AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Test Cricket: ಸಂಡೆ ಸೆಂಚುರೀಸ್: ಒಂದೇ ದಿನ 4 ಶತಕಗಳು

Test Cricket: ಭಾನುವಾರ ನಡೆದ 3 ಟೆಸ್ಟ್ ಪಂದ್ಯಗಳಲ್ಲಿ ನಾಲ್ವರು ಆಟಗಾರರು ಶತಕ ಬಾರಿಸಿ ಮಿಂಚಿದ್ದಾರೆ. ಈ ಶತಕಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಶುಭ್​ಮನ್ ಗಿಲ್ ಸಿಡಿಸಿದ ಸೆಂಚುರಿ ಕೂಡ ಇದೆ. ಹಾಗಿದ್ರೆ ಸೂಪರ್ ಸಂಡೆಯಂದು ಶತಕ ಬಾರಿಸಿರುವ ಉಳಿದ ಮೂವರು ಬ್ಯಾಟರ್​ಗಳು ಯಾರೆಲ್ಲಾ ಎಂಬುದರ ಸಂಪೂರ್ಣ ಈ ಕೆಳಗೆ ನೀಡಲಾಗಿದೆ.

TV9 Web
| Edited By: |

Updated on: Feb 05, 2024 | 8:30 AM

Share
ಫೆಬ್ರವರಿ 4, 2024 ರಂದು ಟೆಸ್ಟ್ ಕ್ರಿಕೆಟ್​ನಲ್ಲಿ ನಾಲ್ಕು ಶತಕಗಳು ಮೂಡಿಬಂದಿವೆ. ಅದು ಕೂಡ ಮೂರು ಟೆಸ್ಟ್ ಪಂದ್ಯಗಳಲ್ಲಿ ಎಂಬುದು ವಿಶೇಷ. ಅಂದರೆ ಇತ್ತ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯವಾಡುತ್ತಿದ್ದರೆ, ಅತ್ತ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ಟೆಸ್ಟ್​ ಆಡುತ್ತಿದೆ.

1 / 6
ಹಾಗೆಯೇ ಅಫ್ಘಾನಿಸ್ತಾನ್ ಮತ್ತು ಶ್ರೀಲಂಕಾ ನಡುವೆ ಕೂಡ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಮೂರು ಪಂದ್ಯಗಳಿಂದ ಸೂಪರ್ ಸಂಡೆಯಂದೇ ಒಟ್ಟು 4 ಶತಕಗಳು ಮೂಡಿಬಂದಿವೆ. ಆ ಶತಕಗಳನ್ನು ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂಬುದರ ಮಾಹಿತಿ ಇಲ್ಲಿದೆ...

2 / 6
1- ಇಬ್ರಾಹಿಂ ಝದ್ರಾನ್: ಕೊಲಂಬೊದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ ಯುವ ಬ್ಯಾಟರ್ ಇಬ್ರಾಹಿಂ ಝದ್ರಾನ್ ಚೊಚ್ಚಲ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಝದ್ರಾನ್ 217 ಎಸೆತಗಳಲ್ಲಿ 11 ಫೋರ್​ಗಳೊಂದಿಗೆ ಅಜೇಯ 101 ರನ್ ಬಾರಿಸಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

3 / 6
2- ಕೇನ್ ವಿಲಿಯಮ್ಸನ್: ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಿವೀಸ್​ ತಂಡದ ನಾಯಕ ಕೇನ್ ವಿಲಿಯಮ್ಸನ್ ಆಕರ್ಷಕ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ 289 ಎಸೆತಗಳನ್ನು ಎದುರಿಸಿದ ಕೇನ್ 16 ಫೋರ್​ಗಳೊಂದಿಗೆ 118 ರನ್ ಬಾರಿಸಿದ್ದಾರೆ.

4 / 6
3- ರಚಿನ್ ರವೀಂದ್ರ: ನ್ಯೂಝಿಲೆಂಡ್ ತಂಡದ ಯುವ ಎಡಗೈ ದಾಂಡಿಗ ರಚಿನ್ ರವೀಂದ್ರ ಕೂಡ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ಮೊದಲ ದಿನದಾಟದಲ್ಲಿ 189 ಎಸೆತಗಳನ್ನು ಎದುರಿಸಿ 10 ಫೋರ್ ಹಾಗೂ 1 ಸಿಕ್ಸರ್​ನೊಂದಿಗೆ ಚೊಚ್ಚಲ ಟೆಸ್ಟ್ ಶತಕ ಪೂರೈಸಿದ್ದಾರೆ.

5 / 6
4- ಶುಭ್​ಮನ್ ಗಿಲ್: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಆಟಗಾರ ಶುಭ್​ಮನ್ ಗಿಲ್ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ 147 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 104 ರನ್ ಬಾರಿಸಿದ್ದಾರೆ.

6 / 6
Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ

ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​

ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ

ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ

ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ

ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ

ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ

ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ

ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ