AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ WTC ಫೈನಲ್ ಲೆಕ್ಕಾಚಾರ ಉಲ್ಟಾ ಪಲ್ಟಾ..!

WTC Final Qualification Scenarios: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಭಾರತ ತಂಡಕ್ಕೆ ಇನ್ನೂ ಐದು ಪಂದ್ಯಗಳಿವೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 4-0 ಅಂತರದಿಂದ ಗೆಲ್ಲಬೇಕು. ಅಂದರೆ ಐದು ಪಂದ್ಯಗಳ ಸರಣಿಯಲ್ಲಿ ಒಂದೇ ಒಂದು ಸೋಲು ಕಾಣಬಾರದು.

TV9 Web
| Updated By: ಝಾಹಿರ್ ಯೂಸುಫ್|

Updated on: Nov 03, 2024 | 5:04 PM

Share
ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮುಗ್ಗರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದ್ದ ಟೀಮ್ ಇಂಡಿಯಾ, ಪುಣೆ, ಮುಂಬೈ ಟೆಸ್ಟ್​ ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಈ ಮೂರು ಸೋಲುಗಳೊಂದಿಗೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಕೂಡ ಉಲ್ಪಾ ಪಲ್ಟಾ ಆಗಿದೆ.

1 / 6
ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾಗೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಅವಕಾಶವಿತ್ತು. ಆದರೀಗ ಭಾರತ ತಂಡವು ಮೂರು ಪಂದ್ಯಗಳಲ್ಲೂ ಸೋಲುಂಡು WTC ಪಾಯಿಂಟ್ಸ್​ ಟೇಬಲ್​ನಲ್ಲಿ 15.91 ಪರ್ಸಂಟೇಜ್​ ಅಂಕಗಳನ್ನು ಕಳೆದುಕೊಂಡಿದೆ. ಅಲ್ಲದೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

2 / 6
ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಭಾರತ ತಂಡವು ಮುಂದಿನ ಐದು ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಫೈನಲ್​ಗೇರುವ ಅವಕಾಶ ಪಡೆಯಲಿದೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ 4-0 ಅಂತರದಿಂದ ಗೆಲ್ಲಲೇಬೇಕು. ಈ ಮೂಲಕ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು.

3 / 6
ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 1 ಅಥವಾ 2 ಪಂದ್ಯಗಳಲ್ಲಿ ಸೋಲನುಭವಿಸಿದರೆ, ಫೈನಲ್ ಪ್ರವೇಶಕ್ಕೆ ಉಳಿದ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ (55.56%) ತೃತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ (54.550%) ಮತ್ತು ನಾಲ್ಕನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ (54.17%) ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

4 / 6
ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡವನ್ನು 4-0 ಅಂತರದಿಂದ ಬಗ್ಗು ಬಡಿಯಲೇಬೇಕು. ಈ ಮೂಲಕ 65.79% ಅಂಕಗಳನ್ನು ಕಲೆಹಾಕಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. ಹೀಗಾಗಿಯೇ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯಗಳ ಸರಮಾಲೆಯಾಗಿ ಮಾರ್ಪಟ್ಟಿದೆ.

5 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ನೂತನ ಅಂಕ ಪಟ್ಟಿ (ನವೆಂಬರ್ 3, 2024):  1-ಆಸ್ಟ್ರೇಲಿಯಾ,  2-ಭಾರತ,  3-ಶ್ರೀಲಂಕಾ,  4-ನ್ಯೂಝಿಲೆಂಡ್,  5-ಸೌತ್ ಆಫ್ರಿಕಾ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ