ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

India Womens Beat England Womens: ಮೊದಲು ಇನಿಂಗ್ಸ್​ನಲ್ಲಿ ಶುಭಾ ಸತೀಶ್ (69), ಜೆಮಿಮಾ ರೊಡ್ರಿಗಾಸ್ (68), ಯಾಸ್ತಿಕಾ ಭಾಟಿಯಾ (66) ಹಾಗೂ ದೀಪ್ತಿ ಶರ್ಮಾ (67) ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 428 ರನ್​ ಕಲೆಹಾಕಿತು.

TV9 Web
| Updated By: ಝಾಹಿರ್ ಯೂಸುಫ್

Updated on: Dec 16, 2023 | 11:57 AM

ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವುಮೆನ್ಸ್​ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿಸುವ ಮೂಲಕ ಟೀಮ್ ಇಂಡಿಯಾ ವುಮೆನ್ಸ್ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಮೊದಲು ಇನಿಂಗ್ಸ್​ನಲ್ಲಿ ಶುಭಾ ಸತೀಶ್ (69), ಜೆಮಿಮಾ ರೊಡ್ರಿಗಾಸ್ (68), ಯಾಸ್ತಿಕಾ ಭಾಟಿಯಾ (66) ಹಾಗೂ ದೀಪ್ತಿ ಶರ್ಮಾ (67) ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 428 ರನ್​ ಕಲೆಹಾಕಿ ಆಲೌಟ್ ಆಯಿತು.

2 / 6
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಇಂಗ್ಲೆಂಡ್ ತಂಡವು ದೀಪ್ತಿ ಶರ್ಮಾ ಅವರ ಸ್ಪಿನ್ ಮೋಡಿಗೆ ತತ್ತರಿಸಿತು. 5.3 ಓವರ್​ ಬೌಲ್ ಮಾಡಿದ್ದ ದೀಪ್ತಿ ಕೇವಲ 7 ರನ್​ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ 136 ರನ್​ಗಳಿಗೆ ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಯಿತು.

3 / 6
ಆ ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 186 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಅದರಂತೆ 479 ರನ್​ಗಳ ಗುರಿಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಕೇವಲ 131 ರನ್​ಗಳಿಗೆ ಆಲೌಟ್ ಆಗಿದೆ.

4 / 6
ಈ ಮೂಲಕ ಟೀಮ್ ಇಂಡಿಯಾ 347 ರನ್​ಗಳ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ಮಹಿಳಾ ತಂಡ ಎಂಬ ವಿಶ್ವ ದಾಖಲೆ ಭಾರತ ತಂಡದ ಪಾಲಾಗಿದೆ.

5 / 6
ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಹೆಸರಿನಲ್ಲಿತ್ತು. 1998 ರಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ 309 ರನ್​ಗಳ ಜಯ ಸಾಧಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 347 ರನ್​ಗಳ ಅಂತರದಿಂದ ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

6 / 6
Follow us
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ