ಗಂಭೀರ್ ಗರಡಿಯಲ್ಲಿ ಟೀಮ್ ಇಂಡಿಯಾಗೆ ಹೀನಾಯ ಸೋಲುಗಳ ಸರಮಾಲೆ
Gautam Gambhir: ಗೌತಮ್ ಗಂಭೀರ್ ಕೋಚಿಂಗ್ನಲ್ಲಿ ಟೀಮ್ ಇಂಡಿಯಾ 5 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇದರಲ್ಲಿ ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು ಮೂರು ಏಕದಿನ ಪಂದ್ಯಳಲ್ಲಿ 2 ಜಯ ಹಾಗೂ 1 ಡ್ರಾ ಸಾಧಿಸಿದೆ. ಹಾಗೆಯೇ 6 ಟಿ20 ಪಂದ್ಯಗಳಲ್ಲಿ ಎಲ್ಲಾ ಮ್ಯಾಚ್ಗಳಲ್ಲೂ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.
1 / 10
ಗೌತಮ್ ಗಂಭೀರ್ ಗರಡಿಯಲ್ಲಿ ಟೀಮ್ ಇಂಡಿಯಾ ಈವರೆಗೆ 14 ಪಂದ್ಯಗಳನ್ನಾಡಿದೆ. ಈ ಹದಿನಾಲ್ಕು ಪಂದ್ಯಗಳಲ್ಲಿ ಭಾರತ ತಂಡದ ಪ್ರದರ್ಶನ ಅಷ್ಟಕ್ಕಷ್ಟೇ. ಏಕೆಂದರೆ ಗಂಭೀರ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಟಿ20 ಪಂದ್ಯಗಳಲ್ಲಿ ಮಿಂಚಿದರೂ, ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಮುಗ್ಗರಿಸಿದೆ. ಅದರಲ್ಲೂ ಹೀನಾಯ ಸೋಲುಗಳಿಗೆ ಕೊರೊಳೊಡ್ಡಿವೆ. ಗಂಭೀರ್ ಕೋಚ್ ಆದ ಬಳಿಕ ಭಾರತ ಕಂಡಂತಹ ಹೀನಾಯ ಸೋಲುಗಳ ಸರಮಾಲೆ ಈ ಕೆಳಗಿನಂತಿದೆ...
2 / 10
ಗೌತಮ್ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡವು ಶ್ರೀಲಂಕಾ ವಿರುದ್ಧ ಸರಣಿ ಸೋತಿದೆ. ಅದು ಕೂಡ 27 ವರ್ಷಗಳ ಬಳಿಕ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ 2 ದಶಕಗಳ ಬಳಿಕ ಶ್ರೀಲಂಕಾ ತಂಡವು ಭಾರತದ ವಿರುದ್ಧ ಏಕದಿನ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
3 / 10
ಶ್ರೀಲಂಕಾ ವಿರುದ್ಧದ ಸರಣಿಯನ್ನು 2-0 ಅಂತರದಿಂದ ಸೋತಿದ್ದು ಒಂದೆಡೆಯಾದರೆ (ಒಂದು ಪಂದ್ಯ ಡ್ರಾ), ಈ ಸರಣಿಯ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಆಲೌಟ್ ಆಗಿತ್ತು ಎಂಬುದು ವಿಶೇಷ. ಅಂದರೆ ಏಕದಿನ ಇತಿಹಾಸದಲ್ಲಿ ಮೊದಲ ಬಾರಿಗೆ ಟೀಮ್ ಇಂಡಿಯಾ 30 ವಿಕೆಟ್ ಕಳೆದುಕೊಂಡು 3 ಪಂದ್ಯಗಳ ಏಕದಿನ ಸರಣಿ ಸೋತ ಹೀನಾಯ ದಾಖಲೆ ಬರೆದಿದೆ.
4 / 10
ಶ್ರೀಲಂಕಾ ವಿರುದ್ಧದ ಸರಣಿ ಸೋಲಿನೊಂದಿಗೆ ಭಾರತ ತಂಡವು ಕ್ಯಾಲೆಂಡರ್ ವರ್ಷವೊಂದರಲ್ಲಿ ಯಾವುದೇ ಜಯ ಸಾಧಿಸದೇ ಏಕದಿನ ಸರಣಿ ವೇಳಾಪಟ್ಟಿಯನ್ನು ಅಂತ್ಯಗೊಳಿಸಿದೆ. 45 ವರ್ಷಗಳ ಬಳಿಕ ಭಾರತ ತಂಡವು ಏಕದಿನ ಪಂದ್ಯ ಗೆಲ್ಲದೇ ವರ್ಷವೊಂದನ್ನು ಅಂತ್ಯಗೊಳಿಸಿರುವುದು ಇದೇ ಮೊದಲು.
5 / 10
ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲುವುದರೊಂದಿಗೆ, ನ್ಯೂಝಿಲೆಂಡ್ ತಂಡವು 36 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಪಂದ್ಯ ಗೆದ್ದ ಸಾಧನೆ ಮಾಡಿದೆ. ಇದರೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ತಂಡದ 19 ವರ್ಷಗಳ ಗೆಲುವಿನ ನಾಗಾಲೋಟ ಕೂಡ ಅಂತ್ಯವಾಯ್ತು.
6 / 10
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 46 ರನ್ಗಳಿಗೆ ಟೀಮ್ ಇಂಡಿಯಾ ಆಲೌಟ್ ಆಯಿತು. ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ ಭಾರತ ತಂಡ ಕಲೆಹಾಕಿದ ಅತ್ಯಂತ ಕಡಿಮೆ ಸ್ಕೋರ್ ಎಂಬುದು ವಿಶೇಷ.
7 / 10
92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ ಸರಣಿ ಸೋತಿದೆ. ಅಂದರೆ ಗೌತಮ್ ಗಂಭೀರ್ ಕೋಚಿಂಗ್ನಲ್ಲಿ ಟೀಮ್ ಇಂಡಿಯಾ ಕಿವೀಸ್ ವಿರುದ್ಧದ ಪಾರುಪತ್ಯಕ್ಕೆ ತೆರೆ ಎಳೆದಿದೆ.
8 / 10
ನ್ಯೂಝಿಲೆಂಡ್ ವಿರುದ್ಧದ ಸರಣಿ ಸೋಲಿನೊಂದಿಗೆ ತವರಿನಲ್ಲಿ ಭಾರತ ತಂಡದ 12 ವರ್ಷಗಳ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಂತಾಗಿದೆ. ಅಲ್ಲದೆ 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಸತತ ಟೆಸ್ಟ್ ಪಂದ್ಯಗಳನ್ನು ಸೋತು ನಿರಾಸೆ ಮೂಡಿಸಿದೆ.
9 / 10
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 19 ವರ್ಷಗಳ ಟೆಸ್ಟ್ ಗೆಲುವಿನ ನಾಗಾಲೋಟಕ್ಕೆ ತೆರೆ ಎಳೆದಿದ್ದ ಟೀಮ್ ಇಂಡಿಯಾ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲೂ ಸೋತು 12 ವರ್ಷಗಳ ಗೆಲುವಿನ ಪರಂಪರೆಯನ್ನು ಅಂತ್ಯಗೊಳಿಸಿದೆ.
10 / 10
ಇವೆಲ್ಲಕ್ಕಿಂತ ಮುಖ್ಯವಾಗಿ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಭಾರತ ತಂಡವು ತವರಿನಲ್ಲಿ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಇದೇ ಮೊದಲ ಬಾರಿಗೆ ಸೋತಿದೆ. ಅಂದರೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಟೀಮ್ ಇಂಡಿಯಾ ತವರಿನಲ್ಲಿ ಅವಮಾನಕರ ಸೋಲನುಭವಿಸಿದೆ.