ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಮಾಹಿತಿ

Updated on: Sep 30, 2025 | 10:53 AM

Team india's Schedule: ಈ ಬಾರಿಯ ಏಷ್ಯಾಕಪ್​ ಫೈನಲ್​ನಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟಕ್ಕೇರಿರುವ ಟೀಮ್ ಇಂಡಿಯಾ ಭಾರತಕ್ಕೆ ಹಿಂತಿರುಗಿದೆ. ಅಲ್ಲದೆ ಇನ್ನು ಕೆಲ ದಿನಗಳಲ್ಲೇ ಮುಂಬರುವ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಮುಂದಿನ ತಿಂಗಳು 2ನೇ ತಾರೀಖಿನಿಂದ ಟೀಮ್ ಇಂಡಿಯಾ ಟೆಸ್ಟ್ ಸರಣಿ ಆಡಲಿದೆ.

1 / 5
ಏಷ್ಯಾಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಹಿಂತಿರುಗಿರುವ ಭಾರತೀಯ ಆಟಗಾರರು ಮುಂಬರುವ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಅಂದರೆ ಇನ್ನೆರಡು ದಿನಗಳಲ್ಲಿ ಭಾರತ ತಂಡದ ಟೆಸ್ಟ್ ಸರಣಿ ಶುರುವಾಗಲಿದೆ.

2 / 5
ಅಕ್ಟೋಬರ್ 2 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಆರಂಭವಾಗಲಿದೆ. ಏಷ್ಯಾಕಪ್​ನಲ್ಲಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಸೇರಿದಂತೆ ಅನೇಕ ಆಟಗಾರರು ಗುರುವಾರದಿಂದ  ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ.

3 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ಭಾಗವಾಗಿರುವ ಈ ಸರಣಿಯ ಮೊದಲ ಪಂದ್ಯವು ಅಕ್ಟೋಬರ್ 2 ರಿಂದ ಅಹಮದಾಬಾದ್​ನ ನರೇಂದ್ರ  ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ದ್ವಿತೀಯ ಪಂದ್ಯವು ಅಕ್ಟೋಬರ್ 10 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

4 / 5
ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್​ನರೈನ್  ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

5 / 5
ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).