- Kannada News Photo gallery Cricket photos Team Indian Captain refutes BCCI President Sourav Ganguly's claims regarding T20I Captaincy zp
Virat Kohli: ಸೌರವ್ ಗಂಗೂಲಿ ಹೇಳಿದ್ದೆಲ್ಲವೂ ಸುಳ್ಳಾ? ವಿರಾಟ್ ಕೊಹ್ಲಿ ಸ್ಪಷ್ಟನೆ..!
Virat Kohli Press Conference: ಸೌರವ್ ಗಂಗೂಲಿ ಅವರು ಟಿ20 ತಂಡದ ನಾಯಕತ್ವದಿಂದ ಕೆಳಗಿಳಿದ ಪರಿಣಾಮ ಏಕದಿನ ತಂಡದ ನಾಯಕತ್ವ ಕೈತಪ್ಪಿದೆ ಎಂದಿದ್ದಾರೆ. (ಡೈಲಿಹಂಟ್ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)
Updated on: Dec 15, 2021 | 3:55 PM

ಭಾರತ ತಂಡದ ನಾಯಕತ್ವದ ವಿವಾದಕ್ಕೆ ಕೊನೆಗೂ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ತೆರೆ ಎಳೆದಿದ್ದಾರೆ. ದಕ್ಷಿಣ ಆಫ್ರಿಕಾ ಸರಣಿಗೆ ತೆರಳುವ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕೊಹ್ಲಿ ಎಲ್ಲಾ ರೀತಿಯ ಊಹಾಪೋಹಗಳಿಗೆ ಮತ್ತು ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬೈನಲ್ಲಿ ನಡೆದ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಹ್ಲಿ, ಟಿ20 ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ಬಿಸಿಸಿಐಗೆ ತಿಳಿಸಿದಾಗ ಅವರು ಅದನ್ನು ಸ್ವಾಗತಿಸಿದ್ದರು. ಯಾರೂ ಕೂಡ ನಾಯಕತ್ವದಿಂದ ಕೆಳಗಿಳಿಯದಂಯೆ ಮನವಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಆದರೆ ಕೆಲ ದಿನಗಳ ಹಿಂದೆಯಷ್ಟೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಟಿ20 ನಾಯಕತ್ವ ತ್ಯಜಿಸದಂತೆ ಬಿಸಿಸಿಐ ವಿರಾಟ್ ಕೊಹ್ಲಿ ಅವರಲ್ಲಿ ಮನವಿ ಮಾಡಿತ್ತು. ಅಷ್ಟೇ ಅಲ್ಲದೆ ನಾನು ಕೂಡ ಅವರೊಂದಿಗೆ ಈ ಚರ್ಚಿಸಿದ್ದೆ. ಇದಾಗ್ಯೂ ಅವರು ನಮ್ಮ ಮಾತು ಕೇಳಿರಲಿಲ್ಲ ಎಂದು ತಿಳಿಸಿದ್ದರು. ಅಷ್ಟೇ ಅಲ್ಲದೆ ಅವರು ಟಿ20 ನಾಯಕತ್ವ ತ್ಯಜಿಸಿದ ಪರಿಣಾಮ, ಆಯ್ಕೆದಾರರು ಏಕದಿನ ಹಾಗೂ ಟಿ20 ತಂಡಕ್ಕೆ ಒಬ್ಬನೇ ನಾಯಕನನ್ನು ಆಯ್ಕೆ ಮಾಡಿದೆ ಎಂದು ತಿಳಿಸಿದ್ದರು.

ಇದೀಗ ಟಿ20 ನಾಯಕತ್ವವನ್ನು ತ್ಯಜಿಸುವ ನನ್ನ ನಿರ್ಧಾರವನ್ನು ಬಿಸಿಸಿಐ ಸ್ವಾಗತಿಸಿತ್ತು. ಇದರ ಹೊರತಾಗಿ ಯಾರೂ ಕೂಡ ನಾಯಕತ್ವ ತ್ಯಜಿಸಬೇಡಿ ಎಂದು ಮನವಿ ಮಾಡಿರಲಿಲ್ಲ ಎಂದು ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿಯೇ ತಿಳಿಸಿದ್ದಾರೆ. ಇದರೊಂದಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಬಿಸಿಸಿಐ ಹೇಳುತ್ತಿರುವುದು ಸುಳ್ಳಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇನ್ನು ಟಿ20 ತಂಡದ ನಾಯಕತ್ವವನ್ನು ಬಿಡುವಾಗ ಅದನ್ನು ಅತ್ಯುತ್ತಮ ನಿರ್ಧಾರ ಎಂದು ಬಿಸಿಸಿಐ ತಿಳಿಸಿತ್ತು. ಈ ವೇಳೆ ನಾನು ಟೆಸ್ಟ್ ಮತ್ತು ಏಕದಿನ ನಾಯಕನಾಗಿ ಮುಂದುವರಿಯಲು ಬಯಸುತ್ತೇನೆ ಎಂದು ಸಹ ಹೇಳಿದ್ದೆ. ನನ್ನನ್ನು ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಸಬೇಕೆಂದು ಈ ಮೂಲಕ ಕೇಳಿಕೊಳ್ಳಲಾಗಿತ್ತು ಎಂದು ಕೊಹ್ಲಿ ತಿಳಿಸಿದ್ದಾರೆ.

ಇತ್ತ ಸೌರವ್ ಗಂಗೂಲಿ ಅವರು ಟಿ20 ತಂಡದ ನಾಯಕತ್ವದಿಂದ ಕೆಳಗಿಳಿದ ಪರಿಣಾಮ ಏಕದಿನ ತಂಡದ ನಾಯಕತ್ವ ಕೈತಪ್ಪಿದೆ ಎಂದಿದ್ದಾರೆ. ಆದರೆ ಇಲ್ಲಿ ಟಿ20 ತಂಡದ ನಾಯಕತ್ವ ತೊರೆಯುವ ಮುನ್ನವೇ ಕೊಹ್ಲಿ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುವುದಾಗಿ ಬಿಸಿಸಿಐಗೆ ತಿಳಿಸಿದ್ದರು. ಇದಾಗ್ಯೂ ಈ ಸಂದರ್ಭದಲ್ಲಿ ಕೊಹ್ಲಿಗೆ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿದರೆ, ಏಕದಿನ ತಂಡದಿಂದ ನಾಯಕತ್ವ ಬಿಡಬೇಕಾಗುತ್ತೆ ಎಂಬುದನ್ನು ಬಿಸಿಸಿಐ ತಿಳಿಸಲಿಲ್ಲವೇ ಎಂಬ ಪ್ರಶ್ನೆಯೊಂದು ಮೂಡುತ್ತೆ.

ಇದಾಗ್ಯೂ ನನ್ನನ್ನು ಯಾಕಾಗಿ ನಾಯಕತ್ವದಿಂದ ಕೆಳಗಿಳಿಸಲಾಗಿದೆ ಎಂಬುದು ನನಗೆ ಅರ್ಥವಾಗುತ್ತೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ನಿಸ್ಸಂಶಯವಾಗಿ ನನ್ನ ನಾಯಕತ್ವದಲ್ಲಿ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಇದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಬಿಸಿಸಿಐ ತೆಗೆದುಕೊಂಡ ನಿರ್ಧಾರ ಸರಿ ಅಥವಾ ತಪ್ಪು ಎಂಬ ಚರ್ಚೆ ಈಗ ಬೇಡ. ಬಿಸಿಸಿಐ ಈ ನಿರ್ಧಾರವನ್ನು ತಾರ್ಕಿಕ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ, ಅದು ನನಗೆ ಅರ್ಥವಾಗುತ್ತದೆ ಎಂದು ಕೊಹ್ಲಿ ಹೇಳಿದ್ದಾರೆ.

ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲಾ ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ಸ್ಪಷ್ಟನೆ ವೇಳೆ ಅವರು ನೀಡಿರುವ ಉತ್ತರಗಳು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಹೇಳಿಕೆಗಳಿಗೆ ವಿರುದ್ಧವಾಗಿರುವುದು ಸ್ಪಷ್ಟ. ಹೀಗಾಗಿ ನಾಯಕತ್ವದ ಚರ್ಚೆಗಳ ನಡುವೆ ಗಂಗೂಲಿ ಸುಳ್ಳು ಹೇಳಿದ್ರಾ ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿ ಉಳಿದಿದೆ.
