
ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಕಳೆದ ಬಾರಿಯ ವಿಶ್ವಕಪ್ನಲ್ಲಿ ಕಾಣಿಸಿಕೊಂಡ 7 ಆಟಗಾರರು ಸ್ಥಾನ ಪಡೆದಿಲಿಲ್ಲ. ಹೀಗಾಗಿ ಈ ಬಾರಿ ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆಯಾಗಲಿದೆ.

2024ರ ಟಿ20 ವಿಶ್ವಕಪ್ನಲ್ಲಿ ಆರಂಭಿಕರಾಗಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿದ್ದರು. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಿದರೆ, ಐದನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಕಣಕ್ಕಿಳಿದಿದ್ದರು.

ಆದರೆ ಈ ಬಾರಿ ಭಾರತದ ಪರ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ ಹಾಗೂ ಬಲಗೈ ಬ್ಯಾಟರ್ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯುವುದು ಖಚಿತವಾಗಿದೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬರಲಿದ್ದಾರೆ. ಇನ್ನು ಐದನೇ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

2026ರ ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

2024ರ ಟಿ20 ವಿಶ್ವಕಪ್ನ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.