AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆಗೆ ಒಳಗಾದ ಟೀಮ್ ಇಂಡಿಯಾ ಆಟಗಾರ

23 ವರ್ಷದ ಸಾಯಿ ಸುದರ್ಶನ್ ಈಗಾಗಲೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಆಟಗಾರ. ಭಾರತದ ಪರ 3 ಏಕದಿನ ಪಂದ್ಯಗಳನ್ನಾಡಿರುವ ಸಾಯಿ 2 ಅರ್ಧಶತಕಗಳೊಂದಿಗೆ 127 ರನ್ ಕಲೆಹಾಕಿದ್ದಾರೆ. ಹಾಗೆಯೇ ಒಂದು ಟಿ20 ಪಂದ್ಯದಲ್ಲೂ ಕಾಣಿಸಿಕೊಂಡಿದ್ದಾರೆ. ಇದೀಗ ಸರ್ಜರಿಗೆ ಒಳಗಾಗಿರುವ ಯುವ ದಾಂಡಿಗ ಐಪಿಎಲ್​ನಲ್ಲಿ ಮತ್ತೆ ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 11, 2024 | 2:04 PM

Share
ಭಾರತ ತಂಡದ ಯುವ ಬ್ಯಾಟರ್ ಸಾಯಿ ಸುದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಸಾಯಿ ಇದೀಗ ವಿದೇಶದಲ್ಲಿ ಸರ್ಜರಿಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

1 / 5
ಇದಕ್ಕೂ ಮುನ್ನ ಸಾಯಿ ಸುದರ್ಶನ್ ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಸರಣಿಯಲ್ಲಿ ಭಾರತ ಎ ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಕಾಣಿಸಿಕೊಂಡಿದ್ದರು.

2 / 5
ಇದಾಗ್ಯೂ ಉತ್ತಮ ಫಾರ್ಮ್​ನಲ್ಲಿದ್ದ ಸಾಯಿ ಸುದರ್ಶನ್ ಅವರನ್ನು ಪರ್ತ್​​ ಟೆಸ್ಟ್​​ನಿಂದ ಹೊರಗುಳಿದಿದ್ದ ಶುಭ್​​ಮನ್ ಗಿಲ್ ಅವರ ಬದಲಿ ಆಟಗಾರನಾಗಿ ಆಯ್ಕೆ ಮಾಡಲಾಗಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆ ಎಂದು ತಿಳಿದು ಬಂದಿದೆ.

3 / 5
ಹೀಗಾಗಿಯೇ ಆಸ್ಟ್ರೇಲಿಯಾದಿಂದ ಹಿಂತಿರುಗಿದ ಬಳಿಕ ಸಾಯಿ ಸುದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಾಯಿ, ಶೀಘ್ರದಲ್ಲೇ ಕಂಬ್ಯಾಕ್ ಮಾಡುತ್ತೇನೆ. ಎಲ್ಲಾ ರೀತಿಯ ಬೆಂಬಲಕ್ಕೆ ವೈದ್ಯಕೀಯ ತಂಡ ಹಾಗೂ ಬಿಸಿಸಿಐಗೆ ದೊಡ್ಡ ಧನ್ಯವಾದಗಳು. ಹಾಗೆಯೇ ಗುಜರಾತ್ ಟೈಟಾನ್ಸ್ ಫ್ಯಾಮಿಲಿಯ ಪ್ರೀತಿಗೆ ಮತ್ತು ಬೆಂಬಲಕ್ಕೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

4 / 5
ಅಂದಹಾಗೆ ಈ ಬಾರಿಯ ಐಪಿಎಲ್​​ನಲ್ಲಿ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗುಜರಾತ್ ಫ್ರಾಂಚೈಸಿ ಯುವ ಎಡಗೈ ದಾಂಡಿಗನನ್ನು 8.5 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಅದರಂತೆ ಮುಂಬರುವ ಐಪಿಎಲ್ ಸೀಸನ್​​ನಲ್ಲಿ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್ ಪರ ಬ್ಯಾಟ್ ಬೀಸಲಿದ್ದಾರೆ.

5 / 5
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ