AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Playing XI WTC 2023 Final: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪ್ಲೇಯಿಂಗ್ XI ಗೆ ಭಾರತದ 7 ಆಟಗಾರರು ಫಿಕ್ಸ್: ಯಾರೆಲ್ಲ ಗೊತ್ತೇ?

India vs Australia: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದು ಕುತೂಹಲ ಕೆರಳಿಸಿದೆ. ಆದರೆ, ಈ ಏಳು ಆಟಗಾರರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ. ಉಳಿದ ನಾಲ್ಕು ಸ್ಥಾನಕ್ಕೆ ಪೈಫೋಟಿ ಏರ್ಪಟ್ಟಿದೆ.

Vinay Bhat
|

Updated on: Jun 02, 2023 | 9:00 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬಳಿಕ ಇಡೀ ಕ್ರಿಕೆಟ್ ಜಗತ್ತು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಕಾದುಕುಳಿತಿದೆ. 2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್‌ ಎದುರು ಮುಗ್ಗರಿಸಿತ್ತು.

1 / 8
ಇದೀಗ ಟೀಮ್ ಇಂಡಿಯಾ ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅಪಾಯಕಾರಿ ಆಸ್ಟ್ರೇಲಿಯಾ ತಂಡದ ಸವಾಲೆದುರಿಸಲಿದೆ. ಜೂನ್ 7ಕ್ಕೆ ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಈ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾದ ಎಲ್ಲ ಆಟಗಾರರು ಇಂಗ್ಲೆಂಡ್​ಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2 / 8
ಈ ಹೈವೋಲ್ಟೇಜ್ ಕದನಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದು ಕುತೂಹಲ ಕೆರಳಿಸಿದೆ. ಆದರೆ, ಈ ಏಳು ಆಟಗಾರರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ. ಉಳಿದ ನಾಲ್ಕು ಸ್ಥಾನಕ್ಕೆ ಪೈಫೋಟಿ ಏರ್ಪಟ್ಟಿದೆ.

3 / 8
ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಭಾರತ ಪರ ಓಪನರ್​​ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಭರ್ಜರಿ ಫಾರ್ಮ್​ನಲ್ಲಿರುವ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ. ಐಪಿಎಲ್ 2023 ರಲ್ಲಿ ನಾಲ್ಕು ಶತಕ ಸಿಡಿಸಿ ಮಿಂಚಿರುವ ಗಿಲ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ.

4 / 8
ಮೂರನೇ ಕ್ರಮಾಂಕದಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕ್ರೀಸ್​ಗೆ ಬರಲಿದ್ದಾರೆ. ಎಲ್ಲರಿಗಿಂತ ಮುಂಚೆ ಇಂಗ್ಲೆಂಡ್ ತಲುಪಿದ್ದ ಪೂಜಾರ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.

5 / 8
ಅದ್ಭುತ ಫಾರ್ಮ್​ನಲ್ಲಿರುವ ಮತ್ತೋರ್ವ ಬ್ಯಾಟರ್ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಿದರೆ, ನಂತರದ ಸ್ಥಾನದಲ್ಲಿ ಅಜಿಂಕ್ಯಾ ರಹಾನೆ ಕಣಕ್ಕಿಳಿಯಬಹುದು. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಕೂಡ ತಮ್ಮ ಸ್ಥಾನವನ್ನು ಖಚಿತ ಪಡಿಸಿದ್ದಾರೆ.

6 / 8
ಇನ್ನೊಂದು ಸ್ಪಿನ್ ಆಯ್ಕೆಗೆ ರವಿಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಅಲ್ಲದೆ ವಿಕೆಟ್ ಕೀಪಿಂಗ್​ಗೆ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ನಡುವೆ ಯಾರಿಗೆ ಸ್ಥಾನ ನೋಡಬೇಕಿದೆ.

7 / 8
ಇತ್ತ ವೇಗಿಗಳ ಸಾಲಿನಲ್ಲಿ ಶಾರ್ದುಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಹಾಗೂ ಜಯದೇವ್ ಉನಾದ್ಕಟ್ ಇದ್ದು ಯಾರು ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್