- Kannada News Photo gallery Cricket photos Team India's five cricketers celebrating their birthday on 6th december
Happy Birthday: ಇಂದು ಐವರು ಟೀಂ ಇಂಡಿಯಾ ಕ್ರಿಕೆಟಿಗರ ಜನ್ಮದಿನ; ಶುಭಕೋರಿದ ಬಿಸಿಸಿಐ
Happy Birthday: ರವೀಂದ್ರ ಜಡೇಜಾ, ಜಸ್ಪ್ರೀತ್ ಬಮ್ಮರ್ ಮತ್ತು ಶ್ರೇಯಸ್ ಅಯ್ಯರ್ ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂವರಲ್ಲದೆ ತಂಡದ ಮಾಜಿ ಆಟಗಾರರಾದ ಆರ್.ಪಿ ಸಿಂಗ್ ಹಾಗೂ ಕನ್ನಡಿಗ ಕರುಣ್ ನಾಯರ್ಗೂ ಇಂದು ಜನ್ಮದಿನವಾಗಿದೆ.
Updated on: Dec 06, 2023 | 12:34 PM

ಮುಂದಿನ ಸರಣಿಗಾಗಿ ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾಗೆ ಪ್ರಯಾಣ ಬೆಳೆಸಿದೆ. ಈ ಸರಣಿಯ ಭಾಗಿಯಾಗಿರುವ ರವೀಂದ್ರ ಜಡೇಜಾ, ಜಸ್ಪ್ರೀತ್ ಬಮ್ಮರ್ ಮತ್ತು ಶ್ರೇಯಸ್ ಅಯ್ಯರ್ ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂವರಲ್ಲದೆ ತಂಡದ ಮಾಜಿ ಆಟಗಾರರಾದ ಆರ್.ಪಿ ಸಿಂಗ್ ಹಾಗೂ ಕನ್ನಡಿಗ ಕರುಣ್ ನಾಯರ್ಗೂ ಇಂದು ಜನ್ಮದಿನವಾಗಿದೆ.

ರವೀಂದ್ರ ಜಡೇಜಾ: ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಆಟಗಾರ ರವೀಂದ್ರ ಜಡೇಜಾ ಇಂದು ತಮ್ಮ 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬೌಲಿಂಗ್ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್ನಲ್ಲೂ ಸ್ಫೋಟಕ ಆಟ ಆಡುವ ಕ್ಷಮತೆ ಹೊಂದಿರುವ ರವೀಂದ್ರ ಜಡೇಜಾ ಹಲವು ಬಾರಿ ಟೀಂ ಇಂಡಿಯಾ ಪರ ಏಕಾಂಗಿಯಾಗಿ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ರವೀಂದ್ರ ಜಡೇಜಾ ಇದುವರೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 6 ಸಾವಿರಕ್ಕೂ ಹೆಚ್ಚು ರನ್ ಮತ್ತು 546 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ.

ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂದು ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗ ದಕ್ಷಿಣ ಆಫ್ರಿಕಾ ವಿರುದ್ಧವೂ ಆಡಲಿದ್ದಾರೆ. ಗಾಯದಿಂದ ಚೇತರಿಸಿಕೊಂಡ ನಂತರ ತಂಡಕ್ಕೆ ಭರ್ಜರಿ ಪುನರಾಗಮನ ಮಾಡಿರುವ ಬುಮ್ರಾ, ಈ ವಿಶ್ವಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.

ಶ್ರೇಯಸ್ ಅಯ್ಯರ್: ಟೀಂ ಇಂಡಿಯಾದ ಸ್ಟೈಲಿಶ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಇಂದು ತಮ್ಮ 29ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಯ್ಯರ್ ಬ್ಯಾಟಿಂಗ್‌ನಲ್ಲಿ ಎಷ್ಟು ಅದ್ಭುತವೋ, ಅವರ ಫೀಲ್ಡಿಂಗ್ ಕೂಡ ಅಷ್ಟೇ ಅದ್ಭುತವಾಗಿದೆ. ವಿಶ್ವಕಪ್‌ನಲ್ಲಿ ಅಯ್ಯರ್ ಅವರ ಪ್ರದರ್ಶನ ಕೂಡ ಉತ್ತಮವಾಗಿತ್ತು. ಇದೀಗ ಶ್ರೇಯಸ್ ಅಯ್ಯರ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಂಡದೊಂದಿಗೆ ತೆರಳಿದ್ದಾರೆ.

ಆರ್.ಪಿ ಸಿಂಗ್: ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಆರ್.ಪಿ ಸಿಂಗ್ ಕೂಡ ಇಂದು ತಮ್ಮ 38ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆರ್‌ಪಿಎಸ್ ಸಿಂಗ್ 2007ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಆ ಇಡೀ ಟೂರ್ನಿಯಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ಈ ಎಡಗೈ ವೇಗಿ ತಂಡ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಕರುಣ್ ನಾಯರ್: ಕನ್ನಡಿಗ ಕರುಣ್ ನಾಯರ್ ಕೂಡ ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ತ್ರಿಶತಕ ಬಾರಿಸಿದ ದಾಖಲೆಯನ್ನೂ ಹೊಂದಿದ್ದಾರೆ. ಆದರೆ, ಕರುಣ್ಗೆ ಟೀಂ ಇಂಡಿಯಾದಲ್ಲಿ ಹೆಚ್ಚು ಪಂದ್ಯಗಳನ್ನು ಆಡುವ ಅವಕಾಶ ಸಿಕ್ಕಿಲ್ಲ. ಇದುವರೆಗೆ ಟೀಂ ಇಂಡಿಯಾ ಪರ ಕರುಣ್ 6 ಟೆಸ್ಟ್ ಹಾಗೂ 2 ಏಕದಿನ ಪಂದ್ಯಗಳನ್ನಾಡಿದ್ದಾರೆ.



















