ಏಷ್ಯಾಕಪ್​ಗೆ ಟೀಮ್ ಇಂಡಿಯಾದ ಟಾಪ್-5 ಬ್ಯಾಟರ್​ಗಳು ಫಿಕ್ಸ್

Updated on: Aug 12, 2025 | 8:24 AM

ASIA CUP 2025: ಏಷ್ಯಾಕಪ್ ಟಿ20 ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್ ಮೂರನೇ ವಾರದಲ್ಲಿ ತಂಡವನ್ನು ಪ್ರಕಟಿಸಲು ಬಿಸಿಸಿಐ ನಿರ್ಧರಿಸಿದೆ. ಏಷ್ಯನ್ ರಾಷ್ಟ್ರಗಳ ನಡುವಣ ಈ ಕ್ರಿಕೆಟ್ ಕದನಕ್ಕಾಗಿ ಯುವ ಪಡೆಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದ್ದು, ಹೀಗಾಗಿ ಈ ಬಾರಿಯ ಟೀಮ್ ಇಂಡಿಯಾದಲ್ಲಿ ಹಿರಿಯ ಆಟಗಾರರಿಗೆ ಅವಕಾಶ ಸಿಗುವುದಿಲ್ಲ.

1 / 6
ಬಹುನಿರೀಕ್ಷಿತ ಏಷ್ಯಾಕಪ್​ಗಾಗಿ ಬಿಸಿಸಿಐ ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡವನ್ನು ರೂಪಿಸುತ್ತಿದೆ. ಈ ತಂಡದಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಳ್ಳುವ ಆಟಗಾರರ ಪಟ್ಟಿಯೊಂದು ಹೊರಬಿದ್ದಿದ್ದು, ಇವರಲ್ಲಿ ಶುಭ್​ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಇದಾಗ್ಯೂ ಏಷ್ಯಾಕಪ್​ ತಂಡದಲ್ಲಿ ಗಿಲ್​ಗೆ ಚಾನ್ಸ್​ ಸಿಗುವ ಸಾಧ್ಯತೆಯಿದೆ. ಆದರೆ ಯಶಸ್ವಿ ಜೈಸ್ವಾಲ್ ಬಗ್ಗೆ ಇನ್ನೂ ಸಹ ಖಚಿತ ಮಾಹಿತಿ ಹೊರಬಿದ್ದಿಲ್ಲ.

2 / 6
ಇಲ್ಲಿ ಟಾಪ್-5 ನಲ್ಲಿ ಆರಂಭಿಕನಾಗಿ ಕಾಣಿಸಿಕೊಂಡಿರುವುದು ಯುವ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ. ಹಾಗೆಯೇ ಮತ್ತೋರ್ವ ಆರಂಭಿಕನಾಗಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ. ಅದರಂತೆ ಏಷ್ಯಾಕಪ್​ನಲ್ಲೂ ಸಂಜು ಸ್ಯಾಮ್ಸನ್-ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

3 / 6
ಇನ್ನು ಮೂರನೇ ಕ್ರಮಾಂಕದಲ್ಲಿ ಯುವ ಎಡಗೈ ಬ್ಯಾಟರ್ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ತಿಲಕ್ ವರ್ಮಾ ಅವರನ್ನು ಏಷ್ಯಾಕಪ್​ನಲ್ಲೂ ಒನ್​ ಡೌನ್​ನಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ.

4 / 6
ಹಾಗೆಯೇ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಕಳೆದ ಕೆಲ ತಿಂಗಳಿಂದ ಮೈದಾನದಿಂದ ಹೊರಗುಳಿದಿದ್ದ ಸೂರ್ಯಕುಮಾರ್ ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದಾರೆ. ಅಲ್ಲದೆ ಬ್ಯಾಟಿಂಗ್ ಅಭ್ಯಾಸವನ್ನು ಸಹ ಆರಂಭಿಸಿದ್ದಾರೆ. ಹೀಗಾಗಿ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುವುದು ಖಚಿತ.

5 / 6
ಇನ್ನು ಐದನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹೆಸರು ಕಾಣಿಸಿಕೊಂಡಿದೆ. ವೇಗದ ಬೌಲಿಂಗ್ ಆಲ್​​ರೌಂಡರ್ ಸ್ಥಾನದಲ್ಲಿ ಪಾಂಡ್ಯ ಸಹ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವುದು ಖಚಿತ. ಈ ಮೂಲಕ ಬಲಿಷ್ಠ ಬ್ಯಾಟರ್​ಗಳೊಂದಿಗೆ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ ಎಂದು ಪಿಟಿಐ ವರದಿ ಮಾಡಿದೆ.

6 / 6
ಒಂದು ವೇಳೆ ಶುಭ್​ಮನ್ ಗಿಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ಆರಂಭಿಕ ದಾಂಡಿಗರನ್ನು ಬದಲಿಸಬೇಕಾಗುತ್ತದೆ. ಅಂದರೆ ಸಂಜು ಸ್ಯಾಮ್ಸನ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಗಿಲ್ ಅವರನ್ನು ಓಪನರ್ ಆಗಿ ಆಡಿಸಬೇಕಾಗುತ್ತದೆ. ಹೀಗಾಗಿಯೇ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಹೇಗಿರಲಿದೆ ಎಂಬುದೇ ಈಗ ಕುತೂಹಲ.