- TV9 Kannada Photo gallery Cricket photos Indian Batsmen Double Hundreds vs Sri Lanka: Kohli, Sehwag, Tendulkar's Elite Club
IND vs SL: ಶ್ರೀಲಂಕಾ ವಿರುದ್ಧ ದ್ವಿಶತಕ ಬಾರಿಸಿರುವ ಭಾರತೀಯರಿವರು
Indian Batsmen Double Hundreds vs Sri Lanka: ಭಾರತ ತಂಡ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಕೊಲಂಬೊಗೆ ಪ್ರಯಾಣಿಸಿದೆ. ಶುಭಮನ್ ಗಿಲ್ ನಾಯಕತ್ವದಲ್ಲಿ ತಂಡ ಉತ್ತಮ ಫಾರ್ಮ್ನಲ್ಲಿದೆ. ಈ ಸರಣಿ WTC ಫೈನಲ್ಗೆ ನಿರ್ಣಾಯಕ. ಆದರೆ, ಶ್ರೀಲಂಕಾ ವಿರುದ್ಧ ಟೆಸ್ಟ್ನಲ್ಲಿ ದ್ವಿಶತಕ ಬಾರಿಸಿದ ಕೇವಲ ಮೂವರು ಭಾರತೀಯ ಬ್ಯಾಟ್ಸ್ಮನ್ಗಳಿದ್ದಾರೆ. ವಿರಾಟ್ ಕೊಹ್ಲಿ, ವೀರೇಂದ್ರ ಸೆಹ್ವಾಗ್ ಮತ್ತು ಸಚಿನ್ ತೆಂಡೂಲ್ಕರ್ ಈ ಎಲೈಟ್ ಪಟ್ಟಿಯಲ್ಲಿದ್ದಾರೆ
Updated on: Aug 05, 2026 | 7:46 PM

ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡ ಕೊಲಂಬೊಗೆ ಪ್ರಯಾಣ ಬೆಳೆಸಿದೆ. 2025-27 ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಲು ಈ ಸರಣಿ ನಿರ್ಣಾಯಕವಾಗಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಆಗಸ್ಟ್ 15, 2026 ರಂದು ಪ್ರಾರಂಭವಾಗಲಿದೆ. ಅದಕ್ಕೂ ಮೊದಲು, ಶುಭಮನ್ ಗಿಲ್ ನೇತೃತ್ವದ ತಂಡವು ಶ್ರೀಲಂಕಾದ XI ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ(PC-PTI).

ಟೆಸ್ಟ್ ತಂಡದ ನಾಯಕನಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಗಿಲ್ ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಅವರು ಒಂದು ದ್ವಿಶತಕ ಮತ್ತು 5 ಶತಕಗಳನ್ನು ಗಳಿಸಿದ್ದಾರೆ. ಆದಾಗ್ಯೂ, ಟೆಸ್ಟ್ ಪಂದ್ಯಗಳಲ್ಲಿ ಶ್ರೀಲಂಕಾ ವಿರುದ್ಧ ಕೇವಲ 3 ಭಾರತೀಯ ಬ್ಯಾಟ್ಸ್ಮನ್ಗಳು ದ್ವಿಶತಕಗಳನ್ನು ಬಾರಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ. ಹಾಗಿದ್ದರೆ ಉಳಿದ ಇಬ್ಬರು ಯಾರು ಎಂಬುದನ್ನು ನೋಡುವುದಾದರೆ(PC-PTI)..

ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಇನ್ನಿಂಗ್ಸ್ ಆಡಿದ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದೆ. 2009 ರಲ್ಲಿ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಸೆಹ್ವಾಗ್ ಅತ್ಯಧಿಕ 293 ರನ್ಗಳ ಇನ್ನಿಂಗ್ಸ್ ಆಡಿದ್ದರು. ವಿರಾಟ್ ಕೊಹ್ಲಿಯಂತೆಯೇ, ಸೆಹ್ವಾಗ್ ಕೂಡ ಶ್ರೀಲಂಕಾ ವಿರುದ್ಧ 2 ದ್ವಿಶತಕಗಳನ್ನು ಸಿಡಿಸಿದ್ದಾರೆ. 2008 ರಲ್ಲಿ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಔಟಾಗದೆ 201 ರನ್ ಕಲೆಹಾಕಿದ್ದರು(PC-PTI).

2025ರಲ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ ಕೊಹ್ಲಿ, ಶ್ರೀಲಂಕಾ ವಿರುದ್ಧ ಎರಡು ಟೆಸ್ಟ್ ದ್ವಿಶತಕಗಳನ್ನು ಬಾರಿಸಿದ್ದಾರೆ. 2017ರ ನವೆಂಬರ್ನಲ್ಲಿ ನಾಗ್ಪುರದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 213 ರನ್ ಬಾರಿಸಿದ್ದ ವಿರಾಟ್ ಮುಂದಿನ ಟೆಸ್ಟ್ ಪಂದ್ಯದಲ್ಲಿಯೂ ಮತ್ತೊಂದು ದ್ವಿಶತಕ ಬಾರಿಸಿದ್ದರು. ದೆಹಲಿಯಲ್ಲಿ ನಡೆದ ಆ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ 243 ರನ್ ಸಿಡಿಸಿದ್ದರು(PC-PTI).

ಕ್ರಿಕೆಟ್ ದೇವರು ಎಂದೇ ಖ್ಯಾತರಾದ ಸಚಿನ್ ತೆಂಡೂಲ್ಕರ್, ಜುಲೈ 2010 ರಲ್ಲಿ ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಅದ್ಭುತ 203 ರನ್ಗಳ ಇನ್ನಿಂಗ್ಸ್ ಆಡಿದ್ದರು. ಈ ದ್ವಿಶತಕದ ಇನ್ನಿಂಗ್ಸ್ನಲ್ಲಿ ಸಚಿನ್ 23 ಬೌಂಡರಿ ಮತ್ತು 1 ಸಿಕ್ಸರ್ ಕೂಡ ಬಾರಿಸಿದ್ದರು(PC-PTI).




