AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15+5 … ಟೀಮ್ ಇಂಡಿಯಾಗೆ ಆಯ್ಕೆಯಾದ ಹೆಚ್ಚುವರಿ ಐದು ಆಟಗಾರರು ಇವರೇ

Asia Cup 2025 India Squad: ಏಷ್ಯಾಕಪ್​​ ಟೂರ್ನಿಗೆ 15 ಸದಸ್ಯರುಗಳ ಟೀಮ್ ಇಂಡಿಯಾ ಜೊತೆ 5 ಆಟಗಾರರನ್ನು ಹೆಸರಿಸಲಾಗಿದೆ. ಅಂದರೆ 15 ಸದಸ್ಯರುಗಳಲ್ಲಿ ಯಾರಾದರೂ ಗಾಯಗೊಂಡು ಅಥವಾ ಇನ್ನಿತರೆ ಕಾರಣಗಳಿಂದ ಹೊರಬಿದ್ದರೆ, ಅವರ ಸ್ಥಾನಕ್ಕೆ ಈ ಐದು ಆಟಗಾರರಿಂದ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. 

ಝಾಹಿರ್ ಯೂಸುಫ್
|

Updated on: Aug 20, 2025 | 8:09 AM

Share
ಬಹುನಿರೀಕ್ಷಿತ ಏಷ್ಯಾಕಪ್​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕನಾಗಿ ಆಯ್ಕೆಯಾದರೆ, ಉಪನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು 15 ಸದಸ್ಯರುಗಳ ಜೊತೆಗೆ ಐವರು ಹೆಚ್ಚುವರಿ ಆಟಗಾರರನ್ನು ಸಹ ಆಯ್ಕೆ ಮಾಡಲಾಗಿದೆ. ಆ ಆಟಗಾರರು ಯಾರೆಂದರೆ...

1 / 7
ಯಶಸ್ವಿ ಜೈಸ್ವಾಲ್: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗನಾಗಿ ಆಯ್ಕೆಯಾಗಿದ್ದ ಯಶಸ್ವಿ ಜೈಸ್ವಾಲ್ ಈ ಬಾರಿ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಸ್ಥಾನ ಪಡೆದಿದ್ದು, ಹೀಗಾಗಿ ಜೈಸ್ವಾಲ್ ಅವರನ್ನು ಮೀಸಲು ಪಟ್ಟಿಯಲ್ಲಿರಿಸಲಾಗಿದೆ.

2 / 7
ವಾಷಿಂಗ್ಟನ್ ಸುಂದರ್: ಏಷ್ಯಾಕಪ್​ಗೆ ಸ್ಪಿನ್ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಅಲ್ಲದೆ ಪರಿಪೂರ್ಣ ಸ್ಪಿನ್ನರ್​ಗಳಾಗಿ ಕುಲ್ದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಈ ಬಾರಿ ಮೀಸಲು ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ,

3 / 7
ರಿಯಾನ್ ಪರಾಗ್: ಯುವ ಆಲ್​ರೌಂಡರ್ ರಿಯಾನ್ ಪರಾಗ್ ಅವರನ್ನು ಸಹ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಭಾರತದ ಪರ ಈಗಾಗಲೇ 9 ಟಿ20 ಪಂದ್ಯಗಳನ್ನಾಡಿರುವ ಪರಾಗ್ ಏಷ್ಯಾಕಪ್​ಗೆ ಹೆಚ್ಚುವರಿ ಆಲ್​ರೌಂಡರ್ ಆಗಿ ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 

4 / 7
ಪ್ರಸಿದ್ಧ್ ಕೃಷ್ಣ: ಟೀಮ್ ಇಂಡಿಯಾ ಪರ 5 ಟಿ20 ಪಂದ್ಯಗಳನ್ನಾಡಿರುವ ಪ್ರಸಿದ್ಧ್ ಕೃಷ್ಣ ಈವರೆಗೆ 8 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಕರ್ನಾಟಕದ ವೇಗಿಗೆ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಅತ್ತ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಕಾಣಿಸಿಕೊಂಡಿದ್ದು. ಹೀಗಾಗಿ ಪ್ರಸಿದ್ಧ್ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

5 / 7
ಧ್ರುವ್ ಜುರೇಲ್: ಏಷ್ಯಾಕಪ್​ಗೆ ವಿಕೆಟ್​ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಆಯ್ಕೆಯಾಗಿದ್ದಾರೆ. ಹೀಗಾಗಿ ಧ್ರುವ್ ಜುರೇಲ್ ಅವರನ್ನು ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಅಂದರೆ ಸಂಜು ಅಥವಾ ಜಿತೇಶ್ ತಂಡದಿಂದ ಹೊರಬಿದ್ದರೆ ಧ್ರುವ್ ಜುರೇಲ್ 15 ಸದಸ್ಯರುಗಳ ತಂಡಕ್ಕೆ ಎಂಟ್ರಿ ಕೊಡಲಿದ್ದಾರೆ.

6 / 7
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

7 / 7
Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!

ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ

ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು

ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು

ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ

2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ