ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ

Deepak Hooda: 29 ವರ್ಷದ ದೀಪಕ್ ಹೂಡಾ ಟೀಮ್ ಇಂಡಿಯಾ ಪರ ಒಟ್ಟು 31 ಪಂದ್ಯಗಳನ್ನಾಡಿದ್ದಾರೆ. 10 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಹೂಡಾ 153 ರನ್​ ಹಾಗೂ 3 ವಿಕೆಟ್ ಪಡೆದಿದ್ದಾರೆ. ಹಾಗೆಯೇ 21 ಟಿ20 ಪಂದ್ಯಗಳಿಂದ 6 ವಿಕೆಟ್ ಮತ್ತು 368 ರನ್ ಕಲೆಹಾಕಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಶತಕ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ದೀಪಕ್ ಹೂಡಾ ಕೂಡ ಒಬ್ಬರು.

ಝಾಹಿರ್ ಯೂಸುಫ್
|

Updated on:Jul 20, 2024 | 11:36 AM

ಟೀಮ್ ಇಂಡಿಯಾ ಆಟಗಾರ ದೀಪಕ್ ಹೂಡಾ (Deepak Hooda) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆತಿಯನ್ನು ಸಾಂಪ್ರದಾಯಿಕ ಶೈಲಿಯಲ್ಲಿ ವಿವಾಹವಾಗಿರುವ ಶುಭ ಸುದ್ದಿಯನ್ನು ಹೂಡಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ತಿಳಿಸಿದ್ದಾರೆ.

1 / 5
ಹಿಮಾಚಲ ಮೂಲದ ಯುವತಿಯನ್ನು ದೀಪಕ್ ಹೂಡಾ ಕಳೆದ 9 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಒಂಬತ್ತು ವರ್ಷಗಳ ಕಾಯುವಿಕೆಯ ನಂತರ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹರ್ಯಾನ್ವಿ ಶೈಲಿಯಲ್ಲಿ ನಡೆದ ಈ ಮದುವೆ ಸಮಾರಂಭದಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಕಾಣಿಸಿಕೊಂಡಿದ್ದರು.

2 / 5
ಹಿಮಾಚಲ ಪ್ರದೇಶದಿಂದ ಬಂದಿರುವ ತನ್ನ ವಧುವಿಗೆ ಸೋಷಿಯಲ್ ಮೀಡಿಯಾ ಮೂಲಕ ಹೂಡಾ ಆತ್ಮೀಯ ಸ್ವಾಗತವನ್ನು ಕೋರಿದ್ದಾರೆ. ಅಲ್ಲದೆ ಕುಟುಂಬ ಮತ್ತು ಸ್ನೇಹಿತರಿಂದ ಆಶೀರ್ವಾದಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಇದೀಗ ದೀಪಕ್ ಹೂಡಾ ಅವರ ಮದುವೆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ದೀಪಕ್ ಹೂಡಾ ಈ ಹಿಂದೆ ಟೀಮ್ ಇಂಡಿಯಾ ಪರ ಆಡಿದ್ದರು. 10 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಅವರು 153 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಹೂಡಾ 17 ಇನಿಂಗ್ಸ್​ಗಳಲ್ಲಿ 1 ಭರ್ಜರಿ ಶತಕದೊಂದಿಗೆ 368 ರನ್ ಕಲೆಹಾಕಿದ್ದರು.

4 / 5
ಆದರೆ ಕಳೆದ ಬಾರಿಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ದೀಪಕ್ ಹೂಡಾ ಕಳಪೆ ಫಾರ್ಮ್ ಪ್ರದರ್ಶಿಸಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದ ಹೂಡಾ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲದೆ ಮುಂಬರುವ ಶ್ರೀಲಂಕಾ ಸರಣಿಗೂ ಆಯ್ಕೆಯಾಗಿಲ್ಲ.

5 / 5

Published On - 11:33 am, Sat, 20 July 24

Follow us