- Kannada News Photo gallery Cricket photos Team India's Dominant Edgbaston Victory: 6 Player Performances That Made History
IND vs ENG: ಈ ಆರು ಆಟಗಾರರಿಂದ ಎಡ್ಜ್‌ಬಾಸ್ಟನ್‌ನಲ್ಲಿ ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ
India's Historic Edgbaston Test Win: ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಅದ್ಭುತ ಗೆಲುವು ಹೊಸ ಇತಿಹಾಸ ಸೃಷ್ಟಿಸಿದೆ. ಶುಭ್ಮನ್ ಗಿಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ ಮತ್ತು ಯಶಸ್ವಿ ಜೈಸ್ವಾಲ್ ಅವರಿಂದ ಮೂಡಿದ ಅದ್ಭುತ ಪ್ರದರ್ಶನಗಳು ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದವು. ಈ ಪಂದ್ಯದಲ್ಲಿ ಗಿಲ್ ಅವರ ದ್ವಿಶತಕ ಮತ್ತು ಆಕಾಶ್ ದೀಪ್ ಅವರ ಅದ್ಭುತ ಬೌಲಿಂಗ್ ಪ್ರಮುಖ ಪಾತ್ರವಹಿಸಿತು.
Updated on: Jul 06, 2025 | 10:45 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಿತು. ಈ ಪಂದ್ಯವನ್ನು ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಳ್ಳುವುದರೊಂದಿಗೆ ಇತಿಹಾಸ ನಿರ್ಮಿಸಿತು. ಈ ಮೈದಾನದಲ್ಲಿ ಭಾರತದ ಮೊದಲ ಟೆಸ್ಟ್ ಗೆಲುವು ಇದಾಗಿದ್ದು, ಇದು ತಂಡಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಹೆಮ್ಮೆಯ ಕ್ಷಣವಾಯಿತು. ಈ ಐತಿಹಾಸಿಕ ಗೆಲುವಿನ ಹಿಂದೆ ಆರು ಆಟಗಾರರು ದೊಡ್ಡ ಕೊಡುಗೆ ನೀಡಿದ್ದಲ್ಲದೆ ತಮ್ಮ ಅದ್ಭುತ ಪ್ರದರ್ಶನದಿಂದ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಈ ಪಂದ್ಯದಲ್ಲಿ ಶುಭ್ಮನ್ ಗಿಲ್ ತಮ್ಮ ನಾಯಕತ್ವ ಮತ್ತು ಬ್ಯಾಟಿಂಗ್ ಮೂಲಕ ಎಲ್ಲರನ್ನೂ ಮೆಚ್ಚಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ 269 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ ಗಿಲ್, ಇಂಗ್ಲೆಂಡ್‌ನಲ್ಲಿ ಯಾವುದೇ ಭಾರತೀಯರು ಮಾಡಿದ ಅತ್ಯಧಿಕ ಸ್ಕೋರ್ ಎಂಬ ದಾಖಲೆಯನ್ನು ನಿರ್ಮಿಸಿದರು. ಹಾಗೆಯೇ ಎರಡನೇ ಇನ್ನಿಂಗ್ಸ್‌ನಲ್ಲಿಯೂ 161 ರನ್‌ಗಳ ಕೊಡುಗೆ ನೀಡುವ ಮೂಲಕ ಇಂಗ್ಲೆಂಡ್ಗೆ 608 ರನ್‌ಗಳ ಬೃಹತ್ ಗುರಿ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಿದ್ದರಿಂದಾಗಿ ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಆಕಾಶ್ ದೀಪ್ ತಮ್ಮ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದರು. ಇಂಗ್ಲೆಂಡ್‌ನ ಪಿಚ್‌ನಲ್ಲಿ ಮೊದಲ ಬಾರಿಗೆ ಆಡಿದ ಅವರು ತಮ್ಮ ವೇಗ ಮತ್ತು ನಿಖರವಾದ ಬೌಲಿಂಗ್‌ನಿಂದ ಎದುರಾಳಿ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ತೊಂದರೆ ನೀಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ಪ್ರಮುಖ ವಿಕೆಟ್‌ಗಳನ್ನು ಪಡೆದಿದ್ದ ಆಕಾ್, ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

ಮೊದಲ ಟೆಸ್ಟ್ ಪಂದ್ಯದಲ್ಲಿ ಸಪ್ಪೆ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್, ಎರಡನೇ ಟೆಸ್ಟ್ನಲ್ಲಿ ತಮ್ಮ ಅದ್ಭುತ ಬೌಲಿಂಗ್ ಮೂಲಕ ಬುಮ್ರಾ ಅನುಪಸ್ಥಿತಿಯಲ್ಲಿ ತಂಡದ ಬೌಲಿಂಗ್ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗಳನ್ನು ಕಬಳಿಸಿದ್ದ ಸಿರಾಜ್, ಎರಡನೇ ಇನ್ನಿಂಗ್ಸ್‌ನಲ್ಲಿಯೂ 1 ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ಗೆ ಆರಂಭಿಕ ಆಘಾತ ನೀಡಿದರು. ಇದರಿಂದಾಗಿ ಭಾರತವು ಪಂದ್ಯದ ಮೇಲೆ ಬಲವಾದ ಹಿಡಿತ ಸಾಧಿಸಿತು.

ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಕೂಡ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್‌ಗಳು ಇನ್ನಿಂಗ್ಸ್ ಆಡಿದ್ದ ಜಡೇಜಾ, ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 69 ರನ್‌ಗಳ ಕೊಡುಗೆ ನೀಡಿದರು, ಇದರಲ್ಲಿ ಗಿಲ್ ಅವರೊಂದಿಗೆ ಶತಕದ ಪಾಲುದಾರಿಕೆಯೂ ಸೇರಿತ್ತು. ಹಾಗೆಯೇ ಬೌಲಿಂಗ್ನಲ್ಲಿಯೂ ಜಡೇಜಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾದರು. ಮೊದಲ ಇನ್ನಿಂಗ್ಸ್‌ನಲ್ಲಿ 87 ರನ್ ಬಾರಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಹಾಗೆಯೇ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಅವರು ಕೇವಲ 22 ಎಸೆತಗಳನ್ನು ಎದುರಿಸಿ 28 ರನ್ ಕಲೆಹಾಕುವ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು.

ಈ ಐವರ ಜೊತೆಗೆ ವಿಕೆಟ್ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಕೂಡ ಉಪಯುಕ್ತ ಕಾಣಿಕೆ ನೀಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ 25 ರನ್ಗಳಿಗೆ ಸುಸ್ತಾಗಿದ್ದ ರಿಷಭ್ ಪಂತ್, ಎರಡನೇ ಇನ್ನಿಂಗ್ಸ್‌ನಲ್ಲಿ ತಮ್ಮ ಹೊಡಿಬಡಿ ಆಟದ ಮೂಲಕ ಸ್ಕೋರ್ ಬೋರ್ಡ್ ವೇಗವನ್ನು ಹೆಚ್ಚಿಸಿದರು. ಅಲ್ಲದೆ ನಾಯಕ ಗಿಲ್ ಜೊತೆಗೆ ಸಮಯೋಜಿತ ಜೊತೆಯಾಟವನ್ನು ನಡೆಸಿ 65 ರನ್‌ಗಳ ಕಾಣಿಕೆ ನೀಡಿದರು.
