- Kannada News Photo gallery Cricket photos Team India's Winning Start: Surya Kumar Yadav's Captaincy Record Beats Kohli, Dhoni
ಧೋನಿ, ಕೊಹ್ಲಿ, ರೋಹಿತ್ಗಿಂತ ಸೂರ್ಯ ಉತ್ತಮ ನಾಯಕ; ಇಲ್ಲಿದೆ ಪುರಾವೆ
Surya Kumar Yadav's Captaincy Record: ಏಷ್ಯಾಕಪ್ 2025 ರಲ್ಲಿ ಭಾರತ ತಂಡ ಯುಎಇ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 9 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಗೆಲುವಿನ ಶೇಕಡಾವಾರು ಪ್ರಮಾಣದಲ್ಲಿ ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಮೀರಿಸಿದ್ದಾರೆ.
Updated on:Sep 11, 2025 | 6:50 PM

2025 ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಭರ್ಜರಿ ಆರಂಭವನ್ನು ಪಡೆದಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ವಿರುದ್ಧ 9 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಯುಎಇ ತಂಡವನ್ನು ಕೇವಲ 57 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ 4.3 ಓವರ್‌ಗಳಲ್ಲಿ ಗೆಲುವಿನ ಗುರಿ ತಲುಪಿತು. ಈ ಗೆಲುವಿನೊಂದಿಗೆ, ಸೂರ್ಯಕುಮಾರ್ ಯಾದವ್ ನಾಯಕತ್ವದ ವಿಷಯದಲ್ಲಿ ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

2023 ರಲ್ಲಿ ಸೂರ್ಯಕುಮಾರ್ ಯಾದವ್ ಅವರಿಗೆ ಟಿ20 ತಂಡದ ನಾಯಕತ್ವ ನೀಡಲಾಯಿತು. ಅವರ ನಾಯಕತ್ವದಲ್ಲಿ ಭಾರತ ತಂಡ ಇದುವರೆಗೆ 23 ಪಂದ್ಯಗಳನ್ನು ಆಡಿದೆ. ಇದರಲ್ಲಿ 18 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, 4 ಪಂದ್ಯಗಳಲ್ಲಿ ಭಾರತ ಸೋಲು ಅನುಭವಿಸಿದೆ. ಒಂದು ಪಂದ್ಯ ಟೈ ಆಗಿದೆ. ಈ ಅವಧಿಯಲ್ಲಿ ಅವರ ಗೆಲುವಿನ ಶೇಕಡಾವಾರು ಪ್ರಮಾಣ 82.6 ರಷ್ಟಿದೆ.

ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಅವರು 62 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 49 ಪಂದ್ಯಗಳಲ್ಲಿ ಗೆದ್ದಿದ್ದರೆ,12 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದಾರೆ. ಒಂದು ಪಂದ್ಯ ಟೈ ಆಗಿತ್ತು. ರೋಹಿತ್ ಶರ್ಮಾ ಅವರ ಗೆಲುವಿನ ಶೇಕಡಾವಾರು 80.6 ಆಗಿದೆ.

ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ಗೆಲುವಿನ ಶೇಕಡಾವಾರು 66.7 ಆಗಿದ್ದು, ಕೊಹ್ಲಿ 50 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 30 ಪಂದ್ಯಗಳಲ್ಲಿ ಗೆದ್ದಿದ್ದರೆ, 16 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದಾರೆ. ಎರಡು ಪಂದ್ಯಗಳು ಟೈ ಆಗಿದ್ದರೆ, ಎರಡು ಪಂದ್ಯಗಳು ರದ್ದಾಗಿವೆ.

ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗೆಲುವಿನ ಶೇಕಡಾವಾರು ಪ್ರಮಾಣದಲ್ಲಿ ಮಹೇಂದ್ರ ಸಿಂಗ್ ಧೋನಿಗಿಂತ ಮುಂದಿದ್ದಾರೆ. ಅವರು 16 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ. ತಂಡವು ಈ ಪೈಕಿ 10 ಪಂದ್ಯಗಳಲ್ಲಿ ಗೆದ್ದಿದ್ದು, 5 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದಾರೆ. ಒಂದು ಪಂದ್ಯ ಟೈ ಆಗಿತ್ತು. ಹಾರ್ದಿಕ್ ಪಾಂಡ್ಯ ಅವರ ಗೆಲುವಿನ ಶೇಕಡಾವಾರು 62.5 ಆಗಿದೆ.

ಟೀಂ ಇಂಡಿಯಾದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. 72 ಪಂದ್ಯಗಳಲ್ಲಿ ನಾಯಕತ್ವ ವಹಿಸಿರುವ ಧೋನಿ 41 ಪಂದ್ಯಗಳನ್ನು ಗೆದ್ದಿದ್ದರೆ 28 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದಾರೆ. ಒಂದು ಪಂದ್ಯ ಟೈ ಆಗಿದ್ದರೆ ಎರಡು ಪಂದ್ಯಗಳು ರದ್ದಾಗಿದ್ದವು. ಉಳಿದಂತೆ ಧೋನಿ ಗೆಲುವಿನ ಶೇಕಡಾವಾರು 60.6 ರಷ್ಟಿದೆ.
Published On - 6:49 pm, Thu, 11 September 25




