AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಟೆಂಬಾ ಬವುಮಾ

Temba Bavuma World Records: ಸೌತ್ ಆಫ್ರಿಕಾ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಗೆದ್ದು ಕೊಟ್ಟ ನಾಯಕ ಟೆಂಬಾ ಬವುಮಾ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 148 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾರೂ ಸಹ ನಿರ್ಮಿಸದ ವಿಶ್ವ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 17, 2025 | 5:54 PM

Share
ಟೆಸ್ಟ್ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. ಈ 148 ವರ್ಷಗಳಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆಯೊಂದನ್ನು ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ (Temba Bavuma) ನಿರ್ಮಿಸಿದ್ದಾರೆ. ಅದು ಸಹ ಸೋಲಿಲ್ಲದ ಸರದಾರನಾಗಿ ಎಂಬುದು ವಿಶೇಷ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 30 ರನ್​ಗಳ ಜಯ ಸಾಧಿಸಿತು. ಇದು  ಟೆಂಬಾ ಬವುಮಾ ನಾಯಕತ್ವದಲ್ಲಿ ಸೌತ್ ಆಫ್ರಿಕಾ ತಂಡದ 10ನೇ ಟೆಸ್ಟ್ ಗೆಲುವು. ವಿಶೇಷ ಎಂದರೆ ಬವುಮಾ ಮುಂದಾಳತ್ವದಲ್ಲಿ 11 ಟೆಸ್ಟ್ ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ಒಂದೇ ಒಂದು ಮ್ಯಾಚ್​ನಲ್ಲಿ ಸೋತಿಲ್ಲ.

2 / 5
ಇದರೊಂದಿಗೆ ಟೆಸ್ಟ್ ಇತಿಹಾಸದಲ್ಲೇ ಒಂದೇ ಒಂದು ಟೆಸ್ಟ್​ ಪಂದ್ಯ ಸೋಲದೇ ಮೊದಲ 10 ಮ್ಯಾಚ್​ಗಳನ್ನು ಗೆದ್ದ ವಿಶ್ವದ ಮೊದಲ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ಟೆಂಬಾ ಬವುಮಾ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅತೀ ಕಡಿಮೆ ಪಂದ್ಯಗಳ ಮೂಲಕ ಮೊದಲ 10 ಗೆಲುವು ಕಂಡ ನಾಯಕನೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 5
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಇಂಗ್ಲೆಂಡ್​ನ ಬೆನ್ ಸ್ಟೋಕ್ಸ್ ಹಾಗೂ ಆಸ್ಟ್ರೇಲಿಯಾದ ಲಿಂಡೆ ಹಸ್ಸೆಟ್ ಹೆಸರಿನಲ್ಲಿತ್ತು. ಈ ಇಬ್ಬರು ಟೆಸ್ಟ್ ಕ್ರಿಕೆಟ್​ನಲ್ಲಿ ನಾಯಕರಾದ ಬಳಿಕ ಮೊದಲ 12 ಪಂದ್ಯಗಳಲ್ಲೇ 10 ಗೆಲುವು ಸಾಧಿಸಿದ್ದರು. ಇದೀಗ ಈ ದಾಖಲೆಗಳನ್ನು ಬವುಮಾ ಅಳಿಸಿ ಹಾಕಿದ್ದಾರೆ.

4 / 5
ಟೆಂಬಾ ಬವುಮಾ ಮುಂದಾಳತ್ವದಲ್ಲಿ ಈವರೆಗೆ 11 ಟೆಸ್ಟ್ ಪಂದ್ಯಗಳನ್ನಾಡಿರುವ ಸೌತ್ ಆಫ್ರಿಕಾ ತಂಡವು 10 ಗೆಲುವು ಹಾಗೂ 1 ಡ್ರಾ ಸಾಧಿಸಿದೆ. ಅಂದರೆ ಮೊದಲ 11 ಪಂದ್ಯಗಳಲ್ಲಿ ಬವುಮಾ ಸೋಲಿನ ರುಚಿಯೇ ನೋಡಿಲ್ಲ. ಹೀಗೆ ಸೋಲಿಲ್ಲದ ಸರದಾರನಾಗಿ ಟೆಸ್ಟ್ ಇತಿಹಾಸದಲ್ಲಿ ಮೊದಲ 10 ಗೆಲುವು ಕಂಡ ವಿಶ್ವದ ಏಕೈಕ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ಟೆಂಬಾ ಬವುಮಾ ನಿರ್ಮಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ