AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್​ಗೆ ಕಿಂಗ್ ಕೊಹ್ಲಿ ಗಳಿಸುವ ಆದಾಯ ಇಷ್ಟೊಂದಾ..!

Virat Kohli: ಹಾಪರ್ ಇನ್‌ಸ್ಟಾಗ್ರಾಮ್ ರಿಚ್ ಲಿಸ್ಟ್ 2021 ರ ಪ್ರಕಾರ, ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್​ಗೆ ಪಡೆಯುವ ಸಂಭಾವನೆಯ ವಿಚಾರದಲ್ಲಿ ಇದೀಗ ವಿರಾಟ್ ಕೊಹ್ಲಿ ವಿಶ್ವದ 14 ನೇ ಸ್ಥಾನ ಪಡೆದುಕೊಂಡಿದ್ದಾರೆ. ವರದಿ ಪ್ರಕಾರ ಕೊಹ್ಲಿ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್​ಗೆ ಬರೋಬ್ಬರಿ11.45 ಕೋಟಿ ರೂ. ಚಾರ್ಜ್​ ಮಾಡುತ್ತಾರೆ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Aug 12, 2023 | 9:15 AM

Share
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇದುವರೆಗೆ ಕ್ರಿಕೆಟ್ ಮೈದಾನದಲ್ಲಿ ಲೆಕ್ಕವಿಲ್ಲದಷ್ಟು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಮೈದಾನದಲ್ಲಿ ವಿರಾಟ್ ಕೊಹ್ಲಿಯ ಆಟ, ಅವರ ವ್ಯಕ್ತಿತ್ವ, ಅವರ ಆಟದ ಶೈಲಿ ಮತ್ತು ಇತರ ಹಲವು ಅಂಶಗಳಿಂದ ಅವರಿಗೆ ಅಸಂಖ್ಯಾತ ಅಭಿಮಾನಿಗಳ ಬಳಗವೇ ಇದೆ.

1 / 7
ಇದಲ್ಲದೆ ಕೊಹ್ಲಿ​ ಸೋಶಿಯಲ್ ಮೀಡಿಯಾದಲ್ಲೂ ಕೋಟ್ಯಾಂತರ ಫ್ಯಾನ್ ಫಾಲೋಯಿಂಗ್ ಹೊಂದಿದ್ದಾರೆ. ಅದರಲ್ಲೂ ಇನ್​ಸ್ಟಾಗ್ರಾಂನಲ್ಲಿ 256 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ವಿರಾಟ್, ಕ್ರಿಕೆಟ್​ನಲ್ಲಿ ಇಷ್ಟೊಂದು ಫ್ಯಾನ್ ಫಾಲೋಯಿಂಗ್ ಹೊಂದಿರುವ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

2 / 7
ಹೀಗಾಗಿ ವಿರಾಟ್ ಕೊಹ್ಲಿಗೆ, ಕ್ರಿಕೆಟ್, ಜಾಹೀರಾತುಗಳ ಹೊರತಾಗಿ ಸೋಶಿಯಲ್ ಮೀಡಿಯಾದಲ್ಲಿ ಅಪಾರ ಪ್ರಮಾಣದ ಆದಾಯ ಹರಿದುಬರುತ್ತಿದೆ. ಅದರಲ್ಲೂ ಇನ್ಸ್ಟಾಗ್ರಾಮ್ ಒಂದರಿಂದಲೇ ಕೊಹ್ಲಿ ಖಾತೆಗೆ ಕೋಟಿಗಟ್ಟಲೆ ಆದಾಯ ಸೇರುತ್ತಿದೆ.

3 / 7
ಹಾಪರ್ ಇನ್‌ಸ್ಟಾಗ್ರಾಮ್ ರಿಚ್ ಲಿಸ್ಟ್ 2021 ರ ಪ್ರಕಾರ, ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್​ಗೆ ಪಡೆಯುವ ಸಂಭಾವನೆಯ ವಿಚಾರದಲ್ಲಿ ಇದೀಗ ವಿರಾಟ್ ಕೊಹ್ಲಿ ವಿಶ್ವದ 14 ನೇ ಸ್ಥಾನ ಪಡೆದುಕೊಂಡಿದ್ದಾರೆ. ವರದಿ ಪ್ರಕಾರ ಕೊಹ್ಲಿ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್​ಗೆ ಬರೋಬ್ಬರಿ11.45 ಕೋಟಿ ರೂ. ಚಾರ್ಜ್​ ಮಾಡುತ್ತಾರೆ ಎಂದು ತಿಳಿದುಬಂದಿದೆ.

4 / 7
ವರದಿ ಪ್ರಕಾರ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್​ಗೆ ಅತಿ ಹೆಚ್ಚು ಸಂಭಾವನೆ ಪಡೆಯುವವರ ಪೈಕಿ ಪೋರ್ಚುಗಲ್​ನ ಫುಟ್ಬಾಲ್ ಲೆಜೆಂಡ್ ಕ್ರಿಸ್ಟಿಯಾನೋ ರೊನಾಲ್ಡೊ ಮೊದಲ ಸ್ಥಾನದಲ್ಲಿದ್ದು, ಈ ಕಾಲ್ಚೆಂಡಿನ ಚತುರ ಒಂದು ಪೋಸ್ಟ್​ಗೆ 26.75 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ.

5 / 7
ಹಾಗೆಯೇ ಎರಡನೇ ಸ್ಥಾನದಲ್ಲಿರುವ ಮತ್ತೊಬ್ಬ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್​ಗೆ 21.49 ಕೋಟಿ ರೂ. ಚಾರ್ಜ್​ ಮಾಡುತ್ತಾರೆ.

6 / 7
ಈ ಪಟ್ಟಿಯಲ್ಲಿರುವ ಭಾರತೀಯರ ಪೈಕಿ ಬಾಲಿವುಡ್ ಮತ್ತು ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಜೋನಾಸ್ 29ನೇ ಸ್ಥಾನದಲ್ಲಿದ್ದಾರೆ. ವರದಿಯ ಪ್ರಕಾರ ಅವರು ಪ್ರತಿ ಪೋಸ್ಟ್‌ಗೆ ಸುಮಾರು 4.40 ಕೋಟಿ ರೂ. ಶುಲ್ಕ ವಿಧಿಸಿದ್ದಾರೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ