AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರಿಗೆ ಅನಾರೋಗ್ಯ… ಟೀಮ್ ಇಂಡಿಯಾಗೆ ಚಿಂತೆ ಶುರು

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಒಟ್ಟು ನಾಲ್ಕು ಪಂದ್ಯಗಳನ್ನಾಡಲಿದೆ. ಅದರಂತೆ ಈಗಾಗಲೇ ಯುಎಸ್​ಎ ವಿರುದ್ಧ ಭಾರತ ತಂಡ ಜಯ ಸಾಧಿಸಿದೆ. ಇನ್ನು ನಮೀಬಿಯಾ, ಪಾಕಿಸ್ತಾನ್ ಹಾಗೂ ನೆದರ್​ಲೆಂಡ್ಸ್ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ.

ಝಾಹಿರ್ ಯೂಸುಫ್
|

Updated on: Feb 08, 2026 | 10:58 AM

Share
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು 161 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ 132 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ತಂಡವು ಮೊದಲ ಪಂದ್ಯವನ್ನು 29 ರನ್​ಗಳಿಂದ ಗೆದ್ದುಕೊಂಡಿದೆ.

1 / 5
ಈ ಗೆಲುವಿನ ಹೊರತಾಗಿಯೂ ಈ ಪಂದ್ಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿದಿರಲಿಲ್ಲ. ಜ್ವರದಿಂದ ಬಳಲುತ್ತಿರುವ ಕಾರಣ ಬುಮ್ರಾ ಅವರು ಯುಎಸ್​ಎ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು.

2 / 5
ಅತ್ತ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಕೂಡ ಅನಾರೋಗ್ಯದ ಸಮಸ್ಯೆಗೀಡಾಗಿದ್ದಾರೆ. ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರು. ಆದರೆ ಅವರು ಫೀಲ್ಡಿಂಗ್​ಗೆ ಆಗಮಿಸಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಅನಾರೋಗ್ಯಕೀಡಾಗಿರುವುದು.

3 / 5
ಅಂದರೆ ಮೊದಲ ಪಂದ್ಯದ ವೇಳೆಯೇ ಜಸ್​ಪ್ರೀತ್ ಬುಮ್ರಾ ಹಾಗೂ ಅಭಿಷೇಕ್ ಶರ್ಮಾ ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರಿಗೆ ಹೆಚ್ಚಿನ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅಂದರೆ ಫೆಬ್ರವರಿ 12 ರೊಳಗೆ ಇಬ್ಬರು ಸಂಪೂರ್ಣ ಗುಣಮುಖರಾದರೆ ಮಾತ್ರ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ಮೊಹಮ್ಮದ್ ಸಿರಾಜ್ ಹಾಗೂ ಸಂಜು ಸ್ಯಾಮ್ಸನ್​ಗೆ ಅವಕಾಶ ದೊರೆಯಲಿದೆ.

4 / 5
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ