AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮೃತಿ ಮಂಧಾನ ಮುಡಿಗೆ ಮತ್ತೊಂದು ದಾಖಲೆ ಸೇರ್ಪಡೆ

Smriti Mandhana Records: ಮಹಿಳಾ ಕ್ರಿಕೆಟ್​ನಲ್ಲಿ ಸ್ಮೃತಿ ಮಂಧಾನ ಅವರ ಪರಾಕ್ರಮ ಮುಂದುವರೆದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್​ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 19, 2025 | 8:32 AM

Share
ಮಹಿಳಾ ಕ್ರಿಕೆಟ್​ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂಧಾನ (Smriti Mandhana) ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 2ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

1 / 5
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್​ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ 4500 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇದೀಗ 103 ಏಕದಿನ ಇನಿಂಗ್ಸ್​ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂಧಾನ ಒಟ್ಟು 4501 ರನ್​ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ. 

4 / 5
ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್​ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂಧಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್​ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರೆಸಿದರೆ ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು.

5 / 5
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು

ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್

ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ

2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ

Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್