SENA ರಾಷ್ಟ್ರಗಳ ವಿರುದ್ಧ 300 ಕ್ಕೂ ಅಧಿಕ ರನ್‌ಗಳಿಂದ ಗೆದ್ದ ಟೀಂ ಇಂಡಿಯಾ..!
Team India: ಇಂಗ್ಲೆಂಡ್ ವಿರುದ್ಧದ ಈ ಗೆಲುವು ಭಾರತದ ಟೆಸ್ಟ್ ಇತಿಹಾಸದಲ್ಲಿ ಅತಿದೊಡ್ಡ ಗೆಲುವಾಗಿದೆ. ಅಲ್ಲದೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ, ಸೇನಾ ರಾಷ್ಟ್ರಗಳಾದ ಇಂಗ್ಲೆಂಡ್, ಆಸ್ಟ್ರೇಲಿಯ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ವಿರುದ್ಧವೇ ಅತಿದೊಡ್ಡ ಗೆಲುವು ದಾಖಲಿಸಿದ ಇತಿಹಾಸ ಬರೆದಿದೆ.
1 / 7
ರಾಜ್‌ಕೋಟ್‌ನಲ್ಲಿ ನಡೆದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇಂಗ್ಲೆಂಡ್ ತಂಡವನ್ನು 434 ರನ್‌ಗಳಿಂದ ಸೋಲಿಸಿದ ಟೀಂ ಇಂಡಿಯಾ ಟೆಸ್ಟ್ ಮಾದರಿಯಲ್ಲಿ ಸೇನಾ ರಾಷ್ಟ್ರಗಳ ವಿರುದ್ಧ ತನ್ನ ಪಾರುಪತ್ಯ ಮುಂದುವರೆಸಿದೆ.
2 / 7
ಇಂಗ್ಲೆಂಡ್ ವಿರುದ್ಧದ ಈ ಗೆಲುವು ಭಾರತದ ಟೆಸ್ಟ್ ಇತಿಹಾಸದಲ್ಲಿ ಅತಿದೊಡ್ಡ ಗೆಲುವಾಗಿದೆ. ಅಲ್ಲದೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ, ಸೇನಾ ರಾಷ್ಟ್ರಗಳಾದ ಇಂಗ್ಲೆಂಡ್, ಆಸ್ಟ್ರೇಲಿಯ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ವಿರುದ್ಧವೇ ಅತಿದೊಡ್ಡ ಗೆಲುವು ದಾಖಲಿಸಿದ ಇತಿಹಾಸ ಬರೆದಿದೆ.
3 / 7
ಇಂಗ್ಲೆಂಡ್ ವಿರುದ್ಧ 434 ರನ್ ಜಯ: ಇಂದು ಮುಗಿದ ರಾಜ್‌ಕೋಟ್ ಟೆಸ್ಟ್‌ನಲ್ಲಿ ಭಾರತ 434 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಮೇಲೆ ಹೇಳಿದಂತೆ ಇದು ಭಾರತದ ಅತಿ ದೊಡ್ಡ ಗೆಲುವಾಗಿದೆ. ನಾಲ್ಕನೇ ಇನಿಂಗ್ಸ್‌ನಲ್ಲಿ 557 ರನ್ ಗುರಿ ಬೆನ್ನಟ್ಟಿದ ಆಂಗ್ಲರ ತಂಡ ಕೇವಲ 122 ರನ್‌ಗಳಿಗೆ ಆಲೌಟ್ ಆಯಿತು.
4 / 7
ನ್ಯೂಜಿಲೆಂಡ್ ವಿರುದ್ಧ 372 ರನ್ ಗೆಲುವು: ಇಂಗ್ಲೆಂಡ್ ತಂಡವನ್ನು ಮಣಿಸುವುದಕ್ಕೂ ಮೊದಲು ನ್ಯೂಜಿಲೆಂಡ್ ತಂಡವನ್ನು 372 ರನ್‌ಗಳಿಂದ ಮಣಿಸಿದ್ದ ಭಾರತಕ್ಕೆ ಇದು ಟೆಸ್ಟ್ ಕ್ರಿಕೆಟ್ನಲ್ಲಿ ಅತಿದೊಡ್ಡ ಗೆಲುವಾಗಿತ್ತು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಜಿಲೆಂಡ್‌ನ ಎಡಗೈ ಸ್ಪಿನ್ನರ್ ಅಜಾಜ್ ಪಟೇಲ್ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದ ದಾಖಲೆ ನಿರ್ಮಿಸಿದ್ದರಯ. ಇದಾದ ಬಳಿಕವೂ ಭಾರತ 372 ರನ್‌ಗಳಿಂದ ಪಂದ್ಯ ಗೆದ್ದಿತ್ತು.
5 / 7
ದಕ್ಷಿಣ ಆಫ್ರಿಕಾ ವಿರುದ್ಧ 337 ರನ್ ಗೆಲುವು: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ 2015ರಲ್ಲಿ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 337 ರನ್‌ಗಳಿಂದ ಸೋಲಿಸಿತ್ತು. 481 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 143 ಓವರ್ಗಳಲ್ಲಿ 143 ರನ್ಗಳಿಸಲಷ್ಟೇ ಶಕ್ತವಾಯಿತು.
6 / 7
ನ್ಯೂಜಿಲೆಂಡ್ ವಿರುದ್ಧ 321 ರನ್ ಗೆಲುವು: 2016ರಲ್ಲಿ ಇಂದೋರ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ವಿರಾಟ್ ಅವರ ದ್ವಿಶತಕ ಹಾಗೂ ರಹಾನೆ ಶತಕದ ನೆರವಿನಿಂದ ಭಾರತ 557 ರನ್ ಕಲೆಹಾಕಿತು. ಅಂತಿಮವಾಗಿ 475 ರನ್‌ಗಳ ಗುರಿ ಬೆನ್ನಟ್ಟಿದ ಕಿವೀಸ್ ತಂಡ 153 ರನ್‌ಗಳಿಗೆ ಆಲೌಟ್ ಆಗಿತ್ತು.
7 / 7
ಆಸ್ಟ್ರೇಲಿಯಾ ವಿರುದ್ಧ 320 ರನ್: 2008ರಲ್ಲಿ ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ, ಆಸ್ಟ್ರೇಲಿಯಾದ ಗೆಲುವಿಗೆ 516 ರನ್‌ಗಳ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ ರಿಕಿ ಪಾಂಟಿಂಗ್ ತಂಡ 195 ರನ್‌ಗಳಿಗೆ ಆಲೌಟ್ ಆಗಿತ್ತು.