AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

99 ವರ್ಷಗಳ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಟೆಂಬಾ ಬವುಮಾ

WTC 2025 Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್​ ಪಟ್ಟದೊಂದಿಗೆ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅದು ಕೂಡ 99 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jun 15, 2025 | 9:04 AM

Share
ಟೆಸ್ಟ್ ಕ್ರಿಕೆಟ್​ನಲ್ಲಿ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ (Temba Bavuma) ಹೊಸ ಇತಿಹಾಸ ರಚಿಸಿದ್ದಾರೆ. ಅದು ಕೂಡ ಸೋಲಿಲ್ಲದ ಸರದಾರನಾಗಿ ಎಂಬುದು ವಿಶೇಷ. ಅಂದರೆ ಬವುಮಾ ಟೆಸ್ಟ್ ತಂಡದ ನಾಯಕತ್ವವಹಿಸಿದ ಬಳಿಕ ಸೌತ್ ಆಫ್ರಿಕಾ ತಂಡ ಒಂದೇ ಒಂದು ಸೋಲು ಕಂಡಿಲ್ಲ. ಇದುವೇ ಹೊಸ ವಿಶ್ವ ದಾಖಲೆ.

1 / 5
ಟೆಸ್ಟ್ ಕ್ರಿಕೆಟ್​ನಲ್ಲಿ ನಾಯಕನಾಗಿ ಮೊದಲ 10 ಪಂದ್ಯಗಳಲ್ಲಿ ಅತ್ಯಧಿಕ ಗೆಲುವು ಕಂಡ ನಾಯಕನೆಂಬ ವಿಶ್ವ ದಾಖಲೆ ಪೆರ್ಸಿ ಚಾಪ್​ಮ್ಯಾನ್ ಹೆಸರಿನಲ್ಲಿತ್ತು. 1926 ರಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಿದ್ದ ಚಾಪ್​ಮ್ಯಾನ್ ಮೊದಲ 10 ಪಂದ್ಯಗಳಲ್ಲಿ 9 ಗೆಲುವು ತಂದುಕೊಟ್ಟಿದ್ದರು. ಇದೇ ವೇಳೆ ಒಂದು ಪಂದ್ಯದಲ್ಲಿ ಮಾತ್ರ ಇಂಗ್ಲೆಂಡ್ ತಂಡ ಸೋಲನುಭವಿಸಿತ್ತು. 

2 / 5
ಇದೀಗ ಪೆರ್ಸಿ ಚಾಪ್​ಮ್ಯಾನ್ ಹೆಸರಿನಲ್ಲಿದ್ದ ಈ ವಿಶ್ವ ದಾಖಲೆಯನ್ನು ಟೆಂಬಾ ಬವುಮಾ ಮುರಿದಿದ್ದಾರೆ. ಅದು ಕೂಡ 99 ವರ್ಷಗಳ ಬಳಿಕ ಎಂಬುದು ವಿಶೇಷ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಸರಣಿಯಲ್ಲಿ ಸೌತ್ ಆಫ್ರಿಕಾ ತಂಡವನ್ನು 10 ಪಂದ್ಯಗಳಲ್ಲಿ ಮುನ್ನಡೆಸಿರುವ ಬವುಮಾ ಒಟ್ಟು 9 ಗೆಲುವು ಕಂಡಿದ್ದಾರೆ. ಇನ್ನು ಒಂದು ಪಂದ್ಯದಲ್ಲಿ ಸೌತ್ ಆಫ್ರಿಕಾ ಡ್ರಾ ಸಾಧಿಸಿದೆ.

3 / 5
ಅಂದರೆ ಟೆಂಬಾ ಬವುಮಾ ಮುನ್ನಡೆಸಿರುವ 10 ಟೆಸ್ಟ್​ ಪಂದ್ಯಗಳಲ್ಲಿ ಸೌತ್ ಆಫ್ರಿಕಾ ತಂಡವು ಒಂದೇ ಒಂದು ಸೋಲು ಕಂಡಿಲ್ಲ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಹತ್ತು ಪಂದ್ಯಗಳಲ್ಲಿ ಸೋಲು ಕಾಣದ ಮೊದಲ ನಾಯಕನೆಂಬ ವಿಶ್ವ ದಾಖಲೆಯನ್ನು ಟೆಂಬಾ ಬವುಮಾ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಸೋಲು ಕಾಣದೇ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟ ವಿಶ್ವದ ಮೊದಲ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೂ ಟೆಂಬಾ ಬವುಮಾ ಪಾತ್ರರಾಗಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದಂತಹ ದಾಖಲೆಗಳನ್ನು ನಿರ್ಮಿಸುವ ಮೂಲಕ ಬವುಮಾ ಕ್ರಿಕೆಟ್​ ಅಂಗಳದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ