ಸ್ಮೃತಿ ಮಂಧಾನ ಮುಡಿಗೆ ಮತ್ತೊಂದು ದಾಖಲೆ ಸೇರ್ಪಡೆ
Smriti Mandhana Records: ಮಹಿಳಾ ಕ್ರಿಕೆಟ್ನಲ್ಲಿ ಸ್ಮೃತಿ ಮಂಧಾನ ಅವರ ಪರಾಕ್ರಮ ಮುಂದುವರೆದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
Updated on: Jul 19, 2025 | 8:32 AM

ಮಹಿಳಾ ಕ್ರಿಕೆಟ್ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂಧಾನ (Smriti Mandhana) ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 2ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ 4500 ರನ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ 103 ಏಕದಿನ ಇನಿಂಗ್ಸ್ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂಧಾನ ಒಟ್ಟು 4501 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂಧಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರೆಸಿದರೆ ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
