Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ

Champions Trophy 2025 India schedule: ಚಾಂಪಿಯನ್ಸ್ ಟ್ರೋಫಿ 2025 ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಇಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ದುಬೈನಲ್ಲಿ ನಡೆದರೆ, ಉಳಿದ ಮ್ಯಾಚ್​ಗಳು ಪಾಕಿಸ್ತಾನದಲ್ಲಿ ಜರುಗಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗಲಿರುವ ಟೀಮ್ ಇಂಡಿಯಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿರಲಿದೆ.

ಝಾಹಿರ್ ಯೂಸುಫ್
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Feb 17, 2025 | 3:08 PM

ಚಾಂಪಿಯನ್ಸ್ ಟ್ರೋಫಿ 2025 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಬುಧವಾರ (ಫೆ.19) ಶುರುವಾಗಲಿರುವ ಈ ಟೂರ್ನಿಯು ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿದ್ದು, ಟೀಮ್ ಇಂಡಿಯಾ ಫೆಬ್ರವರಿ 20 ರಿಂದ ಅಭಿಯಾನ ಆರಂಭಿಸಲಿದೆ. ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಈ ಕೆಳಗಿನಂತಿದೆ...

1 / 5
ಫೆಬ್ರವರಿ 20 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ. ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾದ ಎದುರಾಳಿ ಬಾಂಗ್ಲಾದೇಶ್ ತಂಡ. ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

2 / 5
ಭಾರತ ತಂಡದ 2ನೇ ಎದುರಾಳಿ ಪಾಕಿಸ್ತಾನ್. ಹೈವೋಲ್ಟೇಜ್ ಪೈಪೋಟಿಗೆ ಸಾಕ್ಷಿಯಾಗಲಿರುವ ಈ ಪಂದ್ಯವು ಫೆಬ್ರವರಿ 23 ರಂದು ನಡೆಯಲಿದೆ. ಈ ಪಂದ್ಯ ಕೂಡ ದುಬೈ ಅಂತಾರಾಷ್ಟ್ಟೀಯ ಸ್ಟೇಡಿಯಂನಲ್ಲೇ ಜರುಗಲಿದೆ.

3 / 5
ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮಾರ್ಚ್ 2 ರಂದು ದುಬೈನಲ್ಲೇ ನಡೆಯಲಿದೆ. ಅಂದರೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳನ್ನು ದುಬೈನಲ್ಲೇ ಆಡಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಸೆಮಿಫೈನಲ್ ಮತ್ತು ಫೈನಲ್​ಗೇರಿದರೆ ಮತ್ತೆರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ.

4 / 5
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

5 / 5
Follow us