AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬವುಮಾ ಭರ್ಜರಿ ಬ್ಯಾಟಿಂಗ್​ಗೆ ಬಾಬರ್ ವಿಶ್ವ ದಾಖಲೆಯೇ ಬ್ರೇಕ್

WTC Final SA vs AUS: ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಂಬಾ ಬವುಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 65 ರನ್ ಬಾರಿಸಿರುವ ಬವುಮಾ ಇದೀಗ ಸೌತ್ ಆಫ್ರಿಕಾ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 14, 2025 | 11:50 AM

Share
ಟೆಸ್ಟ್ ಕ್ರಿಕೆಟ್​ನಲ್ಲಿ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಸ್ಥಿರ ಪ್ರದರ್ಶನ ನೀಡುವ ಮೂಲಕ ಎಂಬುದು ವಿಶೇಷ. ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಬವುಮಾ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

1 / 6
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 36 ರನ್ ಬಾರಿಸಿದ್ದ ಟೆಂಬಾ ಬವುಮಾ, ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 65 ರನ್​ಗಳಿಸಿ ನಾಲ್ಕನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಸತತವಾಗಿ 30+ ಸ್ಕೋರ್‌ಗಳನ್ನು ಗಳಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ದ್ವಿತೀಯ ಸ್ಥಾನದಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಕಾಣಿಸಿಕೊಂಡಿದ್ದರು. ಬಾಬರ್ ಒಟ್ಟು 8 ಬಾರಿ ಸತತ 30+ ಸ್ಕೋರ್​ಗಳಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಟೆಂಬಾ ಬವುಮಾ ಯಶಸ್ವಿಯಾಗಿದ್ದಾರೆ.

3 / 6
ಟೆಂಬಾ ಬವುಮಾ ಸತತ 9 ಇನಿಂಗ್ಸ್​ಗಳಲ್ಲಿ 30+ ಸ್ಕೋರ್​ಗಳಿಸುವ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಬ್ಯಾಟರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಟೆಡ್ ಡೆಕ್ಸ್​ಟರ್. 60ರ ದಶಕದಲ್ಲಿ ಇಂಗ್ಲೆಂಡ್ ಪರ ಟೆಸ್ಟ್ ಪಂದ್ಯಗಳನ್ನಾಡಿದ್ದ ಡೆಕ್ಸ್​ಟರ್ 11 ಪಂದ್ಯಗಳಲ್ಲಿ ಸತತ 30+ ಸ್ಕೋರ್​ಗಳಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯ ಸನಿಹಕ್ಕೆ ತಲುಪಿರುವ ಟೆಂಬಾ ಬವುಮಾ ಮುಂದಿನ ಮೂರು ಟೆಸ್ಟ್​ ಇನಿಂಗ್ಸ್​ಗಳಲ್ಲಿ 30+ ಸ್ಕೋರ್​ಗಳಿಸಿದರೆ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಬಹುದು.

5 / 6
WTC Final: ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು 207 ರನ್​ಗಳಿಗೆ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 74 ರನ್​ಗಳ ಹಿನ್ನಡೆ ಹೊಂದಿದ್ದ ಸೌತ್ ಆಫ್ರಿಕಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 282 ರನ್​ಗಳ ಗುರಿ ಪಡೆದುಕೊಂಡಿದೆ. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಸೌತ್ ಆಫ್ರಿಕಾ 2 ವಿಕೆಟ್ ಕಳೆದುಕೊಂಡು 213 ರನ್​ಗಳಿಸಿದ್ದು, ನಾಲ್ಕನೇ ದಿನದಾಟದಲ್ಲಿ 69 ರನ್​ಗಳಿಸಿದರೆ ಚಾಂಪಿಯನ್ ಪಟ್ಟ ಅಲಂಕರಿಸಬಹುದು.

6 / 6

Published On - 9:03 am, Sat, 14 June 25