ಟೀಮ್ ಇಂಡಿಯಾ ಮಹಿಳೆಯರ ಅಬ್ಬರಕ್ಕೆ ಪುರುಷರ ದಾಖಲೆಯೇ ಉಡೀಸ್
India Women vs Ireland Women: ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮಹಿಳಾ ತಂಡವು 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ಮಹಿಳಾ ತಂಡ 31.4 ಓವರ್‌ಗಳಲ್ಲಿ 131 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 304 ರನ್ ಗಳ ಅಮೋಘ ಜಯ ಸಾಧಿಸಿದೆ.