IND Playing XI WTC 2023 Final: ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ಲೇಯಿಂಗ್ XI ಗೆ ಭಾರತದ 7 ಆಟಗಾರರು ಫಿಕ್ಸ್: ಯಾರೆಲ್ಲ ಗೊತ್ತೇ?
India vs Australia: ಟೆಸ್ಟ್ ಚಾಂಪಿಯನ್ಶಿಪ್ ಫೈನಲ್‌ಗೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದು ಕುತೂಹಲ ಕೆರಳಿಸಿದೆ. ಆದರೆ, ಈ ಏಳು ಆಟಗಾರರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ. ಉಳಿದ ನಾಲ್ಕು ಸ್ಥಾನಕ್ಕೆ ಪೈಫೋಟಿ ಏರ್ಪಟ್ಟಿದೆ.
1 / 8
ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬಳಿಕ ಇಡೀ ಕ್ರಿಕೆಟ್ ಜಗತ್ತು ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್‌ಗೆ ಕಾದುಕುಳಿತಿದೆ. 2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ಎದುರು ಮುಗ್ಗರಿಸಿತ್ತು.
2 / 8
ಇದೀಗ ಟೀಮ್ ಇಂಡಿಯಾ ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಅಪಾಯಕಾರಿ ಆಸ್ಟ್ರೇಲಿಯಾ ತಂಡದ ಸವಾಲೆದುರಿಸಲಿದೆ. ಜೂನ್ 7ಕ್ಕೆ ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಈ ಪಂದ್ಯ ಶುರುವಾಗಲಿದೆ. ಈಗಾಗಲೇ ಟೀಮ್ ಇಂಡಿಯಾದ ಎಲ್ಲ ಆಟಗಾರರು ಇಂಗ್ಲೆಂಡ್ಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
3 / 8
ಈ ಹೈವೋಲ್ಟೇಜ್ ಕದನಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದು ಕುತೂಹಲ ಕೆರಳಿಸಿದೆ. ಆದರೆ, ಈ ಏಳು ಆಟಗಾರರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗಿದೆ. ಉಳಿದ ನಾಲ್ಕು ಸ್ಥಾನಕ್ಕೆ ಪೈಫೋಟಿ ಏರ್ಪಟ್ಟಿದೆ.
4 / 8
ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಭಾರತ ಪರ ಓಪನರ್ಗಳಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಭರ್ಜರಿ ಫಾರ್ಮ್ನಲ್ಲಿರುವ ಶುಭ್ಮನ್ ಗಿಲ್ ಕಣಕ್ಕಿಳಿಯುವುದು ಖಚಿತ. ಐಪಿಎಲ್ 2023 ರಲ್ಲಿ ನಾಲ್ಕು ಶತಕ ಸಿಡಿಸಿ ಮಿಂಚಿರುವ ಗಿಲ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ.
5 / 8
ಮೂರನೇ ಕ್ರಮಾಂಕದಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕ್ರೀಸ್ಗೆ ಬರಲಿದ್ದಾರೆ. ಎಲ್ಲರಿಗಿಂತ ಮುಂಚೆ ಇಂಗ್ಲೆಂಡ್ ತಲುಪಿದ್ದ ಪೂಜಾರ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.
6 / 8
ಅದ್ಭುತ ಫಾರ್ಮ್ನಲ್ಲಿರುವ ಮತ್ತೋರ್ವ ಬ್ಯಾಟರ್ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಿದರೆ, ನಂತರದ ಸ್ಥಾನದಲ್ಲಿ ಅಜಿಂಕ್ಯಾ ರಹಾನೆ ಕಣಕ್ಕಿಳಿಯಬಹುದು. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಕೂಡ ತಮ್ಮ ಸ್ಥಾನವನ್ನು ಖಚಿತ ಪಡಿಸಿದ್ದಾರೆ.
7 / 8
ಇನ್ನೊಂದು ಸ್ಪಿನ್ ಆಯ್ಕೆಗೆ ರವಿಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ನಡುವೆ ಪೈಪೋಟಿ ಏರ್ಪಟ್ಟಿದೆ. ಅಲ್ಲದೆ ವಿಕೆಟ್ ಕೀಪಿಂಗ್ಗೆ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ನಡುವೆ ಯಾರಿಗೆ ಸ್ಥಾನ ನೋಡಬೇಕಿದೆ.
8 / 8
ಇತ್ತ ವೇಗಿಗಳ ಸಾಲಿನಲ್ಲಿ ಶಾರ್ದುಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಹಾಗೂ ಜಯದೇವ್ ಉನಾದ್ಕಟ್ ಇದ್ದು ಯಾರು ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.