ಟೆಸ್ಟ್ನಲ್ಲಿ ಸತತ ಸೋಲು… 2025 ರಲ್ಲಿ ಕೇವಲ 10 ಪಂದ್ಯಗಳನ್ನಾಡಲಿರುವ ಟೀಮ್ ಇಂಡಿಯಾ
Team India: 2024 ರಲ್ಲಿ 15 ಟೆಸ್ಟ್ ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ 2025 ರಲ್ಲಿ ಕೇವಲ 10 ಪಂದ್ಯಗಳನ್ನು ಮಾತ್ರ ಆಡಲಿದೆ. ಇದರಲ್ಲಿ 5 ಮ್ಯಾಚ್ಗಳು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಇನ್ನುಳಿದ 5 ಪಂದ್ಯಗಳಲ್ಲಿ ಒಂದು ಮ್ಯಾಚ್ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಒಳಪಟ್ಟಿದೆ.
1 / 6
ಈ ವರ್ಷ ಟೀಮ್ ಇಂಡಿಯಾ ಒಟ್ಟು 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಒಂದು ಮ್ಯಾಚ್ ಡ್ರಾನಲ್ಲಿ ಅಂತ್ಯಗೊಂಡಿದೆ. ಇದೀಗ ಟೀಮ್ ಇಂಡಿಯಾದ 2025ರ ಟೆಸ್ಟ್ ವೇಳಾಪಟ್ಟಿ ಪ್ರಕಟಗೊಂಡಿದೆ.
2 / 6
ಈ ವೇಳಾಪಟ್ಟಿಯಂತೆ ಭಾರತ ತಂಡವು ಮುಂದಿನ ವರ್ಷ ಕೇವಲ 10 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಲಿದೆ. ಈ ಹತ್ತು ಮ್ಯಾಚ್ಗಳಲ್ಲಿ ಆಸ್ಟ್ರೇಲಿಯಾ ವಿರುದ್ಧದ ಒಂದು ಪಂದ್ಯ ಕೂಡ ಸೇರಿದೆ. ಅಂದರೆ 2024ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಹಾಗಿದ್ರೆ 2025 ರಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ಟೆಸ್ಟ್ ಎದುರಾಳಿಗಳು ಯಾರೆಂದು ನೋಡೋಣ...
3 / 6
ಭಾರತ vs ಆಸ್ಟ್ರೇಲಿಯಾ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಸಿಡ್ನಿಯಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆಸ್ಟ್ರೇಲಿಯಾ ಮತ್ತು ಭಾರತ ನಡುವಣ ಪ್ರತಿಷ್ಠಿತ BGT ಸರಣಿ ಮುಕ್ತಾಯವಾಗಲಿದೆ.
4 / 6
ಭಾರತ vs ಇಂಗ್ಲೆಂಡ್: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ಮತ್ತೆ ಟೆಸ್ಟ್ ಆಡುವುದು ಜೂನ್ ತಿಂಗಳಲ್ಲಿ. ಜೂನ್ 20 ರಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ.
5 / 6
ಭಾರತ vs ವೆಸ್ಟ್ ಇಂಡೀಸ್: ಅಕ್ಟೋಬರ್ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ದಿನಾಂಕ ಇನ್ನೂ ಸಹ ನಿಗದಿ ಮಾಡಲಾಗಿಲ್ಲ.
6 / 6
ಭಾರತ vs ಸೌತ್ ಆಫ್ರಿಕಾ: ವಿಂಡೀಸ್ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಯು ನವೆಂಬರ್ ಮತ್ತು ಡಿಸೆಂಬರ್ ನಡುವೆ ನಡೆಯಲಿದೆ.