AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೆ ಟೀಮ್ ಇಂಡಿಯಾದ 11 ಆಟಗಾರರು ಅಲಭ್ಯ..!

India Squad For Asia Cup 2025: ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಏಷ್ಯಾಕಪ್ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಅದರಂತೆ ಏಷ್ಯಾಕಪ್​ಗೆ ಆಯ್ಕೆಯಾದ ಮತ್ತು ಆಯ್ಕೆಯಾಗದೇ ಇರುವವರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Sep 07, 2025 | 10:55 AM

Share
ಏಷ್ಯಾಕಪ್ ಟೂರ್ನಿ ಆರಂಭಕ್ಕೆ ಇನ್ನು ಕೌಂಟ್ ಡೌನ್ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂಬುದು ವಿಶೇಷ. ಅಂದರೆ ಈ ಹಿಂದೆ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕೆಲ ಆಟಗಾರರಿಗೆ ಈ ಬಾರಿಯ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಹಾಗೆಯೇ ಇವರಲ್ಲಿ ಕೆಲವರು ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಅದರಂತೆ ಈ ಬಾರಿಯ ಏಷ್ಯಾಕಪ್​ನಿಂದ ಹೊರಗುಳಿದಿರುವ ಟೀಮ್ ಇಂಡಿಯಾದ 11 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 13
ರೋಹಿತ್ ಶರ್ಮಾ: 2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಆದರೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್​ ಪಟ್ಟ ಅಲಂಕರಿಸಿದ ಬೆನ್ನಲ್ಲೇ ಹಿಟ್​ಮ್ಯಾನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್ ತಂಡದ ಆಯ್ಕೆಗೆ​ ರೋಹಿತ್ ಶರ್ಮಾ ಅವರನ್ನು ಪರಿಗಣಿಸಲಾಗಿಲ್ಲ.

2 / 13
ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ 2024 ರಲ್ಲಿ ಫೈನಲ್ ಪಂದ್ಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಚುಟುಕು ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದರು. ಇತ್ತ ಈ ಬಾರಿ ಏಷ್ಯಾಕಪ್ ನಡೆಯುವುದು ಟಿ20 ಸ್ವರೂಪದಲ್ಲಿ. ಹೀಗಾಗಿ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ  ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. 

3 / 13
ರವೀಂದ್ರ ಜಡೇಜಾ: ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. ಚುಟುಕು ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಜಡೇಜಾ ಇದೀಗ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನತ್ತ ಫೋಕಸ್ ಮಾಡಿದ್ದಾರೆ. ಹೀಗಾಗಿ ಅವರನ್ನೂ ಸಹ ಏಷ್ಯಾಕಪ್​ ತಂಡಕ್ಕೆ ಆಯ್ಕೆಗೆ ಪರಿಗಣಿಸಲಾಗಿಲ್ಲ.

4 / 13
ಯುಜ್ವೇಂದ್ರ ಚಹಲ್: 2024ರ ಟಿ20 ವಿಶ್ವಕಪ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ನರ್ ಆಗಿ ಸ್ಥಾನ ಪಡೆದಿದ್ದರು. ಇದಾಗ್ಯೂ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಅಲ್ಲದೆ 2023ರ ಬಳಿಕ ಚಹಲ್ ಭಾರತದ ಪರ ಯಾವುದೇ ಟಿ20 ಪಂದ್ಯವಾಡಿಲ್ಲ. ಇದೀಗ ಏಷ್ಯಾಕಪ್ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

5 / 13
ಮೊಹಮ್ಮದ್ ಶಮಿ: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ ಮೊಹಮ್ಮದ್ ಶಮಿಗೆ ಏಷ್ಯಾಕಪ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಇದಕ್ಕೂ ಮುನ್ನ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಶಮಿ ಕಣಕ್ಕಿಳಿದಿದ್ದರು. ಆದರೆ ಈ ಬಾರಿಯ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

6 / 13
ರಿಷಭ್ ಪಂತ್: ಟಿ20 ವಿಶ್ವಕಪ್ 2024 ರಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಕಣಕ್ಕಿಳಿದಿದ್ದರು. ಅಲ್ಲದೆ ಈ ಬಾರಿ ಏಷ್ಯಾಕಪ್​ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿರುವ ಕಾರಣ ಅವರನ್ನು ಏಷ್ಯಾಕಪ್ ತಂಡದಿಂದ ಹೊರಗಿಡಲಾಗಿದೆ.

7 / 13
ಕೆಎಲ್ ರಾಹುಲ್: ಚಾಂಪಿಯನ್ಸ್​ ಟ್ರೋಫಿ ಟೂರ್ನಿಯಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಕೆಎಲ್ ರಾಹುಲ್ ಅವರಿಗೂ ಏಷ್ಯಾಕಪ್ ತಂಡದಲ್ಲಿ ಸ್ಥಾನ ಲಭಿಸಿಲ್ಲ. ವಿಕೆಟ್ ಕೀಪರ್ ಬ್ಯಾಟರ್ ಆಗಿ ಟಿ20 ತಂಡಕ್ಕೆ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿ ರಾಹುಲ್ ಅವರಿಗೆ ಅವಕಾಶ ನೀಡದಿರುವುದು ಅಚ್ಚರಿಯೇ ಸರಿ.

8 / 13
ಮೊಹಮ್ಮದ್ ಸಿರಾಜ್: 2024ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಮೊಹಮ್ಮದ್ ಸಿರಾಜ್ ಅವರನ್ನು ಮುಂಬರುವ ಏಷ್ಯಾಕಪ್​ಗೆ ಆಯ್ಕೆ ಮಾಡಲಾಗಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸಿರಾಜ್​ಗೆ ವಿಶ್ರಾಂತಿ ನೀಡುವ ಸಲುವಾಗಿ ಟಿ20 ತಂಡದಿಂದ ಕೈ ಬಿಡಲಾಗಿದೆ.

9 / 13
ಶ್ರೇಯಸ್ ಅಯ್ಯರ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತದ ಪರ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಕೂಡ ಏಷ್ಯಾಕಪ್​ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ 15 ಸದಸ್ಯರುಗಳ ತಂಡದಲ್ಲಿ ಅವರಿಗೆ ಸ್ಥಾನ ಲಭಿಸಿಲ್ಲ.

10 / 13
ಯಶಸ್ವಿ ಜೈಸ್ವಾಲ್: ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ ಯಶಸ್ವಿ ಜೈಸ್ವಾಲ್​ಗೆ ಈ ಬಾರಿ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಬದಲಾಗಿ ಅವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಅಂದರೆ ಯಾರಾದರೂ ಗಾಯಗೊಂಡು ಹೊರಗುಳಿದರೆ ಮಾತ್ರ ಅವರಿಗೆ ಏಷ್ಯಾಕಪ್ ತಂಡದಲ್ಲಿ ಚಾನ್ಸ್ ಸಿಗಲಿದೆ.

11 / 13
ವಾಷಿಂಗ್ಟನ್ ಸುಂದರ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದ ಸ್ಪಿನ್ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್​ಗೂ ಈ ಬಾರಿಯ ಏಷ್ಯಾಕಪ್ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಬದಲಾಗಿ ಮೀಸಲು ಆಟಗಾರರ ಪಟ್ಟಿಯಲ್ಲಿ ಸುಂದರ್ ಅವರನ್ನು ಇರಿಸಲಾಗಿದೆ.

12 / 13
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

13 / 13
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ