ಕಿರಿಯರ ವಿಶ್ವಕಪ್ ಫೈನಲ್​ಗಳಲ್ಲಿ ಭಾರತ ಯುವ ಪಡೆಯ ಪ್ರದರ್ಶನ ಹೇಗಿದೆ ಗೊತ್ತಾ?

U-19 World Cup: 19 ವರ್ಷದೊಳಗಿನವರ ವಿಶ್ವಕಪ್​ನಲ್ಲಿ ಭಾರತ ಒಟ್ಟು 9 ಬಾರಿ ಫೈನಲ್ ಪ್ರವೇಶಿಸಿದೆ. ಇದರಲ್ಲಿ ಐದು ಬಾರಿ ಚಾಂಪಿನ್ ಪಟ್ಟವನ್ನು ಅಲಂಕರಿಸಿರುವ ಯುವ ಪಡೆ ಮೂರು ಬಾರಿ ರನ್ನರ್ ಅಪ್​ಗೆ ತೃಪ್ತಿ ಪಟ್ಟುಕೊಂಡಿದೆ. ಈ 9 ವಿಶ್ವಕಪ್ ಫೈನಲ್ ಪಂದ್ಯಗಳಲ್ಲಿ ಭಾರತದ ಪ್ರದರ್ಶನ ಹೇಗಿತ್ತು ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Feb 10, 2024 | 5:09 PM

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯ ನಾಳೆ ಅಂದರೆ ಫೆ.10 ರ ಭಾನುವಾರದಂದು ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯಲ್ಲಿದೆ. ಈ ಲೀಗ್​ನಲ್ಲಿ ಭಾರತ ಇದುವರೆಗೆ ಆಡಿದ ಎಲ್ಲ ಆರು ಪಂದ್ಯಗಳನ್ನು ಗೆದ್ದು ಫೈನಲ್‌ಗೆ ಅರ್ಹತೆ ಪಡೆದಿದೆ. ಇದರೊಂದಿಗೆ ದಾಖಲೆಯ ಆರನೇ ಬಾರಿಗೆ ವಿಶ್ವಕಪ್ ಗೆಲ್ಲುವ ಇರಾದೆಯೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುತ್ತಿದೆ.

1 / 10
ಇದಕ್ಕೂ ಮುನ್ನ ಭಾರತ ಒಟ್ಟು 9 ಬಾರಿ ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಇದರಲ್ಲಿ ಐದು ಬಾರಿ ಚಾಂಪಿನ್ ಪಟ್ಟವನ್ನು ಅಲಂಕರಿಸಿರುವ ಯುವ ಪಡೆ ಮೂರು ಬಾರಿ ರನ್ನರ್ ಅಪ್​ಗೆ ತೃಪ್ತಿ ಪಟ್ಟುಕೊಂಡಿದೆ. ಈ 9 ವಿಶ್ವಕಪ್ ಫೈನಲ್ ಪಂದ್ಯಗಳಲ್ಲಿ ಭಾರತದ ಪ್ರದರ್ಶನ ಹೇಗಿತ್ತು ಎಂಬುದನ್ನು ನೋಡುವುದಾದರೆ..

2 / 10
2000: ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 2000 ಅಂಡರ್-19 ವಿಶ್ವಕಪ್‌ನ ಫೈನಲ್ ಪಂದ್ಯ ನಡೆದಿತ್ತು. ಇದರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದ ಭಾರತ ತಂಡ, ಮಲಿಂತ ಗಜನಾಯಕ ನಾಯಕತ್ವದ ಶ್ರೀಲಂಕಾವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಮೊದಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದಿತ್ತು. ಲಂಕಾ ನೀಡಿದ್ದ 180 ರನ್‌ಗಳ ಗುರಿ ಬೆನ್ನತ್ತಿದ ಭಾರತ ತಂಡ 40.4 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು.

3 / 10
2006: ಬರೋಬ್ಬರಿ 6 ವರ್ಷಗಳ ನಂತರ ಮತ್ತೊಮ್ಮೆ ವಿಶ್ವಕಪ್‌ ಫೈನಲ್‌ ಪ್ರವೇಶಿಸಿದ್ದ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 38 ರನ್‌ಗಳಿಂದ ಆಘಾತಕಾರಿ ಸೋಲನ್ನು ಅನುಭವಿಸಿತು. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರವಿಕಾಂತ್ ಶುಕ್ಲಾ ನೇತೃತ್ವದ ಭಾರತ ತಂಡ ಸರ್ಫರಾಜ್ ಅಹ್ಮದ್ ಸಾರಥ್ಯದ ಪಾಕಿಸ್ತಾನವನ್ನು 109 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು ಆದರೆ 110 ರನ್ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿ, ಪಂದ್ಯವನ್ನು ಸೋತಿತು.

4 / 10
2008: ಪುಚೋಂಗ್‌ನ ಕಿನ್ರಾರಾ ಅಕಾಡೆಮಿ ಓವಲ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ, ವೇಯ್ನ್ ಪಾರ್ನೆಲ್ ನಾಯಕತ್ವದ ದಕ್ಷಿಣ ಆಫ್ರಿಕಾವನ್ನು 12 ರನ್‌ಗಳಿಂದ (D/L ವಿಧಾನ) ಸೋಲಿಸಿ, ಎರಡನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿತ್ತು.

5 / 10
2012: ಆಗಸ್ಟ್ 26 ರಂದು ಟೌನ್ಸ್‌ವಿಲ್ಲೆಯ ಟೋನಿ ಐರ್ಲೆಂಡ್ ಕ್ರೀಡಾಂಗಣದಲ್ಲಿ ನಡೆದ ಈ ಫೈನಲ್ ಪಂದ್ಯದಲ್ಲಿ ಉನ್ಮುಕ್ತ್ ಚಾಂದ್ ನಾಯಕತ್ವದ ಭಾರತ ತಂಡ, ನಾಯಕನ ಅಜೇಯ ಶತಕದ (111) ಆಧಾರದ ಮೇಲೆ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ವಿಶ್ವಕಪ್ ಗೆದ್ದಿತ್ತು.

6 / 10
2016: ಇಶಾನ್ ಕಿಶನ್ ನೇತೃತ್ವದ ಭಾರತ ತಂಡ, ಶಿಮ್ರಾನ್ ಹೆಟ್ಮೆಯರ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಐದು ವಿಕೆಟ್‌ಗಳಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಯಿತು. ಢಾಕಾದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 145 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ಮೊದಲ ಬಾರಿಗೆ ಚಾಂಪಿಯನ್ ಆಯಿತು.

7 / 10
2018: 2018 ರ ವಿಶ್ವಕಪ್‌ ಫೈನಲ್​ನಲ್ಲಿ ಮತ್ತೊಮ್ಮೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು . ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಪೃಥ್ವಿ ಶಾ ನೇತೃತ್ವದ ಟೀಂ ಇಂಡಿಯಾ, ಜೇಸನ್ ಸಂಘ ನಾಯಕತ್ವದ ಆಸ್ಟ್ರೇಲಿಯವನ್ನು 8 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿತ್ತು.

8 / 10
2020: ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಪಾರ್ಕ್‌ನಲ್ಲಿ ನಡೆದ ಈ ವಿಶ್ವಕಪ್‌ನ ಫೈನಲ್‌ನಲ್ಲಿ ಬಾಂಗ್ಲಾದೇಶ, ಭಾರತವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 47.2 ಓವರ್‌ಗಳಲ್ಲಿ 177 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಏಳು ವಿಕೆಟ್‌ ಕಳೆದುಕೊಂಡು ಗುರಿ ಬೆನ್ನಟ್ಟಿತು.

9 / 10
2022: ಆಂಟಿಗುವಾ ಮತ್ತು ಬಾರ್ಬುಡಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ನಲ್ಲಿ ಯಶ್ ಧುಲ್ ನೇತೃತ್ವದ ಭಾರತ ತಂಡ, ಇಂಗ್ಲೆಂಡ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಇತಿಹಾಸದಲ್ಲಿ ಐದನೇ ಬಾರಿಗೆ ಚಾಂಪಿಯನ್ ಆಯಿತು.

10 / 10
Follow us
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್

ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ

ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು

ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ

ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು

Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು

ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್..!