿಸಿಸಿಐ ಆಟಗಾರರು ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಹಂಚಿಕೊಂಡಿದೆ. ಮೆಲ್ಬೋರ್ನ್ನಲ್ಲಿ ಮಳೆಯ ಆರ್ಭಟ ಕೂಡ ಕಡಿಮೆ ಆಗಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ಟಿ20 ವಿಶ್ವಕಪ್ ಮಹಾ ಟೂರ್ನಿಯಲ್ಲಿ ಇದುವರೆಗೆ ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಈ ಆರು ಪಂದ್ಯಗಳಲ್ಲಿ ಪೈಕಿ ಟೀಮ್ ಇಂಡಿಯಾ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಕ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ.
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಬಲಿಷ್ಠ ಆಟಗಾರರನ್ನು ಕಣಕ್ಕಿಳಿಸುವ ಯೋಜನೆ ಮಾಡಿರುವ ಕೋಚ್ ಹಾಗು ನಾಯಕ ಹಿರಿಯ, ಕಿರಿಯ ಎಂದು ನೋಡದೆ ಫಾರ್ಮ್ನಲ್ಲಿರುವ ಪ್ಲೇಯರ್ಸ್ಗೆ ಮಣೆ ಹಾಕಲು ಮುಂದಾಗಿದ್ದಾರೆ.
ಮಾಹಿತಿಯ ಪ್ರಕಾರ ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.
ಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಎರಡೂ ವಾರ್ಮ್-ಅಪ್ ಮ್ಯಾಚ್ನಲ್ಲಿ ಪಂತ್ 9 ರನ್ ಗಳಿಸಿ ಔಟಾಗಿದ್ದರು. ಫಾರ್ಮ್ನಲ್ಲಿ ಇಲ್ಲದ ಪಂತ್ ಅವರನ್ನು ನಂತರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಬೆಂಚ್ ಕಾಯಿಸಲಾಯಿತು.
ಮೊಹಮ್ಮದ್ ಶಮಿ ಅಭ್ಯಾಸ ಪಂದ್ಯದಲ್ಲಿ ಮಾಡಿದ ಒಂದು ಓವರ್ ಭಾರತಕ್ಕೆ ಆತ್ಮವಿಶ್ವಾಸ ತಂದಿದೆ ಜಸ್ಪ್ರೀತ್ ಬುಮ್ರಾ ಜಾಗವನ್ನು ಇವರು ತುಂಬಲಿದ್ದಾರೆ ಎಂದು ಹೇಳಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
Published On - 10:02 am, Fri, 21 October 22